SSLC ಪರೀಕ್ಷೆಗೆ ವಾಚ್ ಕಟ್ಟಿ ಬಂದರೆ ಪ್ರವೇಶವಿಲ್ಲ!
ಮೈಸೂರು

SSLC ಪರೀಕ್ಷೆಗೆ ವಾಚ್ ಕಟ್ಟಿ ಬಂದರೆ ಪ್ರವೇಶವಿಲ್ಲ!

November 28, 2018

ಬೆಂಗಳೂರು: ಈ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಕೈಗೆ ವಾಚು ಕಟ್ಟಿಕೊಂಡು ಹೋಗಕೂಡದು! ಒಂದು ವೇಳೆ ವಾಚ್ ಧರಿಸಿ ಹೋದರೆ ನಿಮಗೆ ಪ್ರವೇಶ ಸಿಗುವುದಿಲ್ಲ. ಏಕೆಂದರೆ ಈ ಬಾರಿಯ ಪರೀಕ್ಷೆಯಲ್ಲಿ ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ವಾಚ್ ಕಟ್ಟಿಕೊಳ್ಳಬಾರದೆಂದು ಪ್ರಾಥ ಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸುತ್ತೂೀಲೆ ಹೊರಡಿಸಿದೆ.

ವರ್ಷದಿಂದ ವರ್ಷಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಯಲ್ಲಿ ಸುಧಾರಣೆ ತರಲು ಹೆಚ್ಚು ಒತ್ತು ನೀಡುತ್ತಿರುವ ಸರ್ಕಾರ, ಈ ಬಾರಿಯ ಪರೀಕ್ಷಾ ಸಮಯದಲ್ಲಿ ಕೈಗೆ ವಾಚ್ ಕಟ್ಟದಂತೆ ವಿದ್ಯಾರ್ಥಿಗಳಿಗೆ ಶಿಕ್ಷಕರು ಸೂಚನೆ ನೀಡಬೇಕೆಂದು ಸೂಚಿಸಲಾಗಿದೆ.

ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.21ರಿಂದ ಆರಂಭವಾಗಲಿದೆ. ಪ್ರಸಕ್ತ ವರ್ಷ 8,38,000ಕ್ಕೂ ಹೆಚ್ಚು ವಿದ್ಯಾರ್ಥಿ ಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ವಿದ್ಯಾರ್ಥಿಗಳು ವಾಚ್‍ನೊಳಗೂ ಚೀಟಿ ಇಟ್ಟುಕೊಂಡು ಪರೀಕ್ಷೆಗೆ ಬರುತ್ತಿದ್ದರು.

ಕಳೆದ ಬಾರಿ ನಾನಾ ಪರೀಕ್ಷಾ ಕೇಂದ್ರ ಗಳಲ್ಲಿ ವಾಚ್‍ನೊಳಗೆ ಚೀಟಿ ಇಟ್ಟು ಕೊಂಡು ಕಾಪಿ ಹೊಡೆದಿರುವ ಉದಾ ಹರಣೆಗಳಿವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಈ ಕ್ರಮವನ್ನು ಕೈಗೊಂಡಿದೆ ಎಂದು ತಿಳಿದುಬಂದಿದೆ.

ಇನ್ನು ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯ ತಿಳಿಯಲಿ ಎಂಬ ಕಾರಣಕ್ಕಾಗಿ ಈ ಬಾರಿ ಪರೀಕ್ಷಾ ಕೊಠಡಿಗಳಲ್ಲಿ ಬೃಹದಾಕಾರದ ಗೋಡೆ ಗಡಿಯಾರ ವನ್ನು ಹಾಕಬೇಕೆಂದು ಸಂಬಂಧಪಟ್ಟ ಶಾಲಾ ಕಾಲೇಜುಗಳಿಗೆ ಸೂಚಿಸಲಾಗಿದೆ. ಸರ್ಕಾರಿ, ಅನುದಾನ,
ಅನುದಾನ ರಹಿತ ಶಾಲೆಗಳಿಗೆ ಇದು ಅನ್ವಯವಾಗಲಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಆರಂಭದ ಸಮಯ ಹಾಗೂ ಮುಕ್ತಾಯದ ಸಮಯ ತಿಳಿಯಲಿ ಎಂಬ ಅನುಕೂಲ ಕ್ಕಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಇನ್ನು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರಾವನ್ನು ಅಳವಡಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

ರಾಜ್ಯದ ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರಾವನ್ನು ಅಳವಡಿಸುವಂತೆ ಸರ್ಕಾರವೇ ಅಧಿಸೂಚನೆ ಹೊರಡಿಸಿತ್ತು. ಸಿಸಿ ಕ್ಯಾಮರಾಗಳಿದ್ದರೆ ಯಾವುದೇ ರೀತಿಯ ಪರೀಕ್ಷಾ ಅಕ್ರಮವನ್ನು ನಡೆಸಲು ಸಾಧ್ಯವಾಗುವುದಿಲ್ಲ ಎಂಬ ಕಾರಣಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಎರಡು ವರ್ಷಗಳ ಹಿಂದೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಭಾರೀ ವಿವಾದವನ್ನೇ ಸೃಷ್ಟಿಸಿತ್ತು. ಇಲಾಖೆಯಲ್ಲಿರುವ ಕೆಲವು ಅಧಿಕಾರಿಗಳೇ ಹಣದಾಸೆಗಾಗಿ ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೆÇಲೀಸರು ಅನೇಕರನ್ನು ಬಂಧನಕ್ಕೊಳಪಡಿಸಿದ್ದರು. ಇತ್ತೀಚಿನ ಕೆಲವು ವರ್ಷಗಳಲ್ಲಿ ಪರೀಕ್ಷಾ ಅಕ್ರಮಗಳನ್ನು ತಡೆಯಲು ಶಿಕ್ಷಣ ಇಲಾಖೆ ಸಾಕಷ್ಟು ತ್ವರಿತ ಕ್ರಮಗಳನ್ನು ಕೈಗೊಳ್ಳುತ್ತಿರುವುದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.

Translate »