ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11 ಕೆ.ವಿ. ಹುಲ್ಲಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದೆ. ಫೆ.9ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಇಟ್ಟಿಗೆಗೂಡು, ಶಿರಮಳ್ಳಿ, ಹೆಗ್ಗಡಹಳ್ಳಿ, ಹಗಿನವಾಳು, ರಾಂಪುರ, ಹುಲ್ಲಹಳ್ಳಿ, ನೆಲ್ಲಿತಾಳಪುರ, ಕುರಿಹುಂಡಿ, ಹರದನಹಳ್ಳಿ ಮತ್ತು ದುಗ್ಗಳ್ಳಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ನಿಲುಗಡೆಯಾಗಲಿದೆ ಎಂದು ನಂಜನಗೂಡು ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
