ಸುತ್ತೂರು ಶ್ರೀಕ್ಷೇತ್ರದಲ್ಲಿ ನಾಳೆ ಕೆಎಸ್‍ಆರ್‍ಟಿಸಿ  ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ  9ನೇ ಸಮಾವೇಶ, ಪ್ರತಿಭಾ ಪುರಸ್ಕಾರ
ಮೈಸೂರು

ಸುತ್ತೂರು ಶ್ರೀಕ್ಷೇತ್ರದಲ್ಲಿ ನಾಳೆ ಕೆಎಸ್‍ಆರ್‍ಟಿಸಿ  ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ  9ನೇ ಸಮಾವೇಶ, ಪ್ರತಿಭಾ ಪುರಸ್ಕಾರ

December 28, 2019

ಮೈಸೂರು,ಡಿ.27(ಆರ್‍ಕೆಬಿ)-ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಚಾಮ ರಾಜನಗರ ವಿಭಾಗದ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಡಿ.29ರಂದು ಬೆಳಿಗ್ಗೆ 10.30 ಗಂಟೆಗೆ ಮೈಸೂರು ಜಿಲ್ಲೆಯ ಸುತ್ತೂರು ಶ್ರೀಕ್ಷೇತ್ರದ ಸಿದ್ದನಂಜ ದೇಶಿಕೇಂದ್ರ ಮಂಗಳ ಮಂಟಪದಲ್ಲಿ ರಾಜ್ಯ ಮಟ್ಟದ 9ನೇ ಸಮಾವೇಶ, ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಏರ್ಪಡಿಸಲಾಗಿದೆ ಎಂದು ಸಂಘದ ಚಾಮರಾಜನಗರ ವಿಭಾಗದ ಅಧ್ಯಕ್ಷ ರಾಜೇಂದ್ರಕುಮಾರ್ ತಿಳಿಸಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ತುಮಕೂರು ಸಿದ್ದಗಂಗಾ ಸ್ವಾಮೀಜಿ, ಬಾಳೆ ಹೊನ್ನೂರು ದಿಂಗಾಲೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕಾರ್ಯ ಕ್ರಮ ನಡೆಯಲಿದೆ. ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ ಬಸವರಾಜ ಬೊಮ್ಮಾಯಿ, ವಿ.ಸೋಮಣ್ಣ, ಎಸ್.ಆರ್.ಪಾಟೀಲ್, ಮಾಜಿ ಸಚಿವ ಡಾ.ಗೀತಾ ಮಹದೇವ ಪ್ರಸಾದ್, ಶಾಸಕರಾದ ಅಮರೇಗೌಡ ಭಯ್ಯಾಪುರ, ಕೆ.ಎಸ್.ಲಿಂಗೇಶ್, ಮಾಜಿ ಶಾಸಕರಾದ ಸಿ.ಗುರುಸ್ವಾಮಿ, ಪರಿಮಳಾ ನಾಗಪ್ಪ, ಕೆ.ಆರ್.ಮಲ್ಲಿಕಾರ್ಜುನಪ್ಪ, ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಇನ್ನಿತರರು ಭಾಗವಹಿಸಲಿದ್ದಾರೆ. ಸಂಘದ ರಾಜ್ಯ ಗೌರವ ಅಧ್ಯಕ್ಷ ಕೆ.ಎಸ್.ವಿಶ್ವನಾಥ್, ಅಧ್ಯಕ್ಷ ಸಂಗಮನಾಥ ರಬಶೆಟ್ಟಿ ಅಧ್ಯಕ್ಷತೆ ವಹಿಸುವರು ಎಂದರು. ಕಾರ್ಯಕ್ರಮದಲ್ಲಿ ನಿವೃತ್ತ ನೌಕರರಿಗೆ ಸನ್ಮಾನ, ಸದಸ್ಯರ ವಿದ್ಯಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಇನ್ನಿತರ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮಕ್ಕೂ ಮುನ್ನ ಜಗಜ್ಯೋತಿ ಬಸವೇಶ್ವರರ ಪುತ್ಥಳಿಯ ಮೆರವಣಿಗೆ ನಡೆಯ ಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ವಿ.ನಂಜುಂಡ ಸ್ವಾಮಿ, ಕಾರ್ಯದರ್ಶಿ ರಾಜೇಶ್, ಮೈಸೂರು ಗ್ರಾಮಾಂತರ ವಿಭಾಗದ ಅಧ್ಯಕ್ಷ ಷಡಕ್ಷರಿ, ಉಪಾಧ್ಯಕ್ಷ ನಾಗಪ್ರಸಾದ್, ರಾಜ್ಯ ಉಪಾಧ್ಯಕ್ಷ ಸಿ.ಡಿ.ಬಸವರಾಜು ಉಪಸ್ಥಿತರಿದ್ದರು.

Translate »