ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ
ಕೊಡಗು

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ

February 28, 2019

ಮಡಿಕೇರಿ: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯು ಮಾರ್ಚ್ 1 ರಿಂದ 18 ರವರೆಗೆ ನಡೆಯಲಿದ್ದು, ಪರೀಕ್ಷೆ ಸಿದ್ಧತೆ ಬಗ್ಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸಭೆಯಲ್ಲಿ ಮಾತನಾಡಿದ ಅವರು, ದ್ವಿತೀಯ ಪಿಯು ಮತ್ತು ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳು ವುದು, ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸುವುದು, ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ತಂಡಗಳ ನಿಯೋಜನೆ ಮತ್ತಿತರ ಕ್ರಮಕ್ಕೆ ನಿರ್ದೇಶನ ನೀಡಿದರು. ಪರೀಕ್ಷೆ ಸಂಬಂಧ ಅಗತ್ಯ ಸಂಖ್ಯೆಯ ವಾಹನಗಳ ನಿಯೋಜನೆ ಮಾಡಬೇಕು. ಸಮಸ್ಯೆಗಳಿದ್ದಲ್ಲಿ ತಕ್ಷಣವೇ ಮಾಹಿತಿ ನೀಡಬೇಕು ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಕೆಂಚಪ್ಪ ಅವರು, ಜಿಲ್ಲೆಯಲ್ಲಿ ಒಟ್ಟು 16 ಪರೀಕ್ಷಾ ಕೇಂದ್ರಗಳಿವೆ. ಮಡಿಕೇರಿ ತಾಲೂಕಿನಲ್ಲಿ 5, ಸೋಮವಾರಪೇಟೆ ತಾಲೂಕಿನಲ್ಲಿ 6 ಮತ್ತು ವಿರಾಜಪೇಟೆ ತಾಲೂಕಿನ 5 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

5,165 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 2,360 ಬಾಲಕರು ಮತ್ತು 2,805 ಬಾಲಕಿಯರಿದ್ದಾರೆ. ಕಲಾ ವಿಭಾಗದಲ್ಲಿ 1281, ವಾಣಿಜ್ಯ 2706, ವಿಜ್ಞಾನ ವಿಭಾಗದಲ್ಲಿ 1178 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಒಟ್ಟು 6,893 ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಮಡಿಕೇರಿ ತಾಲೂಕಿನಲ್ಲಿ 1956, ವಿರಾಜಪೇಟೆ ತಾಲೂಕಿನಲ್ಲಿ 2,216 ಮತ್ತು ಸೋಮವಾರಪೇಟೆ ತಾಲೂಕಿನಲ್ಲಿ 2621 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಚ್ಚಾಡೊ ಅವರು ಮಾಹಿತಿ ನೀಡಿದರು.

ಈ ಸಂದರ್ಭ ಜಿಲ್ಲಾ ಖಜಾನಾಧಿಕಾರಿ ಸತೀಶ್, ಪ್ರಾದೇಶಿಕ ಸಾರಿಗೆ ಇಲಾಖೆಯ ವ್ಯವಸ್ಥಾಪಕ ಶಿವಣ್ಣ, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತಿತÀರರು ಹಾಜರಿದ್ದರು.

Translate »