ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ
ಚಾಮರಾಜನಗರ

ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ

February 5, 2019

ಗುಂಡ್ಲುಪೇಟೆ: ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ಗ್ರಾಮೀಣ ಪ್ರದೇಶದ ರಸ್ತೆಗಳ ಕಾಮಗಾರಿ ಮಾಡಲಾಗುತ್ತಿದೆ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು.

ತಾಲೂಕಿನ ಕುರುಬರಹುಂಡಿ ಸಮೀಪದ ನಾಗರತ್ನಮ್ಮ ಕಾಲೋನಿಯಲ್ಲಿ 10 ಲಕ್ಷ ರೂ.ಗಳ ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಚುನಾವಣೆಯಲ್ಲಿ ಜನತೆಗೆ ನೀಡಿದ ಭರವಸೆಯಂತೆ ಗ್ರಾಮಾಂತರ ಪ್ರದೇಶದಲ್ಲಿ ಸಂಚಾರಕ್ಕೆ ತೊಂದರೆಯಾಗಿದ್ದ ಹತ್ತು ಹಲವು ರಸ್ತೆಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಎನ್.ಮಲ್ಲೇಶ್, ಜಿಪಂ ಸದಸ್ಯೆ ರತ್ನಮ್ಮ ಶ್ರೀಕಂಠಪ್ಪ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಹೊರೆಯಾಲ ಮಹೇಶ್, ಮುಖಂಡ ದೊಡ್ಡಹುಂಡಿ ಜಗದೀಶ್, ರವಿ ಇತರರಿದ್ದರು.

Translate »