ಇಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ
ಮೈಸೂರು

ಇಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ

June 29, 2019

ಮೈಸೂರು, ಜೂ.28- ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆ ಗಳ ಪ್ರಾಧಿಕಾರ, ವಕೀಲರ ಸಂಘ(ರಿ.) ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸೊಸೈಟಿ ಹಾಗೂ ಸ್ವಯಂ ಸೇವಾ ಸಂಸ್ಥೆ ಗಳ ಸಂಯುಕ್ತಾಶ್ರಯದಲ್ಲಿ ಜೂ.29ರಂದು ಬೆಳಿಗ್ಗೆ 10 ಗಂಟೆಗೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆಯನ್ನು ಜೆ.ಎಲ್.ಬಿ ರಸ್ತೆಯ ಮುಡಾ ಕಚೇರಿ ಪಕ್ಕ ಇರುವ ಇನ್ಸ್‍ಟಿಟ್ಯೂಟ್ ಆಫ್ ಇಂಜಿನಿ ಯರ್ಸ್‍ನಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಅಧ್ಯಕ್ಷ ಎಸ್.ಕೆ.ಒಂಟಿಗೋಡಿ ಕಾರ್ಯಕ್ರಮ ಉದ್ಫಾಟಿಸಲಿದ್ದಾರೆ. ಅಪರ ಜಿಲ್ಲಾಧಿಕಾರಿ ಬಿ.ಆರ್.ಪೂರ್ಣಿಮ ಅಧ್ಯಕ್ಷತೆ ವಹಿಸಲಿದ್ದಾರೆ, ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಸದಸ್ಯ ಕಾರ್ಯದರ್ಶಿ ಬಿ.ಪಿ.ದೇವಮಾನೆ, ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್ ಹಾಗೂ ಉಪವಿಭಾಗಾಧಿಕಾರಿ ಶಿವೇಗೌಡ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ಅಂದು ಬೆಳಿಗ್ಗೆ 11.30ರಿಂದ ಮಧ್ಯಾಹ್ನ 2 ಗಂಟೆವರೆಗೆ “ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಕಾಯ್ದೆ” ಕುರಿತು ಹಿರಿಯ ವಕೀಲ ಸುಂದರ್‍ರಾಜ್ ಇವರಿಂದ ಉಪನ್ಯಾಸ ನಡೆಯಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಕೆ.ಪದ್ಮ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಪಾಂಡುರಂಗ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಹೆಚ್.ಎಸ್.ಬಿಂಧ್ಯಾ, ವಕೀಲರ ಸಂಘದ ಅಧ್ಯಕ್ಷ ಆನಂದ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ಸೋಮಶೇಖರ್, ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ ಉಪನಿರ್ದೇಶಕ ನರೇಂದ್ರಬಾಬು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೆಂಕಟೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ರಾಜು ಹಾಗೂ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಯ ನಿರ್ದೇಶಕಿ ಸರಸ್ವತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Translate »