ಹಾಸನ: ನಗರದಲ್ಲಿ ಸೋಮ ವಾರ ಜಿಲ್ಲಾಡಳಿತ, ಹಸಿರು ಭೂಮಿ ಪ್ರತಿಷ್ಠಾನ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗ ದಿಂದ ಅರ್ಥಪೂರ್ಣವಾಗಿ ವಿಶ್ವ ಭೂ ದಿನ ಆಚರಿಸಲಾಯಿತು.
ನಗರದ ಹೇಮಾವತಿ ವೃತ್ತದಿಂದ ಜಿಲ್ಲಾಧಿ ಕಾರಿ ಕಚೇರಿಯವರೆಗೆ ಪರಿಸರ ಕಾಳಜಿ ಸಾರುವ ಹಾಗೂ ವಾಯುಮಾಲಿನ್ಯ ನಿಯಂ ತ್ರಣದ ಅನಿವಾರ್ಯತೆ ತಿಳಿಸುವ ನಿಟ್ಟಿನಲ್ಲಿ ಕಾಲ್ನಡಿಗೆ ಜಾಗೃತಿ ಜಾಥಾ ನಡೆಯಿತು.
ನಂತರ ಜಿಲ್ಲಾಧಿಕಾರಿ ಕಚೇರಿ ಆವರಣ ದಿಂದ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ವಿಶೇಷ ಸೈಕಲ್ ಜಾಥಾಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ಎನ್.ವಿಜಯ್‍ಪ್ರಕಾಶ್ ಚಾಲನೆ ನೀಡಿದರು.
ಈ ವೇಳೆ ಜಿಲ್ಲಾ ಸೆಷನ್ಸ್ ನ್ಯಾಯಾ ಧೀಶ ಕೆ.ಎಸ್.ತಿಮ್ಮಣ್ಣಚಾರ್ ಪ್ರತಿಜ್ಞಾವಿಧಿ ಬೋಧಿಸಿದರು. ಬಳಿಕ ಮಾತನಾಡಿದ ಅವರು, ಪರಿಸರ ಸಂರಕ್ಷಣೆಗೆ ಪ್ರತಿ ಯೊಬ್ಬರ ಕೊಡುಗೆ ಅಗತ್ಯ. ಕೇವಲ ವಿಶ್ವ ಭೂ ದಿನದಂದು ಖಾಸಗಿ ವಾಹನಗಳಿಗೆ ರಜೆ ನೀಡಿ ಎಂಬ ಆಚರಣೆಯನ್ನು ಸೀಮಿತಗೊಳಿಸದೇ ಇದೊಂದು ನಿರಂ ತರವಾಗಿ ಚಳವಳಿಯ ರೂಪದಲ್ಲಿ ನಡೆಯಬೇಕು. ಎಲ್ಲಾ ರೀತಿಯ ಪರಿಸರ ಮಾಲಿನ್ಯ ತಡೆಗೆ ಸರ್ಕಾರಿ ಇಲಾಖೆ, ಸಂಘ ಸಂಸ್ಥೆಗಳು ಕೈ ಜೋಡಿಸಿ ಶ್ರಮಿಸ ಬೇಕು ಎಂದು ಸಲಹೆ ನೀಡಿದರು.
ಜಿಪಂ ಸಿಇಓ ಡಾ.ಕೆ.ಎನ್.ವಿಜಯ್ ಪ್ರಕಾಶ್ ಮಾತನಾಡಿ, ಪರಿಸರ ಮಾಲಿನ್ಯ ನಿಯಂತ್ರಣ, ಜಲ ಸಂರಕ್ಷಣೆ ಇವು ಜಾಗತಿಕ ತುರ್ತು ಅಗತ್ಯಗಳಾಗಿವೆ. ಇದು ಎಲ್ಲರ ಸಾಮಾಜಿಕ ಹೊಣೆಗಾರಿಕೆ ಯಾಗಿದೆ. ಜಲಾಮೃತ ಸೇರಿದಂತೆ ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾ ಯಿತಿ ಮೂಲಕ ಹಲವು ರೀತಿಯ ಜಲ ಮರುಪೂರ್ಣ, ಜಲ ಸಂರಕ್ಷಣೆ ಕಾರ್ಯ ವನ್ನು ಕೈಗೊಳ್ಳಲಾಗುವುದು ಎಂದರು.
ಕಾಲ್ನಡಿಗೆಯಲ್ಲಿ ಕಚೇರಿಗೆ ಆಗಮಿಸಿದ ಡಿ.ಸಿ, ಸಿ.ಇ.ಓ: ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹಾಗೂ ಜಿಲ್ಲಾ ಪಂಚಾ ಯಿತಿ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಡಾ.ಕೆ.ಎನ್.ವಿಜಯ್ ಪ್ರಕಾಶ್, ಉಪವಿಭಾಗಾಧಿಕಾರಿ ಡಾ.ಹೆಚ್.ಎಲ್. ನಾಗರಾಜ್, ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ, ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸಗೌಡ, ಮತ್ತಿತರರು ಇಂದು ಕಾಲ್ನಡಿಗೆಯಲ್ಲಿಯೇ ತಮ್ಮ ಕಚೇರಿಗೆ ಆಗಮಿಸಿ ಗಮನ ಸೆಳೆದರು.
ಈ ಸಂದರ್ಭದಲ್ಲಿ ವಿವಿಧ ನ್ಯಾಯಾ ಧೀಶರು, ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಎಲ್.ವೈಶಾಲಿ, ಉಪವಿಭಾಗಾಧಿಕಾರಿ ಡಾ.ಹೆಚ್.ಎಲ್.ನಾಗರಾಜ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ, ಮುಖ್ಯ ಲೆಕ್ಕಾಧಿಕಾರಿ ಶ್ರೀನಿ ವಾಸಗೌಡ, ಹಸಿರು ಭೂಮಿ ಪ್ರತಿಷ್ಠಾನದ ಪ್ರಮುಖರಾದ ಆರ್.ಪಿ.ವೆಂಕಟೇಶ್ ಮೂರ್ತಿ, ರಾಜೇಗೌಡ, ಡಾ.ಸಾವಿತ್ರಿ, ಡಾ. ಭಾರತಿ ರಾಜಶೇಖರ್, ಎಸ್.ಎಸ್. ಪಾಷಾ, ಅಹಮ್ಮದ್ ಹಗರೆ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಆರ್.ಉದಯ್ ಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶ್ರೀನಿ ವಾಸ್, ವಕೀಲರ ಸಂಘದ ಅಧ್ಯಕ್ಷ ಜೆ.ಪಿ.ಶೇಖರ್ ಸೇರಿದಂತೆ ವಿವಿಧ ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.
ಗಮನ ಸೆಳೆದ ಮೆರವಣಿಗೆ
ಪರಿಸರ ಜಾಗೃತಿ ಮೂಡಿಸಲು ಆಯೋಜಿಸಲಾಗಿದ್ದ ಮೆರವಣಿಗೆಯಲ್ಲಿ ಸೈಕಲ್‍ಗಳು ಹಾಗೂ ಕುದುರೆಗಳು ವಿಶೇಷ ಆಕರ್ಷಣೆಯಾಗಿದ್ದವು. ಜೊತೆಗೆ ನೂರಾರು ಮಂದಿ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಪರಿಸರ ಕಾಳಜಿಯನ್ನು ಪ್ರದರ್ಶಿಸಿದ್ದು. ವಿಶೇಷವಾಗಿತ್ತು. ಜಾಥಾದಲ್ಲಿ ಜಿಲ್ಲೆಯ ನ್ಯಾಯಾಧೀಶರು, ಅಧಿಕಾರಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಖಾಸಗಿ ವಾಹನಗಳಿಗೆ ರಜೆ
ಭೂಮಿಯ ತಾಪಮಾನ ತಗ್ಗಿಸುವ ಪ್ರಯತ್ನದ ಸಾಂಕೇತಿಕ ರೂಪವಾಗಿ ಇಂದು ಖಾಸಗಿ ವಾಹನಗಳಿಗೆ ರಜೆ ಕೊಡಿ ಎಂಬ ಮನವಿ ಮಾಡಲಾಯಿತು. ಇದಕ್ಕೆ ಹಲವು ಅಧಿಕಾರಿಗಳು, ಸಾರ್ವಜನಿಕರು ಪೂರಕ ಸ್ಪಂದನೆ ನೀಡಿದರು.
ಅಧಿಕಾರಿಗಳು ಕಾಲ್ನಡಿಗೆಯಲ್ಲಿ ಕಚೇರಿಗೆ ಬಂದರೆ ಸಾರ್ವಜನಿಕರು ತಮ್ಮ ಬೈಕ್, ಕಾರುಗಳನ್ನು ಮನೆಯಲ್ಲಿಯೇ ಬಿಟ್ಟು ಕಾಲ್ನಡಿಗೆ ಹಾಗೂ ಬಸ್‍ಗಳ ಮೂಲಕ ಓಡಾಡಿದ್ದು ವಿಶೇಷವಾಗಿತ್ತು. ಇದೇ ವೇಳೆ ಶ್ರೀಲಂಕಾದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದರು.
ಪ್ರಶಂಸೆ ಪಡೆದ ವನ ಸಂವರ್ಧನ ಕಾರ್ಯಕ್ರಮ
ಹಸಿರು ಭೂಮಿ ಪ್ರತಿಷ್ಠಾನ, ಅರಣ್ಯ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ ಜವೇನಹಳ್ಳಿ ಕೆರೆ ಆವರಣದಲ್ಲಿ ವನ ಸಂವರ್ಧನ ಕಾರ್ಯಕ್ರಮ ನಡೆಯಿತು.
ಸಿಇಓ ಡಾ.ಕೆ.ಎನ್.ವಿಜಯ್‍ಪ್ರಕಾಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಹಾಗೂ ವಿವಿಧ ಗಣ್ಯರ ಸಮ್ಮುಖದಲ್ಲಿ ವಿವಿಧ ಕಾಡು ಜಾತಿಯ ಸಸಿ ನೆಡಲಾಯಿತು.
ನಂತರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಮಾತನಾಡಿ, ಹಾಸನದಲ್ಲಿ ಹಸಿರು ಭೂಮಿ ಪ್ರತಿಷ್ಠಾನ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ನಡೆಸುತ್ತಿರುವ ಪರಿಸರ ಜಾಗೃತಿ ಚಟುವಟಿಕೆಗಳು ಎಲ್ಲರಿಗೂ ಅನುಕರಣೀಯ. ಪ್ರತಿಯೊಬ್ಬರೂ ಇದಕ್ಕೆ ಕೈಜೋಡಿಸಬೇಕು ಎಂದರು.
ಪ್ರಕೃತಿಯ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದ್ದು ಜನರಲ್ಲಿ ಈ ಬಗ್ಗೆ ಅರಿವು ಮೂಡಿಸುವ ಪ್ರಯತ್ನಗಳಾಗಬೇಕು ಎಂದು ತಿಳಿಸಿದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕಿ ಸವಿತಾ, ಲೋಕೋಪಯೋಗಿ ಕಾರ್ಯಪಾಲಕ ಮಂಜುನಾಥ್, ಜಿಲ್ಲಾ ಪಂಚಾಯಿತಿ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಆನಂದ್ ಕುಮಾರ್, ಪಿ.ಎಂ.ಜಿ.ಎಸ್.ವೈ ವಿಭಾಗದ ಕಾರ್ಯಪಾಲಕ ಅಭಿಯಂತರ ವಾತ್ಸಲ್ಯ, ಉದ್ಯೋಗ ವಿನಿಮಯಾಧಿಕಾರಿ ವಿಜಯಲಕ್ಷ್ಮೀ, ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ ಸೇರಿದಂತೆ ಮತ್ತಿತರರು ಹಾಜರಿದ್ದರು.