ಮೈಸೂರು: ಜನ ಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಪಂಗ ಡಕ್ಕೆ ಮೀಸಲಾತಿ ಸೌಲಭ್ಯವನ್ನು ಶೇ.7.5ರಷ್ಟು ಹೆಚ್ಚಿಸುವಂತೆ ಆಗ್ರಹಿಸಿ ಮೈಸೂರು ಜಿಲ್ಲಾ ನಾಯಕ ಸಂಘ-ಸಂಸ್ಥೆಗಳ ಒಕ್ಕೂಟದ ಕಾರ್ಯಕರ್ತರು ಮೈಸೂರು ಡಿಸಿ ಕಚೇರಿ ಬಳಿ ಗುರುವಾರ ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರದಿಂದ ರಾಜಕೀಯ, ಶೈಕ್ಷಣಿಕ ಹಾಗೂ ಔದ್ಯೋಗಿಕವಾಗಿ ಶೇ. 7.5ರಷ್ಟು ಮೀಸಲಾತಿ ಪಡೆಯುತ್ತಿದ್ದೇವೆ. ಆದರೆ ಕರ್ನಾಟಕ ರಾಜ್ಯದಲ್ಲಿ ಶೇ.7.5 ಮೀಸಲಾತಿ ಸೌಲಭ್ಯ ದೊರೆಯುತ್ತಿಲ್ಲ. ಇದ ರಿಂದ ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಜನಾಂಗದವರಿಗೆ ಅನ್ಯಾಯವಾಗುತ್ತಿದೆ. ಕೇಂದ್ರ ಸರ್ಕಾರ 1956ರಲ್ಲಿ ನೀಡಿದ್ದ ಆದೇಶದಂತೆ ರಾಜ್ಯದಲ್ಲಿ ಕೇವಲ ಶೇ. 3ರಷ್ಟು ಮೀಸಲಾತಿ ಪಡೆಯುತ್ತಿದ್ದೇವೆ. ಕೆಲವು ವರ್ಷಗಳಿಂದ ಹಲವು ಜಾತಿ ಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾ ಗಿದೆ. ಜನಸಂಖ್ಯೆ ಪ್ರಮಾಣ ಹೆಚ್ಚಾಗಿದ್ದರೂ ಮೀಸಲಾತಿ ಪ್ರಮಾಣ ಹೆಚ್ಚಿಸಿಲ್ಲ. ಇದು ನಮ್ಮ ಸಮಾಜಕ್ಕೆ ಆಗುತ್ತಿರುವ ಘೋರ ಅನ್ಯಾಯ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಭಾರತ ಸಂವಿಧಾನದ ಪರಿಚ್ಛೇದ 340, 341 ಮತ್ತು 342- 1949ರ ಪ್ರಕಾರ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಿದರೆ ಎಸ್ಟಿ ಜನಾಂ ಗಕ್ಕೆ ಶೇ.7.5ಕ್ಕಿಂತ ಹೆಚ್ಚಿನ ಮೀಸಲಾತಿ ನೀಡ ಬೇಕು. ಆದರೆ 1956ರಿಂದ ಇಲ್ಲಿಯವ ರೆಗೂ ಶೇ.3ರಷ್ಟು ಮಾತ್ರ ಮೀಸಲಾತಿ ನೀಡುತ್ತಿರುವುದು ಸರಿಯಲ್ಲ. ಇದು ಸಂವಿ ಧಾನ ವಿರೋಧಿ ಮತ್ತು ಸಾಮಾಜಿಕ ನ್ಯಾಯ ವಿರೋಧಿ ಆಡಳಿತ ಎಂದು ದೂರಿದರು.
ಪ್ರಬಲ ರಾಜಕೀಯ ಮುಖಂಡರ ಒತ್ತ ಡಕ್ಕೆ ಮಣಿದು ಪರಿಶಿಷ್ಟ ಪಂಗಡ ಪಟ್ಟಿಗೆ ಇನ್ಯಾವುದೇ ಜಾತಿಗಳನ್ನು ಸೇರಿಸ ಬಾರದು ಎಂಬ ಸುಗ್ರೀವಾಜ್ಞೆ ತರಬೇಕು. ಪರಿಶಿಷ್ಟ ಪಂಗಡದ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಇಲ್ಲವಾಗಿಸಬೇಕು. ರಾಜ್ಯದಲ್ಲಿ ಬಾಕಿಯಿರುವ ಎಲ್ಲಾ ಎಸ್ಸಿ, ಎಸ್ಟಿ ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡ ಬೇಕು ಎಂದು ಆಗ್ರಹಿಸಿದರು. ಪ್ರತಿ ಭಟನೆಯಲ್ಲಿ ರಾಜ್ಯ ಬಿಜೆಪಿ ಎಸ್ಟಿ ಮೋರ್ಚಾ ಕಾರ್ಯದರ್ಶಿ ಎಂ.ಅಪ್ಪಣ್ಣ, ವಕೀಲ ಪಡುವಾರ ಹಳ್ಳಿ ಎಂ.ರಾಮಕೃಷ್ಣ, ಕಾಟೂರು ದೇವರಾಜು, ದ್ಯಾವಪ್ಪ ನಾಯಕ, ಹಿನಕಲ್ ಕೆಂಪ ನಾಯಕ, ಉದ್ಬೂರು ಮಹದೇವಸ್ವಾಮಿ, ಪ್ರಭಾಕರ್, ಕಡಕೊಳ ನಾರಾಯಣ, ರಾಜು ಮಾರ್ಕೆಟ್, ಎಂ.ಮಹೇಶ್, ಶ್ರೀಧರ್, ಡಿ. ಪ್ರಕಾಶ್ ಇನ್ನಿತರರು ಪಾಲ್ಗೊಂಡಿದ್ದರು.