5 ಸಾವಿರ ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ
ಮಂಡ್ಯ

5 ಸಾವಿರ ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ

February 28, 2019

ಮಂಡ್ಯ: ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ 5 ಸಾವಿರ ಕೋಟಿ ರೂ.ಗಳ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದ್ದು, ಮನೆಯ ಮಗನಾಗಿ ಮಂಡ್ಯದ ಜನತೆಯ ಋಣ ತೀರಿಸಲು ಪ್ರಯತ್ನಿಸಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನುಡಿದರು.

ನಗರದ ಸರ್ಕಾರಿ ಮಹಾವಿದ್ಯಾಲಯದ ಆವರಣದಲ್ಲಿಂದು ನಡೆದ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಇಂದು ಅಧಿಕೃತವಾಗಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದು, ಇನ್ನೂ ಹೆಚ್ಚಿನ ಅನು ದಾನ ನೀಡುವ ಮೂಲಕ ಮಂಡ್ಯವನ್ನು ಮಾದರಿ ಜಿಲ್ಲೆಯಾಗಿ ರೂಪಿಸುವುದಾಗಿ ತಿಳಿಸಿದರಲ್ಲದೆ, ಕೇವಲ ಮಂಡ್ಯ ಅಭಿವೃದ್ಧಿಗೆ ಮಾತ್ರ ಒತ್ತು ನೀಡಿಲ್ಲ. ನಾನು ಯಾವುದೋ ಒಂದು ಭಾಗಕ್ಕೆ ಮಾತ್ರ ಮುಖ್ಯಮಂತ್ರಿಯಲ್ಲ. ಇಡೀ ನಾಡಿನ ಮುಖ್ಯಮಂತ್ರಿಯಾ ಗಿದ್ದು, ಇಡೀ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಪ್ರಯತ್ನ ಮಾಡುತ್ತಿದ್ದೇನೆ ಎಂದು ಹೇಳಿದರು.

ಮೈಸೂರು ಸಕ್ಕರೆ ಕಾರ್ಖಾನೆಯ ಪುನ ಶ್ಚೇತನಕ್ಕಾಗಿ ಹಿಂದೆ ಎಲ್ಲಾ ಸರ್ಕಾರಗಳು 340 ಕೋಟಿ ರೂ. ನೀಡಿವೆ. ಈ ಹಿನ್ನೆಲೆಯಲ್ಲಿ ಪುನಶ್ಚೇತನ ಮಾಡುವುದನ್ನು ಬಿಟ್ಟು ಸುಮಾರು 450 ಕೋಟಿ ರೂ.ಗಳಲ್ಲಿ ಹೊಸ ಕಾರ್ಖಾನೆ ಸ್ಥಾಪಿಸಲು ನಿರ್ಧರಿ ಸಿದ್ದು, ಬರುವ ಏಪ್ರಿಲ್ ಅಥವಾ ಮೇ ಮೊದಲ ವಾರದಲ್ಲಿ ಶಂಕುಸ್ಥಾಪನೆ ಮಾಡ ಲಾಗುವುದು. ಅದಕ್ಕಾಗಿ ಮೊದಲ ಹಂತ ದಲ್ಲಿ 100 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಪಿಎಸ್‍ಎಸ್‍ಕೆ ಕಾರ್ಖಾನೆಯ ಮೇಲೆ 42 ಸಾವಿರ ಕೋಟಿ ರೂ. ಸಾಲ ಇದೆ. ಅದನ್ನೂ ಸಹ ಪ್ರಾರಂಭಿಸಲು ಅಧಿಕಾರಿ ಗಳ ಜೊತೆ ಸಭೆ ನಡೆಸಿ, ಜಿಲ್ಲಾಧಿಕಾರಿ ಗಳಿಗೆ ಸೂಚಿಸಿದ್ದೇನೆ. ನಿಮ್ಮ ಆಶೀರ್ವಾದ ದಿಂದ ಮುಖ್ಯಮಂತ್ರಿಯಾಗಿ ಇಂದು ಜಿಲ್ಲೆಯ ಅಭಿವೃದ್ಧಿಗೆ ಚಾಲನೆ ನೀಡಿದ್ದೇನೆ. ಜಿಲ್ಲೆಯ ಅಭಿವೃದ್ಧಿ ಬಗ್ಗೆ ನನ್ನ ಹೃದಯ ದಲ್ಲಿ ಗುರಿ ಇಟ್ಟುಕೊಂಡಿದ್ದೇನೆ. ನನ್ನ ಉಸಿ ರಿರುವವರೆಗೂ ಜಿಲ್ಲೆಯ ಅಭಿವೃದ್ಧಿಗೆ ಒತ್ತು ನೀಡುತ್ತೇನೆ ಎಂದು ಒತ್ತಿ ಹೇಳಿದರು.

ಅಪ್ಪನ ಆಸೆ ಬಿಚ್ಚಿಟ್ಟ ಹೆಚ್.ಡಿ.ಕೆ: ಈ ಬಾರಿ ಕನ್ನಡಿಗರೊಬ್ಬರು ಪ್ರಧಾನಿ ಯಾಗೋ ಅವಕಾಶ ಇದ್ದು, ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮನವಿ ಮಾಡಿದ ಹೆಚ್.ಡಿ.ಕುಮಾರಸ್ವಾಮಿ, ಆ ಮೂಲಕ ಮತ್ತೊಮ್ಮೆ ಪ್ರಧಾನಿಯಾಗಬೇಕೆಂಬ ಅಪ್ಪನ ಆಸೆಯನ್ನು ಬಿಚ್ಚಿಟ್ಟರು.

1996ರಲ್ಲಿ ಕರ್ನಾಟಕದಲ್ಲಿ 16 ಸ್ಥಾನ ಗೆದ್ದಾಗ ಹೆಚ್.ಡಿ.ದೇವೇಗೌಡರು ಪ್ರಧಾನಿಯಾಗಿದ್ದರು.

ಇಂದು ಸಹ ಅದೇ ರೀತಿ ವಾತಾವರಣ ಈ ರಾಜ್ಯದಲ್ಲಿದೆ. ಈ ಬಾರಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಲ್ಲಿ 20-22 ಸ್ಥಾನ ಗೆದ್ದರೆ, ಮತ್ತೊಮ್ಮೆ ದೆಹಲಿಯಲ್ಲಿ ಕನ್ನಡಿಗನ ಧ್ವನಿ ಏಳಲಿದೆ ಎನ್ನುವ ಮೂಲಕ ದೇವೇಗೌಡರನ್ನು ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಎಂದು ಪರೋಕ್ಷವಾಗಿ ಉಲ್ಲೇಖಿಸಿದರು.

ಪ್ರಧಾನಿ ವಿರುದ್ಧ ಸಿಎಂ ವಾಗ್ದಾಳಿ: ನಮ್ಮ ತಂದೆ ಪ್ರಧಾನಿಯಾಗಿದ್ದ ವೇಳೆ ಯಾವುದೇ ಅವಘಡಗಳು ನಡೆದಿಲ್ಲ. ಆದರೆ ಈಗ ಪದೇಪದೆ ಇಂತಹ ಭಯೋತ್ಪಾದಕ ದಾಳಿಗಳು ನಡೀತಿವೆ. ಪ್ರಧಾನಿಯಾದವರು ಕೇವಲ ಮನ್ ಕೀ ಬಾತ್ ಮೂಲಕ ಪ್ರಚಾರ ಪಡೆಯುತ್ತಿದ್ದಾರೆ. ಸಣ್ಣ ವಿಚಾರ ಗಳನ್ನು ದೊಡ್ಡದು ಮಾಡುವ ಮೂಲಕ ಮಾಧ್ಯಮಗಳನ್ನು ಬಳಸಿಕೊಂಡು ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿ ಯಿಂದ ಇಂದು ಅಧಿಕೃತವಾಗಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದ್ದೇನೆ, ಇನ್ನೂ ಹೆಚ್ಚಿನ ಅನುದಾನ ನೀಡುವ ಮೂಲಕ ಮಂಡ್ಯವನ್ನು ಮಾದರಿ ಜಿಲ್ಲೆಯಾಗಿ ರೂಪಿಸುವುದರೊಂದಿಗೆ ಇಡೀ ರಾಜ್ಯವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯುವ ಪ್ರಯತ್ನ ಮಾಡುತ್ತಿದ್ದೇನೆ ಎಂದು ಹೇಳಿದರು.

ಪಕ್ಷದ ಅಭ್ಯರ್ಥಿ ಗೆಲ್ಲಿಸಿ: ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಮಾತನಾಡಿ, ಕಳೆದ ಚುನಾ ವಣೆಯಲ್ಲಿ ಜಿಲ್ಲೆಯಲ್ಲಿ ಜೆಡಿಎಸ್‍ಗೆ 7ಕ್ಕೆ 7 ಕ್ಷೇತ್ರ ಕೊಟ್ಟವರು ಮುಂದಿನ ಚುನಾವಣೆ ಯಲ್ಲಿಯೂ ಕೈ ಹಿಡಿಯಬೇಕು. ಜಿಲ್ಲೆಯ ಅಭಿವೃದ್ಧಿಗಾಗಿ ಸರ್ಕಾರ 5 ಸಾವಿರ ಕೋಟಿ ರೂ. ಕೊಟ್ಟಿದೆ. ಮುಂದೆಯೂ ಅಭಿವೃದ್ಧಿಗಾಗಿ ಜೆಡಿಎಸ್ ಗೆಲ್ಲಿಸುವಂತೆ ಮನವಿ ಮಾಡಿದರು.

ನಿಖಿಲ್ ಗೆಲ್ಲಿಸಿ: ಸಂಸದ ಎಲ್.ಆರ್. ಶಿವರಾಮೇಗೌಡ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ನನಗೆ ಟಿಕೆಟ್ ಕೊಡದಿದ್ದರೂ ಬೇಜಾರಿಲ್ಲ. ಪಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನೇ ಅಭ್ಯರ್ಥಿ ಮಾಡಲಿ. ನಿಖಿಲ್ ಅವರನ್ನೇ ಗೆಲ್ಲಿಸಿ ಎಂದು ಮನವಿ ಮಾಡಿದರಲ್ಲದೆ, ನಾನು ಕೊನೆವರೆಗೂ ಹೆಚ್‍ಡಿಕೆ ಜೊತೆ ಇರುತ್ತೇನೆ ಈ ಮೊದಲು ಜಿಲ್ಲೆಯನ್ನು ಆಳಿದವರು ಜಿಲ್ಲೆಗೆ ಏನೂ ಮಾಡಲಿಲ್ಲ. ಆದರೆ ನಮ್ಮ ಕುಮಾರಣ್ಣ ಜಿಲ್ಲೆಯ ಅಭಿವೃದ್ಧಿಗೆ ಪಣ ತೊಟ್ಟಿದ್ದಾರೆ. ಮೈತ್ರಿ ಸರ್ಕಾರ ದಲ್ಲಿ ನಮ್ಮ ಸಿಎಂಗೆ ಹಲವಾರು ರೀತಿಯ ತೊಂದರೆ ಗಳನ್ನು ಕೊಟ್ಟಿದ್ದಾರೆ. ಅವೆಲ್ಲವನ್ನು ಮೀರಿ ನಮ್ಮ ಸಿಎಂ ಜಿಲ್ಲೆಯ ಅಭಿವೃದ್ಧಿಗಾಗಿ ದುಡಿಯುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ಲೋಕಸಭೆಯಲ್ಲಿ ಗೆಲ್ಲುವ ಕ್ಷೇತ್ರ ಜೆಡಿಎಸ್‍ಗೆ ಬಿಟ್ಟುಕೊಡಿ ಎಂದು ಕೈ ನಾಯಕರನ್ನು ಆಗ್ರಹಿಸಿದರು.

ಮಂಡ್ಯ ಕ್ಷೇತ್ರದ ಶಾಸಕ ಎಂ.ಶ್ರೀನಿವಾಸ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಚಿವರಾದ ಸಿ.ಎಸ್. ಪುಟ್ಟ ರಾಜು, ಜಿ.ಟಿ.ದೇವೇಗೌಡ, ಸಾ.ರಾ. ಮಹೇಶ್, ವಿಧಾನ ಪರಿಷತ್ ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ, ಶಾಸಕ ರಾದ ಕೆ.ಸುರೇಶ್‍ಗೌಡ, ಕೆ.ಸಿ.ನಾರಾಯಣ ಗೌಡ, ಡಾ.ಕೆ.ಅನ್ನದಾನಿ, ಜಿಲ್ಲಾ ಪಂಚಾ ಯಿತಿ ಅಧ್ಯಕ್ಷೆ ನಾಗರತ್ನ ಸ್ವಾಮಿ, ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Translate »