ಬೇಲೂರು ತಾಪಂ ಸಾಮಾನ್ಯ ಸಭೆ ಪಟ್ಟಣದಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ಒತ್ತಾಯ
ಹಾಸನ

ಬೇಲೂರು ತಾಪಂ ಸಾಮಾನ್ಯ ಸಭೆ ಪಟ್ಟಣದಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ಒತ್ತಾಯ

December 5, 2018

ಬೇಲೂರು:  ಪಟ್ಟಣದಲ್ಲಿ ನಕಲಿ ವೈದ್ಯರ ಹಾವಳಿ ಅಧಿಕವಾಗಿದೆ. ಇದ ರಿಂದ ರೋಗಿಗಳು ಸೂಕ್ತ ಚಿಕಿತ್ಸೆ ದೊರೆ ಯದೆ ಪರದಾಡುವಂತಾಗಿದ್ದು, ಕೂಡಲೇ ಆರೋಗ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಕ್ರಮವಹಿಸಬೇಕು ಎಂದು ಸದಸ್ಯ ಹರೀಶ್ ಒತ್ತಾಯಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಡೆದ ತಾಪಂ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.
ತಾಲೂಕಿನಲ್ಲಿ ಆಯುರ್ವೇದಿಕ್ ಹೆಸರಿ ನಲ್ಲಿ ರೋಗಿಗಳನ್ನು ಸುಲಿಗೆ ಮಾಡ ಲಾಗುತ್ತಿದೆ. ಇಂತವರ ವಿರುದ್ಧ ಆರೋಗ್ಯಾ ಧಿಕಾರಿಗಳು ಪೊಲೀಸ್ ಠಾಣೆಗೆ ದೂರು ನೀಡಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸದಸ್ಯ ಮಂಜುನಾಥ್ ಮಾತನಾಡಿ, ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಎಲ್ಲ ಸೌಲಭ್ಯಗಳಿದ್ದರೂ, ಬೇರೆ ಕಡೆಗೆ ಕಳು ಹಿಸಲಾಗುತ್ತಿದೆ. ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಗಳು ಕರ್ತವ್ಯದ ಸಮಯದಲ್ಲೆ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆಂಬುಲೆನ್ಸ್ ವಾಹನಗಳ ಚಾಲಕರು ಸರಿಯಾಗಿ ಕರ್ತವ್ಯ ನಿರ್ವಹಿಸದ ಕಾರಣ ರೋಗಿಗಳಿಗೆ ತೊಂದರೆಯಾಗುತ್ತಿದೆ. ವೈದ್ಯಾಧಿ ಕಾರಿ ಮೊದಲು ಇದನ್ನು ಸರಿಪಡಿಸಿ ಎಂದು ತರಾಟೆ ತೆಗೆದುಕೊಂಡರು.

ವೈದ್ಯಾಧಿಕಾರಿ ಡಾ.ಯೋಗೀಶ್ ಮಾತ ನಾಡಿ, ಪಟ್ಟಣದ ಜೆಪಿ ನಗರದಲ್ಲಿ ಅನಧಿಕೃತ ವಾಗಿ ಕ್ಲಿನಿಕ್ ನಡೆಸುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಹೋಗಿ ಪರಿಶೀಲಿಸಿ ಎಚ್ಚರಿಕೆ ನೀಡಿ ಬಾಗಿಲು ಮುಚ್ಚಿಸಿದ್ದೇವೆ ಎಂದರು.

ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಎನ್.ರವಿ, ಗ್ರಾಪಂ ಸದಸ್ಯ ಪ್ರೇಮ್ ಮಾತನಾಡಿ, ತಾಲೂಕಿನ ಬಹುತೇಕ ದಿನಸಿ ಅಂಗಡಿ ಹಾಗೂ ಕೆಲವು ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ. ಇದರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅಬಕಾರಿ ಅಧಿಕಾರಿಗೆ ತಿಳಿಸಿದರು.

ತಾಪಂ ಉಪಾಧ್ಯಕ್ಷೆ ಕಮಲಚಿಕ್ಕಣ್ಣ ಮಾತನಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸುತ್ತಿರುವ ಸೈಕಲ್‍ಗಳು ಕಳಪೆ ಗುಣ ಮಟ್ಟದಿಂದ ಕೂಡಿದೆ. ಇಂತಹ ಸೈಕಲ್ ಗಳನ್ನು ಏಕೆ ಕೊಡುತ್ತೀರಾ ಎಂದು ಅಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅಧ್ಯಕ್ಷ ಜಿ.ಬಿ.ರಂಗೇಗೌಡ ಮಾತನಾಡಿ, ತಾಲೂಕಿನ ಎಲ್ಲಾ ಶಾಲೆಗಳಲ್ಲೂ ಕಡ್ಡಾಯ ವಾಗಿ ಪೋಷಕರ ಸಭೆ ಕರೆದು, ಮಕ್ಕಳ ಉತ್ತಮ ಬೆಳವಣಿಗೆಗೆ ಕ್ರಮ ಕೈಗೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗೆ ತಿಳಿಸಿದರು.
ಹಳೇಬೀಡು-ಅಡಗೂರಿನ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರಗಳ ಕಳ್ಳತನ ಹೆಚ್ಚಾಗಿ ನಡೆಯುತ್ತಿದ್ದರೂ ಅಧಿಕಾರಿಗಳ ನಿರ್ಲಕ್ಷಿಸುತ್ತಿದ್ದಾರೆ. ಸ್ಥಳೀಯವಾಗಿ ಇರುವ ಅರಣ್ಯ ಸಂರಕ್ಷಣಾ ಸಮಿತಿಯ ಸಭೆ ಕರೆ ದಿಲ್ಲ ಎಂದು ಸದಸ್ಯ ವಿಜಯ್‍ಕುಮಾರ್ ಆರೋಪಿಸಿದರು. ಸಭೆಯಲ್ಲಿ ವಿವಿಧÀ ಇಲಾಖೆಗಳ ಅಧಿಕಾರಿಗಳು, ಸದಸ್ಯರು ಹಾಜರಿದ್ದರು.

Translate »