ಮುಖ್ಯಮಂತ್ರಿ ಕಿಸಾನ್ ಸಮ್ಮಾನ್  ನಿಧಿಯಡಿ 47.83 ಲಕ್ಷ ರೈತರಿಗೆ  956.71 ಕೋಟಿ ಸಹಾಯಧನ
News

ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಡಿ 47.83 ಲಕ್ಷ ರೈತರಿಗೆ 956.71 ಕೋಟಿ ಸಹಾಯಧನ

June 3, 2022

ಬೆಂಗಳೂರು, ಜೂ.2(ಕೆಎಂಶಿ)- ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಅವರಿಂದು ರಾಜ್ಯದ 47.83 ಲಕ್ಷ ರೈತರಿಗೆ 956.71 ಕೋಟಿ ರೂ.ಗಳ ಆರ್ಥಿಕ ಸಹಾಯಧನ ವರ್ಗಾ ಯಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ರೈತರ ಖಾತೆಗಳಿಗೆ ಸಹಾಯಧನ ವರ್ಗಾ ಯಿಸಿದ್ದು, 2018-19ರಿಂದ 2021-22 ರವರೆಗೆ ಭಾರತ ಸರ್ಕಾರದಿಂದ ಅನು ಮೋದಿಸಲ್ಪಟ್ಟ ರೈತ ಕುಟುಂಬಗಳಿಗೆ ಒಟ್ಟು 3864.66 ಕೋಟಿ ರೂ. ರಾಜ್ಯದ ರೈತರಿಗೆ ಪಾವತಿಯಾದಂತಾಗಿದೆ. 2021-22ನೇ ಸಾಲಿನಲ್ಲಿ 50.35 ಲಕ್ಷ ರೈತರಿಗೆ 1975.12 ಕೋಟಿ ರೂ.ಗಳ ಆರ್ಥಿಕ ನೆರವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಯೋಜನೆಯಡಿ ಎಲ್ಲಾ ಪಾವತಿಗಳನ್ನು ಸಾಧ್ಯವಾದಷ್ಟು ಆಧಾರ್ ಆಧಾರಿತ ಡಿಬಿಟಿ ಮುಖಾಂತರ ಮಾಡಲಾಗಿದೆ. ದೇಶದ ಎಲ್ಲಾ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯವು ಅತೀ ಹೆಚ್ಚು ಅಂದರೆ ಶೇ.96ರಷ್ಟು ಆಧಾರ್ ಆಧಾರಿತ ಪಾವತಿಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ ರಾಜ್ಯವಾಗಿದ್ದು, ಕಳೆದ ಬಾರಿ 2020-21ನೇ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯದ ಕೃಷಿ ಇಲಾಖೆಗೆ ಪ್ರಶಸ್ತಿಯು ಲಭಿಸಿದೆ. 2019 ರಿಂದ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ಅರ್ಹ ರೈತರಿಗೆ ಹೆಚ್ಚುವರಿಯಾಗಿ 4 ಸಾವಿರ ರೂ.ಗಳ ಆರ್ಥಿಕ ನೆರವನ್ನು 2 ಕಂತುಗಳಲ್ಲಿ ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೀಡುತ್ತಿದೆ. ಆಧಾರ್ ಗುರುತಿನ ಸಂಖ್ಯೆಯಾಧಾರದ ಮೇಲೆ ನೇರ ನಗದು ವರ್ಗಾವಣೆ ಪ್ರಕ್ರಿಯೆ ಮೂಲಕ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ.

Translate »