ಸೆಪ್ಟೆಂಬರ್, ಅಕ್ಟೋಬರ್‍ನಲ್ಲಿ 6 ಕಡೆ ಬಿಜೆಪಿ ಬೃಹತ್ ರ್ಯಾಲಿ
News

ಸೆಪ್ಟೆಂಬರ್, ಅಕ್ಟೋಬರ್‍ನಲ್ಲಿ 6 ಕಡೆ ಬಿಜೆಪಿ ಬೃಹತ್ ರ್ಯಾಲಿ

August 30, 2022

ಬೆಂಗಳೂರು, ಆ.29 (ಕೆಎಂಶಿ)- ಮುಂಬರುವ ವಿಧಾನ ಸಭಾ ಚುನಾವಣೆ ಯನ್ನು ಗಮನದಲ್ಲಿ ಟ್ಟುಕೊಂಡು ಪಕ್ಷ ಸಂಘಟನೆ, ಪ್ರವಾಸ, ಜನಸಂಪರ್ಕ ಕಾರ್ಯಕ್ರಮಗಳನ್ನು ಬಿಜೆಪಿ ಹಮ್ಮಿ ಕೊಂಡಿದ್ದು, ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಅವರನ್ನು ಈ ತಂಡದಿಂದ ಕೈಬಿಡಲಾಗಿದೆ.

ಚುನಾವಣಾ ತಯಾರಿಗೆ ಸಂಬಂಧಿ ಸಿದಂತೆ ಚರ್ಚೆ ನಡೆಸಲು ಪಕ್ಷದ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ದೆಹಲಿಗೆ ಕರೆಸಿಕೊಂಡಿದ್ದ ಬಿಜೆಪಿ ವರಿಷ್ಠರು, ಅಲ್ಲಿಯೇ ಜನಸಂಘಟನೆ ಸೇರಿದಂತೆ ಹಲವು ಕಾರ್ಯ ಕ್ರಮಗಳನ್ನು ರೂಪಿಸಿ, ಇದರ ಹೊಣೆ ಗಾರಿಕೆಯನ್ನು ಯಾರು ಹೊರಬೇಕೆಂದು ಅವರಿಗೆ ತಿಳಿಸಿದ್ದಾರೆ. ಚುನಾವಣಾ ಪೂರ್ವ ಭಾವಿ ತಯಾರಿಗಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ನೇತೃತ್ವವನ್ನು ರಾಜ್ಯ ಉಸ್ತುವಾರಿ ಹೊಣೆ ಹೊತ್ತ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‍ಸಿಂಗ್, ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಹಾಗೂ ಬಿ.ಎಸ್. ಯಡಿಯೂರಪ್ಪ ಅವರ ಹೆಗಲಿಗೆ ಹಾಕಿದೆ. ಇದಕ್ಕೂ ಮೊದಲು ತಿರುಪತಿ ಯಲ್ಲಿ ನಡೆದ ಚುನಾವಣಾ ತಯಾರಿ ಸಭೆಯಲ್ಲಿ ಮುಖ್ಯಮಂತ್ರಿಯವರು, ಯಡಿಯೂರಪ್ಪ ಹಾಗೂ ಕಟೀಲ್ ನೇತೃತ್ವದಲ್ಲಿ ಪ್ರವಾಸ ಕೈಗೊಳ್ಳುವ ತೀರ್ಮಾನಕ್ಕೆ ರಾಜ್ಯ ಬಿಜೆಪಿಯಲ್ಲೂ ಸಮ್ಮತಿ ದೊರೆತಿತ್ತು.

ಆದರೆ ಏಕಾಏಕಿ ಮುಖ್ಯಮಂತ್ರಿಯವರನ್ನು ಇದರಿಂದ ಕೈಬಿಡಲಾಗಿದೆ. ಸಂಘಟನೆಯಿಂದ ಬೊಮ್ಮಾಯಿ ಅವರನ್ನು ದೂರವಿರಿಸಿರುವುದು ಬಿಜೆಪಿ ವಲಯದಲ್ಲಿ ಭಾರೀ ಚರ್ಚೆಗೆ ಎಡೆಮಾಡಿದೆ. ದೆಹಲಿಯಿಂದ ಹಿಂತಿರುಗಿದ ನಂತರ ಯಡಿಯೂರಪ್ಪ ಅವರನ್ನು ಇಂದು ಬೆಳಗ್ಗೆ ಅವರ ನಿವಾಸದಲ್ಲಿ ಬೊಮ್ಮಾಯಿ ಅವರು ಭೇಟಿ ಮಾಡಿದ ನಂತರ ಈ ಮಾಹಿತಿ ಅವರಿಗೆ ಲಭ್ಯವಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೀಡಿರುವ ಸಂದೇಶವನ್ನು ಯಡಿಯೂರಪ್ಪ ಅವರು ಮುಖ್ಯಮಂತ್ರಿಯವರಿಗೆ ತಿಳಿಸಿದ್ದಾರೆ.

ಯಡಿಯೂರಪ್ಪ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಪ್ರವಾಸ ಕಾರ್ಯಕ್ರಮ ವಿಷಯವನ್ನು ಬಹಿರಂಗ ಮಾಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಪಕ್ಷದ ಸಂಘಟನೆ, ಪ್ರವಾಸ, ಜನಸಂಪರ್ಕದ ಬಗ್ಗೆ ಚರ್ಚೆ ಮಾಡಿದ್ದು, ಆರು ಕಡೆ ದೊಡ್ಡ ರ್ಯಾಲಿಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಯಡಿಯೂರಪ್ಪ ಅವರು ಪಕ್ಷದ ಸಂಘಟನೆಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ದಿಲ್ಲಿಗೆ ಹೋಗಿ ಭೇಟಿಯಾಗಿ ಬಂದಿದ್ದಾರೆ. ಅಲ್ಲಿಯ ಮಾತುಕತೆ, ಸೂಚನೆಯ ಬಗ್ಗೆ ವಿವರವಾಗಿ ಚರ್ಚೆ ಮಾಡಿದ್ದೇವೆ.

ನಮ್ಮ ಪ್ರಧಾನಮಂತ್ರಿಗಳು ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅವರು ಭೇಟಿ ನೀಡುವ ಸಂದರ್ಭದಲ್ಲಿ ಪಕ್ಷದ ವತಿಯಿಂದ ಮಾಡಬೇಕಿರುವ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ಮಾಡಿದ್ದೇವೆ. ಬಿ.ಎಸ್.ಯಡಿಯೂರಪ್ಪ, ನಳಿನ್‍ಕುಮಾರ್ ಕಟೀಲ್, ಅರುಣ್ ಸಿಂಗ್ ಅವರು ವಿವಿಧ ತಂಡಗಳಲ್ಲಿ ಪ್ರವಾಸ ಮಾಡುವ ಬಗ್ಗೆ ಚರ್ಚೆಯಾ ಗಿದೆ. ಬರುವ ದಿನಗಳಲ್ಲಿ ಇನ್ನೊಂದು ಸಭೆಯನ್ನು ರಾಜ್ಯ ಮಟ್ಟದ ಹಿರಿಯ ನಾಯಕರೊಂದಿಗೆ ನಡೆಸಿ, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಕಾರ್ಯ ಕ್ರಮದ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವ ನಿರ್ಣಯವಾಗಿದೆ.
ಸೆಪ್ಟೆಂಬರ್ 8 ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ಜನೋತ್ಸವ ಕಾರ್ಯಕ್ರಮದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅದನ್ನು ಯಶಸ್ವಿ ಮಾಡಲು ಕೆಲವು ಸೂಚನೆಗಳನ್ನು ನೀಡಿದ್ದಾರೆ. ಅದನ್ನು ಕಾರ್ಯಗತ ಮಾಡಲು ಸಂಘಟಕರಿಗೆ ತಿಳಿಸಲಾಗಿದೆ. ಸಚಿವ ಡಾ.ಸುಧಾಕರ್, ಶಾಸಕರು, ಪದಾಧಿಕಾರಿ ಗಳು ಎಲ್ಲರೂ ಸೇರಿ ಜನೋತ್ಸವ ಯಶಸ್ವಿ ಮಾಡುತ್ತೇವೆ ಎಂದರು.

Translate »