ಎಸ್.ಎಂ.ಕೃಷ್ಣ ಸಹೋದರ ಎಸ್.ಎಂ.ಶಂಕರ್ ನಿಧನ
ಮೈಸೂರು

ಎಸ್.ಎಂ.ಕೃಷ್ಣ ಸಹೋದರ ಎಸ್.ಎಂ.ಶಂಕರ್ ನಿಧನ

June 23, 2019

ಬೆಂಗಳೂರು, ಜೂ. 22 (ಕೆಎಂಶಿ) – ವಿಧಾನ ಪರಿಷತ್ ಮಾಜಿ ಸದಸ್ಯ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಸಹೋದರ ಎಸ್.ಎಂ. ಶಂಕರ್ (83) ಇಂದಿಲ್ಲಿ ನಿಧನ ಹೊಂದಿದರು. ಕಳೆದ ಕೆಲವು ದಿನ ಗಳಿಂದ ಅನಾ ರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ರಾದರು. ಶಂಕರ್ ಅವರು ಬ್ಲಾಕ್ ಕಾಂಗ್ರೆಸ್ ಮಟ್ಟದಿಂದ ರಾಜಕೀಯ ಪ್ರವೇಶಿಸಿ ಕಾಂಗ್ರೆಸ್ ಪಕ್ಷದ ಸಂಘ ಟನೆಯಲ್ಲಿ ತೊಡಗಿಸಿಕೊಂಡಿದ್ದರು. ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಯಾಗಿದ್ದ ಸಂದರ್ಭದಲ್ಲಿ ಮಂಡ್ಯ ಸ್ಥಳೀಯ ಸಂಸ್ಥೆಗಳಿಂದ ಅವರು ವಿಧಾನ ಪರಿಷತ್‍ಗೆ ಆಯ್ಕೆಯಾಗಿ ದ್ದರು. ಶಂಕರ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯ, ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್, ಮಂಡ್ಯ ಸಂಸದ ರಾದ ಸುಮಲತಾ ಅಂಬರೀಶ್ ಇತರ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Translate »