ಕುಶಾಲನಗರದಲ್ಲಿ ಕೇಂದ್ರ ಸಚಿವ ಹೆಗಡೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಕೊಡಗು

ಕುಶಾಲನಗರದಲ್ಲಿ ಕೇಂದ್ರ ಸಚಿವ ಹೆಗಡೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

January 31, 2019

ಕುಶಾಲನಗರ: ಜವಬ್ದಾರಿ ಯುತ ಸ್ಥಾನದಲ್ಲಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಸಂವಿಧಾನ ವಿರೋಧಿತನ ಪ್ರದರ್ಶಿಸಿದ್ದು, ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕೈ ಬಿಡ ಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಕಾರ್ಯ ಕರ್ತರು ಪಟ್ಟಣದ ಬೈಚನಹಳ್ಳಿ ಮಾರಮ್ಮ ದೇವಸ್ಥಾನದಿಂದ ಕಾರ್ಯಪ್ಪ ವೃತ್ತದವ ರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಯಕ್ರಮ ವೊಂದರ ಪ್ರಚೋದನಕಾರಿ ಭಾಷಣ ಮಾಡುತ್ತ ಹಿಂದು ಅಮಾಯಕ ಯುವಕರನ್ನು ಕೋಮು ಸಂಘರ್ಷಕ್ಕೆ ಪ್ರೇರಿಸಿರುವ ಹೆಗಡೆ ವಿರುದ್ಧ ಪೆÇಲೀಸರು ಸ್ವಯಂಪ್ರೇರಿತ ದೂರು ದಾಖ ಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಕಾರ್ಯಪ್ಪ ವೃತ್ತದಲ್ಲಿ ಅರ್ಧತಾಸು ಮಾನವ ಸರಪಳಿ ನಿರ್ಮಿ ಸಿದ ಪ್ರತಿಭಟನಾಕಾರರು ಸಚಿವ ಹೆಗಡೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿದರು. ರಸ್ತೆ ತಡೆ ನಡೆಸಿದ ಪರಿಣಾಮ ವಾಹನ ಸಂಚಾರಕ್ಕೆ ಕೆಲಕಾರ ತೊಂದರೆ ಉಂಟಾಯಿತು.

ನಂತರ ಕಂದಾಯ ಅಧೀಕ್ಷಕ ಮಧು ಅವರ ಮೂಲಕ ರಾಷ್ಟ್ರಪತಿಗಳಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭ ಜಿಪಂ ಸದಸ್ಯೆ ಕೆ.ಪಿ. ಚಂದ್ರಕಲಾ, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಜಿಲ್ಲಾ ಕಾಂಗ್ರೆ ಸ್‍ನ ಕೆ.ಕೆ.ಮಂಜುನಾಥ್ ಕುಮಾರ್, ಡಿಸಿಸಿ ಕಾರ್ಯದರ್ಶಿ ಜೆ.ಫಿಲೋಮಿನಾ, ಕೂಡು ಮಂಗಳೂರು ಗ್ರಾಪಂ ಅಧ್ಯಕ್ಷ ಲಕ್ಷ್ಮೀರವಿ, ಎಪಿಎಂಸಿ ಅಧ್ಯಕ್ಷ ರಮೇಶ್, ನಿರ್ದೇಶಕ ಶಶಿಭೀಮಯ್ಯ, ಪಪಂ ಮಾಜಿ ಅಧ್ಯಕ್ಷ ಎಚ್.ಜೆ.ಕರಿಯಪ್ಪ, ಪಪಂ ಸದಸ್ಯ ಪ್ರಮೋದ್ ಮುತ್ತಪ್ಪ, ಪ್ರಾಥಮಿಕ ಕೃಷಿಪತ್ತಿನ ಅಧ್ಯಕ್ಷ ಬಿ.ಎ.ಅಬ್ದುಲ್ ಖಾದರ್, ಕಲೀಂಉಲ್ಲಾ, ದಸಂಸ ಜಿಲ್ಲಾ ಸಂಚಾಲಕ ಕೆ.ಬಿ.ರಾಜು, ಮುಖಂಡರಾದ ಶಿವಕುಮಾರ್, ಶಾಜಿ, ನಟೇಶ್ ಗೌಡ, ಕೆ.ಎನ್.ಅಶೋಕ್ ಪಾಲ್ಗೊಂಡಿದ್ದರು.

Translate »