ಜಿಲ್ಲಾದ್ಯಂತ ಸಂಭ್ರಮ-ಸಡಗರದ 72ನೇ ಸ್ವಾತಂತ್ರ್ಯ ದಿನಾಚರಣೆ
ಹಾಸನ

ಜಿಲ್ಲಾದ್ಯಂತ ಸಂಭ್ರಮ-ಸಡಗರದ 72ನೇ ಸ್ವಾತಂತ್ರ್ಯ ದಿನಾಚರಣೆ

August 17, 2018

ಧ್ವಜಾರೋಹಣ ನೆರವೇರಿಸಿದ ಸಚಿವ ಹೆಚ್.ಡಿ.ರೇವಣ್ಣ, ಎಲ್ಲೆಡೆ ರಾರಾಜಿಸಿದ ತ್ರಿವರ್ಣ ಧ್ವಜ
ಹಾಸನ:  ನಗರ ಸೇರಿದಂತೆ ಜಿಲ್ಲಾದ್ಯಂತ ಬುಧವಾರ 72ನೇ ವರ್ಷದ ಸ್ವಾತಂತ್ರ್ಯ ದಿನವನ್ನು ಸಂಭ್ರಮ- ಸಡಗರ ದಿಂದ ಆಚರಿಸಲಾಯಿತು. ಎಲ್ಲೆಡೆ ತ್ರಿವರ್ಣ ಧ್ವಜ ರಾರಾಜಿಸಿತ್ತು. ಮಕ್ಕಳು, ಅಧಿಕಾರಿ ಗಳು, ಸಂಘ-ಸಂಸ್ಥೆಗಳ ಪದಾಧಿಕಾರಿ ಗಳು ಸೇರಿದಂತೆ ಜನಪ್ರತಿನಿಧಿಗಳು ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸಿದರು.

ಹಾಸನ ವರದಿ: ನಗರದ ಜಿಲ್ಲಾ ಕ್ರೀಡಾಂ ಗಣದಲ್ಲಿ ಜಿಲ್ಲಾಡಳಿತ ವತಿಯಿಂದ 72ನೇ ವರ್ಷದ ಸ್ವಾತಂತ್ರ್ಯ ದಿನವನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕೋಪ ಯೋಗಿ ಸಚಿವ ಎಚ್.ಡಿ.ರೇವಣ್ಣ ಧ್ವಜಾ ರೋಹಣ ನೆರವೇರಿಸಿದರು. ನಂತರ ಶಾಲಾ, ಕಾಲೇಜು ವಿದ್ಯಾರ್ಥಿಗಳು ರಾಷ್ಟ್ರಗೀತೆ, ದೇಶ ಭಕ್ತಿಗೀತೆ ಹಾಗೂ ರೈತಗೀತೆ ಹಾಡಿದರು. ಪೊಲೀಸ್ ಸಿಬ್ಬಂದಿ ಎನ್‍ಸಿಸಿ, ಸ್ಕೌಟ್ ಅಂಡ್ ಗೈಡ್ಸ್, ಸೇವಾದಳ ಸೇರಿದಂತೆ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಸಿ ಸಚಿವರು ಸೇರಿದಂತೆ ನೆರೆ ದಿದ್ದ ಗಣ್ಯರಿಗೆ ಗೌರವ ಸಮರ್ಪಿಸಿದರು.

ಸಚಿವ ಹೆಚ್.ಡಿ.ರೇವಣ್ಣ ಮಾತನಾಡಿ, ರೈತರ ಸಾಲಮನ್ನಾ, ಜಿಲ್ಲೆಯಲ್ಲಿ ಅನು ಷ್ಠಾನಗೊಳ್ಳುತ್ತಿರುವ ನೀರಾವರಿ ಯೋಜನೆ ಗಳು, ಪ್ರವಾಸೋದ್ಯಮ ಅಭಿವೃದ್ಧಿ, ಶೈಕ್ಷಣಿಕ ಪ್ರಗತಿಗೆ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು. ಬಳಿಕ, ಸಶಸ್ತ್ರಪಡೆಗಳು ಹಾಗೂ ವಿದ್ಯಾರ್ಥಿಗಳ ತಂಡದಿಂದ ಆಕರ್ಷಕ ಪಥ ಸಂಚಲನ ನಡೆಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯ ಸಂಗ್ರಾಮ ಗೀತ ಕಥನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ರಾಯಲ್ ಅಪಲೋ ಶಾಲೆ, ವಿಜಯ ಆಂಗ್ಲ ಮಾಧ್ಯಮ ಶಾಲೆ, ಯುನೈ ಟೆಡ್ ಶಾಲೆ, ಎಸ್‍ವಿಎಂ ಶಾಲೆ ಹಾಗೂ ಸಂತ ಫಿಲೋಮಿನಾ ಶಾಲೆಯ 2,500ಕ್ಕೂ ಅಧಿಕ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಶಾಸಕರಾದ ಪ್ರೀತಮ್ ಗೌಡ, ಜಿಪಂ ಅಧ್ಯಕ್ಷೆ ಬಿ.ಎಸ್. ಶ್ವೇತಾ ದೇವ ರಾಜ್, ವಿಧಾನಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ, ತಾಪಂಅಧ್ಯಕ್ಷ ಸತೀಶ್, ನಗರಸಭೆ ಅಧ್ಯಕ್ಷ ಹೆಚ್.ಎಸ್. ಅನಿಲ್ ಕುಮಾರ್, ಡಿಸಿ ರೋಹಿಣಿ ಸಿಂಧೂರಿ, ಎಸ್‍ಪಿ ರಾಹುಲ್ ಕುಮಾರ್ ಶಹಪುರವಾಡ್, ಸಿಇಓ ಜಿ.ಜಗದೀಶ್ ಇದ್ದರು.

ಹಸಿರು ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ: ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಹಸಿರು ಕರ್ನಾಟಕ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತು ವಾರಿ ಸಚಿವ ಹೆಚ್.ಡಿ.ರೇವಣ್ಣ ಅವರು ಚಾಲನೆ ನೀಡಿದರು. ಜಿಲ್ಲಾ ಕ್ರೀಡಾಂಗಣ ದಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಬಲೂನು ಹಾರಿಬಿಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾ ಕ್ರೀಡಾಂ ಗಣದ ಆವರಣದಲ್ಲಿ ಸಸಿಯನ್ನು ನೆಡುವ ಮೂಲಕ ಹಸಿರು ಕರ್ನಾಟಕ ಕಾರ್ಯ ಕ್ರಮಕ್ಕೆ ಶುಭ ಕೋರಿದರು. ಇದೇ ವೇಳೆ ಸಚಿವರು ವಿದ್ಯಾರ್ಥಿಗಳು ಹಾಗೂ ಸಾರ್ವ ಜನಿಕರಿಗೆ ಸಸಿಗಳನ್ನು ವಿತರಿಸಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘ: ನಗರದ ಆರ್.ಸಿ. ರಸ್ತೆ ಕೋರ್ಟ್ ಬಳಿ ಇರುವ ಜಿಲ್ಲಾ ಸರ್ಕಾರಿ ನೌಕರರ ಭವನದ ಆವರಣದಲ್ಲಿ 72ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಯನ್ನು ಆಚರಿಸಲಾಯಿತು. ಧ್ವಜಾರೋಹಣ ವನ್ನು ಸಂಘದ ಜಿಲ್ಲಾಧ್ಯಕ್ಷ ಕೆ.ಎಂ. ಶ್ರೀನಿವಾಸ್ ನೆರವೇರಿಸಿದರು.

ಈ ವೇಳೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಶಿವಸ್ವಾಮಿ, ಉಪಾಧ್ಯಕ್ಷರು ಕೃಷ್ಣೇಗೌಡ, ರಾಮಚಂದ್ರ, ಶಿವೇಗೌಡ, ನೇತ್ರಾವತಿ, ದೇವಾನಂದ್, ರಾಧ ಇತರರು ಉಪಸ್ಥಿತರಿದ್ದರು.

ಬೇಲೂರು ವರದಿ: ಪಟ್ಟಣದ ಸರ್ಕಾರಿ ಕಿರಿಯ ಕಾಲೇಜು ಮುಂಭಾಗ ಮಾಧ್ಯಮಿಕ ಶಾಲಾ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಮಿತಿಯಿಂದ ಏರ್ಪಡಿಸಿದ್ದ 72ನೇ ಸ್ವಾತಂತ್ರೋತ್ಸವದಲ್ಲಿ ತಹಶೀಲ್ದಾರ್ ಎಸ್.ಕೆ. ರಾಜು ಧ್ವಜಾರೋಹಣ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ವಿಜ್ಞಾನ, ತಂತ್ರಜ್ಞಾನದಲ್ಲಿ ವಿಶ್ವವೇ ಹುಬ್ಬೇರಿಸುವಂತೆ ಮಾಡಿರುವ ಭಾರತದಲ್ಲಿನ ಭಯೋ ತ್ಪಾದನೆ, ಆಂತರಿಕ ಕೋಮುಗಲಭೆ ಯಿಂದಾಗಿ ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ಆಗುತ್ತಿದೆ ಎಂದು ಹೇಳಿದರು.
ಶಾಸಕ ಕೆ.ಎಸ್.ಲಿಂಗೇಶ್ ಮಾತನಾಡಿ, ಲಕ್ಷಾಂತರ ಮಂದಿಯ ಬಲಿದಾನದಿಂದಾಗಿ ನಾವು ಸ್ವತಂತ್ರರಾಗಿದ್ದೇವೆ. ದೇಶಕ್ಕಾಗಿ ಪ್ರಾಣಬಲಿದಾನ ಮಾಡಿದವರನ್ನು ಪ್ರತಿ ಯೊಬ್ಬರು ಸ್ಮರಿಸಿಕೊಳ್ಳಬೇಕು ಎಂದರು.

ಜಿಪಂ ಸದಸ್ಯರಾದ ಸೈಯದ್‍ತೌಫಿಕ್, ಲತಾಮಂಜೇಶ್ವರಿ, ಲತಾದಿಲೀಪ್, ತಾಪಂ ಅಧ್ಯಕ್ಷ ಹರೀಶ್, ಉಪಾಧ್ಯಕ್ಷೆ ಕಮಲ ಚಿಕ್ಕಣ್ಣ, ಇಒ ಮಲ್ಲೇಶಪ್ಪ, ಬಿಇಒ ಶಾಕೀರ್ ಅಲಿಖಾನ್ ಇದ್ದರು.

ಹೊಳೆನರಸೀಪುರ ವರದಿ: ಪಟ್ಟಣದ ಬಯಲು ರಂಗಮಂದಿರದ ಆವರಣದಲ್ಲಿ ತಾಲೂಕು ಆಡಳಿತ ಮತ್ತು ರಾಷ್ಟ್ರೀಂiÀi ಹಬ್ಬಗಳ ಆಚರಣಾ ಸಮಿತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸ ಲಾಯಿತು. ತಹಸೀಲ್ದಾರ್ ವೈ.ಎಂ.ರೇಣು ಕುಮಾರ್ ಧ್ವಜಾರೋಹಣ ನೆರವೇರಿಸಿದರು. ಅಕ್ಷರ ದಾಸೋಹ ತಾಲೂಕು ಅಧಿಕಾರಿ ಸಿ.ಕೆ. ಹರೀಶ್ ಮುಖ್ಯಭಾಷಣ ಮಾಡಿದರು.

ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿ ಸುತ್ತಿರುವ ಗಣ್ಯರನ್ನು ಸನ್ಮಾನಿಸಲಾಯಿತು. ಬಳಿಕ ಶಾಲಾ ಮಕ್ಕಳು ಹಾಗೂ ಪೊಲೀಸರು ಪಥ ಸಂಚಲನ ನಡೆಸಿದರು. ನಾನಾ ಸ್ತಬ್ಧ ಚಿತ್ರಗಳೊಂದಿಗೆ ಮಹಾತ್ಮ ಗಾಂಧೀಜಿಯವರ ಭಾವಚಿತ್ರವನ್ನು ತೆರೆದ ವಾಹನದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು

ಕಾರ್ಯಕ್ರಮದಲ್ಲಿ ತಾಪಂ ಅಧ್ಯಕ್ಷೆ ಜಯಲಕ್ಷ್ಮಿ, ಉಪಧ್ಯಕ್ಷ ಶಿವಣ್ಣ, ಪುರಸಭೆ ಮುಖ್ಯಾಧಿಕಾರಿ ಬಸವರಾಜ್, ತಾ.ಕ.ಸಾ.ಪ ಅಧ್ಯಕ್ಷ ಡಿ.ಕೆ.ಕುಮಾರಯ್ಯ, ಬಿಇಒ ಎಂ. ಶಿವರಾಜ್, ತಾ.ನೌ.ರ.ಸ.ದ ಅಧ್ಯಕ್ಷ ಟಿ.ಎಸ್. ಕುಮಾರಸ್ವಾಮಿ, ಮುಖಂಡರಾದ ಕೆ.ಸಿ.ಪುಷ್ಪ ಲತ, ಕೆ.ಟಿ.ಸೌಭಾಗ್ಯ, ಇಓ ಪ್ರಭು, ಮತ್ತು ಶಾಲಾ ಮಕ್ಕಳು, ಶಿಕ್ಷಕರು ಹಾಜರಿದ್ದರು.

ಅರಸೀಕೆರೆಯ ತಾಲೂಕು ಕ್ರಿಡಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ರಾಷ್ಟ್ರಪತಿ ಪದಕ ವಿಜೇತ ಡಿವೈಎಸ್‍ಪಿ ಸದಾನಂದ ತಿಪ್ಪಣ್ಣನವರ್‍ರನ್ನು ಸನ್ಮಾನಿಸಲಾಯಿತು

ಅರಸೀಕೆರೆ ವರದಿ: ನಗರದ ತಾಲೂಕು ಕ್ರಿಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ 72ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ತಾಲೂಕು ದಂಡಾಧಿಕಾರಿ ಎನ್.ವಿ.ನಟೇಶ್ ಧ್ವಜಾರೋಹಣ ನೆರವೇರಿಸಿದರು. ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟ ಗಾರ ನೇರ್ಲಿಗೆ ಬಸವರಾಜು, ಮಾಜಿ ಸೈನಿಕರು ಮತ್ತು ವಿವಿಧ ಶಾಲಾ ಕಾಲೇಜು ಗಳಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಸಲಾಯಿತು. ಇದೇ ಸಂದರ್ಭದಲ್ಲಿ ರಾಷ್ಟ್ರಪತಿ ಪದಕ ವಿಜೇತ ಡಿವೈಎಸ್‍ಪಿ ಸದಾನಂದ ತಿಪ್ಪಣ್ಣನವರ್ ಅವರಿಗೆ ಗೌರವಿಸಲಾಯಿತು. ಕಾರ್ಯ ಕ್ರಮದಲ್ಲಿ ವಿವಿಧ ಶಾಲಾ ಮಕ್ಕಳು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ತಾಪಂ ಅಧ್ಯಕ್ಷೆ ರೂಪ ಗಂಗಾಧರ್, ಉಪಾಧ್ಯಕ್ಷ ಲಿಂಗರಾಜು, ನಗರಸಭೆ ಅಧ್ಯಕ್ಷ ಸಮೀವುಲ್ಲಾ, ಉಪಾಧ್ಯಕ್ಷ ಪಾರ್ಥ ಸಾರಥಿ, ಜಿಪಂ ಸದಸ್ಯರಾದ ಬಿಳಿಚೌಡಯ್ಯ, ಮಾಡಾಳುಸ್ವಾಮಿ, ವತ್ಸಲಾ ಶೇಖರಪ್ಪ, ಲೋಲಾಕ್ಷಮ್ಮ, ಎಪಿಎಂಸಿ ಅಧ್ಯಕ್ಷ ಚಂದ್ರ ಶೇಖರ್, ಉಪಾಧ್ಯಕ್ಷ ಶಶಿಧರ್, ಬಿಇಓ ಮೋಹನ್ ಕುಮಾರ್, ತಾಪಂ ಕಾರ್ಯ ನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಬಿಇಓ ಮೋಹನ್‍ಕುಮಾರ್, ನಗರಸಭೆ ಪೌರಾಯುಕ್ತ ಪರಮೇಶ್ವರಪ್ಪ, ಹಿರಿಯ ಕ್ರಿಡಾಪಟು ಮಹದೇವ್ ಇದ್ದರು.

Translate »