ನಾಳೆ ಆರೋಗ್ಯ ಇಲಾಖೆ ಗುತ್ತಿಗೆ ನೌಕರರಿಂದ ಪ್ರತಿಭಟನೆ
ಚಾಮರಾಜನಗರ

ನಾಳೆ ಆರೋಗ್ಯ ಇಲಾಖೆ ಗುತ್ತಿಗೆ ನೌಕರರಿಂದ ಪ್ರತಿಭಟನೆ

October 24, 2018

ಚಾಮರಾಜನಗರ:  ಸಮಾನ ವೇತನ ಹಾಗೂ ಸೇವಾ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿ ನಗರದಲ್ಲಿ ಅ.25ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖಾ ಗುತ್ತಿಗೆ ನೌಕ ರರ ಸಂಘ ಪ್ರತಿಭಟನೆ ಹಮ್ಮಿಕೊಂಡಿದೆ. ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಭವನದಲ್ಲಿ ಮಂಗಳವಾರ ಆಯೋ ಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಸಂಘದ ಮುಖಂಡ ಹೇಮಂತ್‍ಕುಮಾರ್ ಈ ವಿಷಯ ತಿಳಿಸಿದರು.

ಸಾರ್ವಜನಿಕ ಆರೋಗ್ಯ ಇಲಾಖೆ ಬಲ ಗೊಳ್ಳಬೇಕು. ಗುತ್ತಿಗೆ ನೌಕರರಿಗೆ ಸಮಾನ ವೇತನ ಹಾಗೂ ಸೇವಾ ಭದ್ರತೆ ಸಿಗಬೇಕು ಎಂಬ ಹಕ್ಕೊತ್ತಾಯ ಮುಂದಿಟ್ಟುಕೊಂಡು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅ.25ರಂದು ಆರೋಗ್ಯ ಇಲಾಖೆಯ ಎಲ್ಲಾ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಲಿದ್ದಾರೆ. ಅದರಂತೆ ಜಿಲ್ಲೆಯಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವವರ ಸಂಖ್ಯೆಯು ಖಾಯಂ ನೌಕರರಿಗಿಂತ ಹೆಚ್ಚಿದೆ. ಸೂಚಿಸಿದ ಕೆಲಸ ಮಾಡುವ ಎಲ್ಲಾ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಯನ್ನು, ಕೆಲಸದ ಸ್ಥಳದಲ್ಲಿ ಘನತೆಯನ್ನು ಖಾತರಿ ಮಾಡಬೇಕು ಮತ್ತು ಸುಪ್ರಿಂ ಕೋರ್ಟ್ 2016ರ ಅಕ್ಟೋಬರ್‍ನಲ್ಲಿ ಕಡ್ಡಾ ಯಗೊಳಿಸಿದ್ದರೂ ಜಾರಿ ಮಾಡದ ತಾರತಮ್ಯ ರಹಿತ ಸಮಾನ ವೇತನವನ್ನು ಕೊಡಬೇಕು ಎಂದು ಒತ್ತಾಯಿಸಿ ಈ ಪ್ರತಿಭಟನೆ ನಡೆ ಸುವುದಾಗಿ ಅವರು ತಿಳಿಸಿದರು.

ಅಂದು ಬೆಳಿಗ್ಗೆ 10 ಗಂಟೆಗೆ (ಅ.25) ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗದಿಂದ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಮಾರು 400 ಮಂದಿ ಗುತ್ತಿಗೆ ನೌಕರರು ಪ್ರತಿಭಟನೆ ಆರಂಭಿಸ ಲಿದ್ದಾರೆ. ಪ್ರಮುಖ ಬೀದಿಗಳ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸ ಲಾಗುವುದು ಎಂದು ಹೇಮಂತ್‍ಕು ಮಾರ್ ತಿಳಿಸಿದರು. ಸಂಘದ ಅಧ್ಯಕ್ಷ ಪಿ.ಶೇಖರ್, ಸದಸ್ಯರಾದ ಡಾ.ಹೇಮ ಕುಮಾರ್, ಡಾ.ಸತ್ಯನಾರಾಯಣ, ಸಂಘಟನಾ ಕಾರ್ಯದರ್ಶಿ ಚಂದನ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

 

Translate »