ಭಾರತದಲ್ಲಿ ಒಂದೇ ದಿನ 5,609 ಸೋಂಕು: 132 ಮಂದಿ ಸಾವು
ಮೈಸೂರು

ಭಾರತದಲ್ಲಿ ಒಂದೇ ದಿನ 5,609 ಸೋಂಕು: 132 ಮಂದಿ ಸಾವು

May 22, 2020

ನವದೆಹಲಿ, ಮೇ 21- ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 5,609 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 132 ಮಂದಿ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ

ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಈ ಮೂಲಕ ದೇಶದಲ್ಲಿ ಬಲಿಯಾದವರ ಸಂಖ್ಯೆ 3435ಕ್ಕೆ ಏರಿಕೆಯಾಗಿದ್ದು, ಸೋಂಕಿತರ ಸಂಖ್ಯೆ 1,12,359ಕ್ಕೆ ತಲುಪಿದೆ.

ಇದೇ ವೇಳೆ 1,12,359 ಮಂದಿ ಸೋಂಕಿತರ ಪೈಕಿ 48,735 ಮಂದಿ ಸೋಂಕಿನಿಂದ ಗುಣಮುಖರಾಗಿ, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇನ್ನೂ ದೇಶದಲ್ಲಿ 63624 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಇನ್ನು ದೇಶದಲ್ಲಿ ಅತೀ ಹೆಚ್ಚು ಸೋಂಕು ಕಂಡು ಬಂದಿರುವ ಮಹಾರಾಷ್ಟ್ರದಲ್ಲಿ ಸತತ 4ನೇ ದಿನವೂ 2000ಕ್ಕಿಂತ ಹೆಚ್ಚಿನ ಕೇಸು ಬೆಳಕಿಗೆ ಬಂದಿದೆ.

ಬುಧವಾರ ರಾಜ್ಯದಲ್ಲಿ 2250 ಹೊಸ ಪ್ರಕರಣದೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 39297ಕ್ಕೆ ತಲುಪಿದೆ. ಜೊತೆಗೆ 65 ಜನ ಒಂದೇ ದಿನ ಸಾವನ್ನಪ್ಪಿದ್ದು, ಒಟ್ಟಾರೆ ಸಾವಿನಸಂಖ್ಯೆ 1390ಕ್ಕೆ ಮುಟ್ಟಿದೆ. ಉಳಿದಂತೆ ತಮಿಳುನಾಡಿನಲ್ಲಿ 743 ಕೇಸು, 3 ಸಾವು, ದೆಹಲಿಯಲ್ಲಿ 534 ಕೇಸು, 10 ಸಾವು, ಗುಜರಾತ್ ರಾಜ್ಯದಲ್ಲಿ 398 ಕೇಸು, 30 ಸಾವು, ಮಧ್ಯಪ್ರದೇಶದಲ್ಲಿ 270 ಸೋಂಕು, 9 ಮಂದಿ ಸಾವು ದಾಖಲಾಗಿದೆ.

Translate »