ಚಾಮರಾಜನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ವಿಶ್ವ ತಂಬಾಕು ದಿನಾಚರಣೆ ಅಂಗವಾಗಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಮೇ 31ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಸತ್ರ ನ್ಯಾಯಾಲಯದ ಆವರಣದಲ್ಲಿ ಜಾಥಾ ಕಾರ್ಯ ಕ್ರಮಕ್ಕೆ ಚಾಲನೆ ನೀಡಲಿದೆ. ಜಾಥಾ ಕಾರ್ಯಕ್ರಮ ನ್ಯಾಯಾಲಯ ಆವರಣದಿಂದ ಹೊರಟು ಜಿಲ್ಲಾಡಳಿತ ಭವನದ ಮುಂಭಾಗ ಮುಕ್ತಾಯಗೊಳ್ಳಲಿದೆ. ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸ ಲಾಗಿದೆ ಎಂದು ಜಿಲ್ಲಾ ಕಣ್ಗಾವಲು ಅಧಿಕಾರಿ ಡಾ. ಎಂ. ನಾಗರಾಜು ತಿಳಿಸಿದ್ದಾರೆ.
