ಹಿಂದುಳಿದ ವರ್ಗದ ದಾರಿದೀಪ ಅಂಬೇಡ್ಕರ್
ಹಾಸನ

ಹಿಂದುಳಿದ ವರ್ಗದ ದಾರಿದೀಪ ಅಂಬೇಡ್ಕರ್

May 6, 2019

ಬೇಲೂರು: ಹಿಂದುಳಿದ ಹಾಗೂ ತಳ ಸಮು ದಾಯಗಳ ಅಭಿವೃದ್ಧಿಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟು ದುಡಿದ ಮಹಾನ್ ಸ್ವಾಭಿಮಾನಿ ಡಾ.ಬಿ.ಆರ್.ಅಂಬೇಡ್ಕರ್. ಹಿಂದುಳಿದ ವರ್ಗಗಳ ದಾರಿದೀಪವಾಗಿದ್ದಾರೆ ಎಂದು ಕರ್ನಾ ಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ರಾಜ್ಯ ಸಂಘಟನಾ ಸಂಚಾಲಕ ಮಲ್ಲೇಶ್ ಅಂಬುಗ ಹೇಳಿದರು.
ತಾಲೂಕಿನ ಗೆಂಡೇಹಳ್ಳಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸ್ವಾಭಿಮಾನ ಸೇವಾ ಸಮಿತಿಯಿಂದ ಏರ್ಪಡಿಸಿದ್ದ ಡಾ.ಬಿ. ಆರ್.ಅಂಬೇಡ್ಕರ್ ಅವರ 128ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದು ವಿಶ್ವವೇ ಭಾರತದತ್ತ ನೋಡುವಂತೆ ಮಾಡಿದ ಮಹಾನ್ ಸಾಧಕರು ಅಂಬೇಡ್ಕರರು. ತಾವು ಬಾಲ್ಯದಲ್ಲಿ ಅನುಭವಿಸಿದ ನೋವನ್ನು ದೇಶದಲ್ಲಿ ಮತ್ತೆ ಯಾರೂ ಅನುಭವಿಸಬಾರದು ಎಂಬ ಉದ್ದೇಶದಿಂದ ಪ್ರಪಂಚದ ವಿವಿಧ ದೇಶಗಳಲ್ಲಿ ವಿದ್ಯಾಭ್ಯಾಸ ಮಾಡಿ, ಭಾರತ ದೇಶದ ಅಭಿವೃದ್ಧಿಗೆ ಮುನ್ನುಡಿ ಬರೆದÀರು. ಇವರು ದೇಶದ ಶೋಷಿತರ, ಕಾರ್ಮಿಕರ ಹಾಗೂ ಮಹಿಳೆಯರ ಪರವಾಗಿ ತಮ್ಮ ಹೋರಾಟದ ಮೂಲಕ ಎಲ್ಲರಿಗೂ ಸಮಾನವಾದ ಹಕ್ಕುಗಳನ್ನು ತಂದು ಕೊಟ್ಟರು ಎಂದರು.

ಭಾರತದ ಸಂವಿಧಾನ ರಚಿಸುವಲ್ಲಿ ಅಂಬೇಡ್ಕರ್ ಅವರು ಪ್ರಮುಖ ಪಾತ್ರ ವಹಿಸಿ ವಿಶ್ವವೇ ಮೆಚ್ಚುವಂತಹ ಸಂವಿಧಾನ ವನ್ನು ಬರೆದು ಪ್ರತಿಯೊಬ್ಬರಿಗೂ ಸಮಾನವಾದ ಹಕ್ಕು ನೀಡಿ ದರು. ಡಾ.ಬಿ.ಆರ್.ಅಂಬೇಡ್ಕರ್‍ರವರ ಆಶಯದಂತೆ ಎಲ್ಲರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ, ಸಂಘಟಿತರಾಗಬೇಕು. ಇಂತಹ ಮಹಾನ್ ನಾಯಕರ ಆದರ್ಶಗಳು ಇಂದು ಪ್ರಸ್ತುತ ವಾಗಿದ್ದು, ಪ್ರತಿಯೊಬ್ಬರೂ ಅಂಬೇಡ್ಕರ್‍ರವರು ಬರೆದ ಪುಸ್ತಕ ಗಳನ್ನು ಓದಿ, ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ದೇಶದ ಉತ್ತಮ ಪ್ರಜೆಯಾಗಿ ಸಮಾಜದ ಏಳಿಗೆಗೆ ಒಂದಾಗಿ ದುಡಿಯಬೇಕು ಎಂದು ಸಲಹೆ ನೀಡಿದರು.

ಕಳ್ಳೇರಿ ಗ್ರಾಪಂ ಅಧ್ಯಕ್ಷ ಜಗದೀಶ್ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ. ಅವರು ತಮ್ಮ ಸಂವಿಧಾನದ ಮೂಲಕ ದೇಶದ ಪ್ರತಿಯೊಬ್ಬ ರಿಗೂ ಅವಕಾಶ ಹಾಗೂ ಹಕ್ಕುಗಳನ್ನು ನೀಡಿ ಉತ್ತಮ ಜೀವನ ನಡೆಸಲು ಮಾರ್ಗದರ್ಶಕರಾಗಿದ್ದಾರೆ. ಅವರ ಜಯಂತಿ ಆಚರಿಸಿದರೆ ಸಾಲದು, ಅವರ ಆದರ್ಶಗಳನ್ನು ಇಂದಿನ ಯುವಕರು ಪಾಲಿಸಿ, ಅವರಂತೆ ದೇಶಕ್ಕೆ ಉತ್ತಮ ಕೊಡುಗೆ ನೀಡುವುದಕ್ಕೆ ಮುಂದಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಜನಪರ ಸಾಹಿತ್ಯ ವೇದಿಕೆ ಅಧ್ಯಕ್ಷ ಬಿ.ರುದ್ರಯ್ಯ, ದಸಂಸ (ಅಂಬೇಡ್ಕರ್ ವಾದ)ಹಾಸನ ಜಿಲ್ಲಾ ಪ್ರಧಾನ ಸಂಚಾಲಕ ಬಿ.ಎಲ್.ಲಕ್ಷ್ಮಣ್, ಜಿಲ್ಲಾ ಜಾಗೃತ ವಿದ್ಯಾರ್ಥಿ ವೇದಿಕೆ ಅಧ್ಯಕ್ಷ ಚಂದ್ರು, ಬಿವಿಎಸ್ ಸಂಚಾಲಕ ಚಿದಂಬರ, ಕಳ್ಳೇರಿ ಗ್ರಾಪಂ ಸದಸ್ಯರಾದ ಮೀನಾಕ್ಷಿ, ಭದ್ರೇಗೌಡ, ಸರೋಜ, ಚಂದ್ರಮ್ಮ, ಡಾ.ಬಿ.ಆರ್.ಅಂಬೇಡ್ಕರ್ ಸ್ವಾಭಿಮಾನ ಸೇವಾ ಸಮಿತಿಯ ದ್ಯಾವಯ್ಯ, ಮಂಜುನಾಥ್, ಶಿವಕುಮಾರ್, ಮಹೇಶ್, ಸಿದ್ದಯ್ಯ, ನಾಗೇಶ್, ಬಸವರಾಜು, ಲೋಕೆಶ್, ರಮೇಶ್ ಇದ್ದರು.

Translate »