ಪ್ರತಿ ಲೋಕಸಭಾ ಕ್ಷೇತ್ರದಲ್ಲಿ 50 ಸಾವಿರದಿಂದ ಲಕ್ಷ ಮಂದಿ ಮತದಾರರ ಹೆಸರು ನಾಪತ್ತೆ ಕೋರ್ಟ್ ಮೊರೆ ಹೋಗಲು ಬಿಜೆಪಿ ನಿರ್ಧಾರ
ಮೈಸೂರು

ಪ್ರತಿ ಲೋಕಸಭಾ ಕ್ಷೇತ್ರದಲ್ಲಿ 50 ಸಾವಿರದಿಂದ ಲಕ್ಷ ಮಂದಿ ಮತದಾರರ ಹೆಸರು ನಾಪತ್ತೆ ಕೋರ್ಟ್ ಮೊರೆ ಹೋಗಲು ಬಿಜೆಪಿ ನಿರ್ಧಾರ

April 20, 2019

ಬೆಂಗಳೂರು: ಪ್ರತಿ ಲೋಕಸಭಾ ಕ್ಷೇತ್ರದಲ್ಲಿ 50 ಸಾವಿರ ದಿಂದ ಒಂದು ಲಕ್ಷದವ ರೆಗೂ ಮತದಾರರ ಹೆಸರು ಅಳಿಸಲಾಗಿದೆ ಎಂದು ರಾಜ್ಯ ಬಿಜೆಪಿ ಇಂದಿಲ್ಲಿ ಆರೋಪ ಮಾಡಿದೆ.

ರಾಜ್ಯದ 14 ಲೋಕ ಸಭಾ ಕ್ಷೇತ್ರಗಳಿಗೆ ನಿನ್ನೆ ನಡೆದ ಚುನಾವಣೆಯ ಮರುದಿನವೇ ಈ ಅಪಸ್ವರ ಎತ್ತಿರುವ ಬಿಜೆಪಿ ಈ ಬಗ್ಗೆ ನ್ಯಾಯಾಲಯದ ಮೊರೆ ಹೋಗು ವುದಾಗಿ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್, ಸ್ಥಳೀಯ ಸಂಸ್ಥೆಗಳು ಬೃಹತ್ ಪ್ರಮಾಣದಲ್ಲಿ ಮತದಾರರ ಹೆಸರನ್ನು ಅಳಿಸಿ ಹಾಕಿವೆ ಎಂದರು. ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಮೂರು ಕ್ಷೇತ್ರಗಳಲ್ಲಂತೂ ಭಾರೀ ಪ್ರಮಾಣದಲ್ಲಿ ಹೆಸರುಗಳು ನಾಪತ್ತೆಯಾಗಿವೆ. ರಾಜ್ಯ ಸರ್ಕಾರದ ಹಸ್ತಕ್ಷೇಪವಿಲ್ಲದೆ, ಈ ಪ್ರಮಾಣದಲ್ಲಿ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲು ಸಾಧ್ಯವೇ ಇಲ್ಲ ಎಂದು ದೂರಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡಿದವರ ಹೆಸರು ಒಂದು ವರ್ಷದಲ್ಲೇ ಈ ನಾಪತ್ತೆ ಯಾಗಿವೆ ಎಂದರೆ ಏನು ಅರ್ಥ? ಎಂದು ಪ್ರಶ್ನಿಸಿದರು. ನಮ್ಮ ಪಕ್ಷ ಯಾವ ಕೇಂದ್ರಗಳಲ್ಲಿ ಪ್ರಬಲವಾಗಿದೆಯೋ ಅಂತಹ ಕಡೆ ಹೆಸರುಗಳು ನಾಪತ್ತೆಯಾಗಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಪಕ್ಷವಷ್ಟೇ ಅಲ್ಲದೆ ಸಾರ್ವಜನಿಕರು ಕೋರ್ಟ್ ಮೊರೆ ಹೋಗಿ ನ್ಯಾಯ ಪಡೆದುಕೊಳ್ಳಬಹುದಾಗಿದೆ. ರಾಜ್ಯದಲ್ಲಿ ಪೂರ್ಣ ಪ್ರಮಾಣ ದಲ್ಲಿ ಚುನಾವಣೆ ಮುಗಿದ ನಂತರ ನ್ಯಾಯಾಲಯಕ್ಕೆ ಹೋಗುವ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಉರುಳಿಸಲು ನಾವು ಟೈಮ್ ಬಾಂಬ್ ಇಟ್ಟಿಲ್ಲ. ಈ ಮೈತ್ರಿ ಸರ್ಕಾರ ಪತನಗೊಳಿ ಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಟೈಮ್ ಬಾಂಬ್ ಇಟ್ಟಿದ್ದಾರೆ. ಅವರು ಯಾವಾಗ ಬಯ ಸುತ್ತಾರೋ ಬಾಂಬ್ ಸಿಡಿಯುತ್ತೇ, ಸರ್ಕಾರ ಪತನ ಗೊಳ್ಳುತ್ತದೆ ಎಂದು ಭವಿಷ್ಯ ನುಡಿದರು. ಮತದಾರರು ಅತ್ಯಂತ ಹುರುಪಿನಿಂದ ಮತ ಚಲಾವಣೆ ಮಾಡಿರುವು ದರಿಂದಲೇ ನಿನ್ನೆ ನಡೆದ ಚುನಾವಣೆಯಲ್ಲಿ ಭಾರೀ ಮತದಾನವಾಗಿದೆ. ಎರಡನೇ ಹಂತದಲ್ಲಿ ಚುನಾವಣೆ ನಡೆಯುವ 14 ಕ್ಷೇತ್ರಗಳಲ್ಲೂ ನಾವು ಇಂದಿನಿಂದಲೇ ಚುನಾವಣಾ ಪ್ರಚಾರ ಕೈಗೊಳ್ಳುವುದಾಗಿ ತಿಳಿಸಿದರು.

Translate »