ಹರ್ಷ ಹತ್ಯೆ ಸಂಬಂಧ 6 ಮಂದಿ ಬಂಧನ
News

ಹರ್ಷ ಹತ್ಯೆ ಸಂಬಂಧ 6 ಮಂದಿ ಬಂಧನ

February 23, 2022

ಶಿವಮೊಗ್ಗ, ಫೆ. 22- ಬಜರಂಗದಳ ಕಾರ್ಯ ಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 6 ಮಂದಿ ಆರೋಪಿಗಳನ್ನು ಬಂಧಿ ಸಲಾಗಿದೆ. ಈ ಕುರಿತು ಶಿವಮೊಗ್ಗ ದಲ್ಲಿ ಎಸ್‍ಪಿ ಬಿ.ಎಂ.ಲಕ್ಷ್ಮೀಪ್ರಸಾದ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ನಿನ್ನೆ ಪ್ರಕರಣಕ್ಕೆ ಸಂಬಂಧಿ ಸಿ ದಂತೆ ಆರೋಪಿಗಳಾದ ಕಾಸಿಮ್, ನದೀಮ್ ಬಂಧಿಸ ಲಾಗಿತ್ತು. ಉಳಿದ ನಾಲ್ವರು ಆರೋಪಿಗಳನ್ನು ಇಂದು ಬಂಧಿಸಲಾಗಿದೆ. ಬಂಧಿತ ಆರೋಪಿಗಳೆಲ್ಲರೂ ಶಿವಮೊಗ್ಗ ನಗರದ ನಿವಾಸಿಗಳು. ಪ್ರಕರಣದಲ್ಲಿ ಈವರೆಗೆ 6 ಆರೋಪಿಗಳನ್ನು ಬಂಧಿಸಲಾಗಿದೆ. ಇದುವರೆಗೆ 13 ಎಫ್‍ಐಆರ್ ದಾಖಲಾಗಿವೆ ಎಂದು ಅವರು ಹೇಳಿದರು.
ಹರ್ಷ ಹತ್ಯೆ ಪ್ರಕರಣದ ಬಗ್ಗೆ ಇನ್ನೂ ತನಿಖೆ ಮಾಡಲಾಗುತ್ತಿದೆ. ಎ1, ಎ2 ಆರೋಪಿಗಳನ್ನು ಶಿವಮೊಗ್ಗದಲ್ಲೇ ಬಂಧಿಸಲಾಯಿತು. ನಿನ್ನೆ ಗಲಾಟೆ ವೇಳೆ ಗಾಯಗೊಂಡಿದ್ದಾಗಿ 8 ಜನರಿಂದ ದೂರು ದಾಖಲಿಸಲಾಗಿದ್ದು, 18 ವಾಹನಗಳ ಮೇಲೆ ದಾಳಿ ನಡೆಸಿ ಬೆಂಕಿಯನ್ನೂ ಹಚ್ಚಿದ್ದಾರೆ. ಸದ್ಯ ಶಿವಮೊಗ್ಗ ದಲ್ಲಿ 2 ಸಾವಿರ ಪೆÇಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ. ಆರು ಮಂದಿ ಆರೋಪಿಗಳ ಹೆಸರು ಬಹಿರಂಗ: ಹರ್ಷ ಹತ್ಯೆ ಪ್ರಕರಣದಲ್ಲಿ 6 ಆರೋಪಿಗಳನ್ನು ಬಂಧಿಸಲಾ ಗಿದ್ದು, ಈ ಪೈಕಿ ಎ1 ಮೊಹ ಮ್ಮದ್ ಕಾಸಿಫ್, ಎ2 ಸೈಯದ್ ನದೀಮ್, ಎ3 ಆಸಿಫ್ ಉಲ್ಲಾ ಖಾನ್, ಎ4 ರಿಹಾನ್ ಷರೀಫ್, ಎ5 ನಿಹಾನ್, ಎ6 ಅಬ್ದುಲ್ ಅಫ್ನಾನ್‍ನನ್ನು ಬಂಧಿಸಲಾಗಿದೆ ಎಂದು ಎಸ್‍ಪಿ ಬಿ.ಎಂ.ಲಕ್ಷ್ಮೀಪ್ರಸಾದ್ ಹೇಳಿದರು. ಎಲ್ಲಾ 6 ಆರೋಪಿಗಳನ್ನು ಶಿವಮೊಗ್ಗದಲ್ಲೇ ಬಂಧಿ ಸಲಾಗಿದ್ದು, ಬಂಧಿತ ಆರೋಪಿಗಳ ಪೈಕಿ ನಾಲ್ವರಿಗೆ ಕ್ರಿಮಿನಲ್ ಹಿನ್ನೆಲೆಯಿದೆ. ಗಲಭೆಯಲ್ಲಿ ಭಾಗಿಯಾಗಿದ್ದ ಅಪರಾಧ ಹಿನ್ನೆಲೆ ಹೊಂದಿದ್ದಾರೆ ಎಂದು ಹೇಳಿದರು. ಇಬ್ಬರಿಗೆ ನ್ಯಾಯಾಂಗ ಬಂಧನ: ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಾಲ್ಕು ಜನರ ಬಂಧನವಾಗಿದ್ದು, ಖಾಸಿಫ್ ಮತ್ತು ನದೀಮ್ ಇಬ್ಬರನ್ನು ನ್ಯಾಯಾಂಗ ಬಂಧನದಲ್ಲಿಡ ಲಾಗಿದೆ. ಉಳಿದ ನಾಲ್ವರು ಆರೋಪಿಗಳ ವಿಚಾರಣೆ ನಡೆಯುತ್ತಿದೆ. ಪ್ರಕರಣದಲ್ಲಿ ಇನ್ನೂ ಅನೇಕರು ಇದ್ದಾರೆ. ತನಿಖೆ ಮುಂದುವರೆದಿದೆ. ಇನ್ನೂ ಬಂಧನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಿದರು. ಹರ್ಷ ಕೊಲೆಯಾದ 4 ಗಂಟೆಯಲ್ಲೇ ಆರೋಪಿ ಗಳ ಬಂಧನ: ಹರ್ಷ ಹತ್ಯೆಯಾದ 4 ಗಂಟೆಯಲ್ಲೇ ಪೆÇಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗದ ಕ್ಲಾರ್ಕ್ ಪೇಟೆಯಲ್ಲಿ ಪೆÇಲೀಸರು ಭಾನುವಾರ ರಾತ್ರಿಯೇ ಒಬ್ಬ ಆರೋಪಿಯನ್ನು ಬಂಧಿಸಿದ್ದು, ಪೆÇಲೀಸರು ಈ ಪ್ರಕರಣದ ಸಂಬಂಧ ಇದುವರೆಗೆ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗದಲ್ಲಿ ಹರ್ಷ ಹತ್ಯೆ ಖಂಡಿಸಿ ಹಿಂಸಾ ಚಾರಕ್ಕೆ ತಿರುಗಿತ್ತು. ಉದ್ರಿಕ್ತರು ಹಲವೆಡೆ ಕಲ್ಲು ತೂರಾಟ ನಡೆಸಿ ವಾಹನಗಳಿಗೆ ಬೆಂಕಿ ಹಚ್ಚಿದ್ದರು.

Translate »