ರಾಜ್ಯ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು…
ಮೈಸೂರು

ರಾಜ್ಯ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು…

September 12, 2018

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಂದಿನ 15 ದಿನಗಳಲ್ಲಿ ಏನು ಬೇಕಾದರೂ ಆಗಬಹುದು ಅದಕ್ಕೆ ನಾನು ಹೊಣೆಯಲ್ಲ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಟ್ಟು, ಬಿಜೆಪಿ ಸೇರುವು ದಿಲ್ಲ, ಇರುವ ಸಮಸ್ಯೆಗಳ ಬಗ್ಗೆ ಹೈಕಮಾಂಡ್‍ಗೆ ತಿಳಿಸಿದ್ದೇವೆ, ಅವರೇ ಸಮಸ್ಯೆ ಬಗಹರಿಸುತ್ತಾರೆ ಎಂದು ಹೇಳಿದ್ದಾರೆ. ವರಿಷ್ಠರು ಬೆಳಗಾವಿ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು, ರಾಜ್ಯ ನಾಯಕರು ಹಾಗೂ ಹೈಕಮಾಂಡ್ ಈ ಸಮಸ್ಯೆ ಬಗೆ ಹರಿಸಬೇಕು ಎಂದು ತಿಳಿಸಿದ್ದಾರೆ. ಶ್ರೀರಾಮುಲು ಜೊತೆ ನಿರಂತರ ನಿರಂತರ ಸಂಪರ್ಕದಲ್ಲಿದ್ದೀರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಯಾರೊಂದಿಗೂ ಮಾತನಾಡಿಲ್ಲ ಎಂದರು. ರಮೇಶ್ ಜಾರಕಿಹೊಳಿ ಜೊತೆ 14 ಮಂದಿ ಶಾಸಕರು ಇದ್ದಾರಲ್ಲ ಎಂಬ ಪ್ರಶ್ನೆಗ ಉತ್ತರಿಸಿದ ಅವರು,
ಸರ್ಕಾರ ರಚನೆಯಾದಾಗಿನಿಂದ ಅವರ ಜೊತೆಗಿದ್ದಾರೆ. ಅವರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದು ಹೇಳಿದ್ದಾರೆ. ಡಿ.ಕೆ ಶಿವಕುಮಾರ್ ಅವರ ವಿರುದ್ಧ ಅಸಮಾಧಾನಕ್ಕೆ ಕಾರಣವಿದ್ದು, ಅವರು ಜಿಲ್ಲೆಯ ರಾಜಕೀಯ ಮತ್ತು ವರ್ಗಾವಣೆ ವಿಷಯದಲ್ಲಿ ಹಸ್ತಕ್ಷೇಪ ಮಾಡಿದ್ದರು ಹೀಗಾಗಿ ಅವರ ವಿರುದ್ದ ಕೋಪವಿದೆ ಎಂದು ಹೇಳಿದ್ದಾರೆ, ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರವಾಗಿ ಜಾರಕಿಹೊಳಿ ಸಹೋದರರಿಗೆ ಪಕ್ಷದಲ್ಲಿ ಹಿನ್ನಡೆಯಾದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದರು.

Translate »