ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಹಿಂದಿಯೇತರ ರಾಜ್ಯಗಳುಜೂ.15ರಂದು ಬೆಂಗಳೂರಲ್ಲಿ ಶಕ್ತಿ ಪ್ರದರ್ಶನ
ಮೈಸೂರು

ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಹಿಂದಿಯೇತರ ರಾಜ್ಯಗಳುಜೂ.15ರಂದು ಬೆಂಗಳೂರಲ್ಲಿ ಶಕ್ತಿ ಪ್ರದರ್ಶನ

June 4, 2019

ಬೆಂಗಳೂರು: ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿಯಡಿ ಹಿಂದಿ ಭಾಷೆ ಹೇರಲು ಮುಂದಾಗಿರುವುದರ ವಿರುದ್ಧ ಈ ತಿಂಗಳ 15ರಂದು ಬೆಂಗಳೂರಿನಲ್ಲಿ ಹಿಂದಿಯೇತರ ರಾಜ್ಯಗಳ ಬೃಹತ್ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜಾಗಿದೆ.

ಸಮಾವೇಶದಲ್ಲಿ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ತೆಲಂಗಾಣ, ಗೋವಾ ಹಾಗೂ ಪುದುಚೇರಿ ಸೇರಿದಂತೆ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳು, ಪ್ರಮುಖ ರಾಜಕೀಯ ಮುಖಂಡರು, ಸಾಹಿತಿಗಳು, ಬರಹಗಾರರು, ಚಿಂತಕರು ಪಾಲ್ಗೊಳ್ಳ ಲಿದ್ದಾರೆ. ಹೋರಾಟದ ರೂಪುರೇಷೆಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಸಿದ್ಧಪಡಿ ಸಿದ್ದು, ಭಾಷಾ ಕಲಿಕೆ ವಿವೇಚನೆ ಅಧಿ ಕಾರವನ್ನು ಆಯಾ ರಾಜ್ಯಗಳಿಗೆ ಬಿಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಲಿದೆ. ಹಿಂದಿ ಭಾಷೆ ಹೇರಿಕೆ ಯಿಂದ ಆಯಾ ರಾಜ್ಯಗಳ ಮಾತೃಭಾಷೆ ನಾಶವಾ ಗುತ್ತದೆ, ಇದಕ್ಕೆ ಅವಕಾಶ ನೀಡದೆ ಹೋರಾಟ ನಡೆ ಸಬೇಕು ಎಂಬ ನಿರ್ಣಯವನ್ನು ಸಮಾವೇಶದಲ್ಲಿ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಹೋರಾಟಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಂಪೂರ್ಣ ಬೆಂಬಲ ದೊರೆತಿದೆ. ತಮಿಳುನಾಡಿನಲ್ಲಿ ಡಿಎಂಕೆ ಮುಖಂಡ ಸ್ಟ್ಯಾಲಿನ್ ಈಗಾಗಲೇ ಹಿಂದಿ ಭಾಷೆ ಹೇರಿಕೆ ವಿರುದ್ಧ ಕೇಂದ್ರ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ.

ಹಿಂದಿ ಹೇರಿಕೆ ವಿರೋಧಿ
ಹೋರಾಟಕ್ಕೆ ಚಂದ್ರಬಾಬು ನಾಯ್ಡು, ಜಗನ್‍ಮೋಹನರೆಡ್ಡಿ, ಪವನ್‍ಕಲ್ಯಾಣ್, ಚಂದ್ರಶೇಖರ್ ರಾವ್, ಕೇರಳದಿಂದ ಪಿಣರಾಯಿ ವಿಜಯನ್ ಸೇರಿದಂತೆ ಅನೇಕ ಗಣ್ಯರು ಕೈಜೋಡಿಸಿದ್ದಾರೆ.

ಹಿಂದಿ ಹೇರಿಕೆ ಸಹಿಸಲ್ಲ
ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಹಿಂದಿ ಹೇರಿಕೆ ಸಹಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ವೀಟ್‍ನಲ್ಲಿ ಅವರು, ಕನ್ನಡ ನಮ್ಮ ಅಸ್ಮಿತೆ, ನೆಲ, ಜಲ ಹಾಗೂ ಭಾಷೆ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲ, ರಾಜ್ಯದ ಜನಪ್ರತಿನಿಧಿಗಳು ಈ ಬಗ್ಗೆ ಪಕ್ಷಾತೀತ ಚಿಂತನೆ ಮಾಡಬೇಕು ಎಂದಿದ್ದಾರೆ. ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕ ವಿಷಯವಾಗಿರಬೇಕೇ ಹೊರತು ಕಡ್ಡಾಯವಾಗಬಾರದು, ಇದು ಮಗುವಿನ ಕಲಿಕೆಯ ಶಕ್ತಿ ಕುಂಠಿತಗೊಳಿಸುವುದಾಗಿದೆ. ಹಿಂದಿ ಹೇರಿಕೆ ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದ್ದು, ಪ್ರಾದೇಶಿಕ ಭಾಷೆ ಮತ್ತು ಸಂಸ್ಕøತಿಗೆ ಕೇಂದ್ರ ಸರ್ಕಾರ ಹೆಚ್ಚು ಒತ್ತು ನೀಡಬೇಕು. ಹೊಸ ಶಿಕ್ಷಣ ನೀತಿ ಕನ್ನಡಿಗರ ಭಾವನೆಗಳಿಗೆ ಧಕ್ಕೆಯಾಗಿದೆ, ಬಲವಂತವಾಗಿ ಹಿಂದಿ ಹೇರುವುದು ಏಕಪಕ್ಷೀಯ ನಿರ್ಧಾರವಾಗಲಿದೆ ಎಂದು ಅವರು ಹೇಳಿದ್ದಾರೆ.

 

Translate »