ಕಾಯ್ದೆಗಳಿಂದಷ್ಟೇ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಾಧ್ಯವಾಗದು, ಸಾರ್ವಜನಿಕ ಸ್ಪಂದನೆಯೂ ಮುಖ್ಯ
ಮೈಸೂರು

ಕಾಯ್ದೆಗಳಿಂದಷ್ಟೇ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಾಧ್ಯವಾಗದು, ಸಾರ್ವಜನಿಕ ಸ್ಪಂದನೆಯೂ ಮುಖ್ಯ

June 30, 2019

ಮೈಸೂರು,ಜೂ.29(ಪಿಎಂ)- ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾಯ್ದೆ ಗಳಿದ್ದರಷ್ಟೇ ಸಾಲದು. ಸಾರ್ವಜನಿಕ ಸ್ಪಂದ ನೆಯೂ ಅಷ್ಟೇ ಮುಖ್ಯ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಹೇಳಿದರು.

ಮೈಸೂರಿನ ಇನ್ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಸಂಸ್ಥೆ ಸಭಾಂಗಣದಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸೊಸೈಟಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ `ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಲ್ಲಾ ಮಕ್ಕಳಿಗೂ ಕಡ್ಡಾಯ ಶಿಕ್ಷಣ ದೊರೆಯಬೇಕು. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಅಧಿ ಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು. ಜೀತ ಪದ್ಧತಿ ವಿರುದ್ಧ ಸಾಕಷ್ಟು ಹೋರಾಟಗಳು ನಡೆದಿವೆ. ಇದ ಕ್ಕಾಗಿ ಸಮಾಜ ಬಹಳಷ್ಟು ಶ್ರಮಿಸಿದೆ. ಆದರೆ ಬಾಲಕಾರ್ಮಿಕ ಪದ್ಧತಿ ನಿರ್ಮೂ ಲನೆಗೆ ಸಮಾಜದಿಂದ ಪರಿಣಾಮಕಾರಿ ಸ್ಪಂದನೆ ದೊರೆತಿಲ್ಲ. ಕಾರ್ಮಿಕ ಇಲಾ ಖೆಯು ಕಾರ್ಮಿಕ ಸಂಘಟನೆಗಳೊಡನೆ ಸಮನ್ವಯ ಸಾಧಿಸಿ ಬಾಲಕಾರ್ಮಿಕರನ್ನು ಪತ್ತೆ ಹಚ್ಚಿ ಅವರ ರಕ್ಷಣೆಗೆ ಮುಂದಾಗ ಬೇಕು ಎಂದು ಸಲಹೆ ನೀಡಿದರು.

ಉದ್ಘಾಟನೆ ನೆರವೇರಿಸಿದ ಪ್ರಧಾನ ಜಿ¯್ಲÁ ಮತ್ತು ಸತ್ರ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ.ವಂಟಿಗೋಡಿ ಮಾತನಾಡಿ, ಇಂದಿಗೂ ಬಾಲಕಾರ್ಮಿಕ ವಿರೋಧಿ ದಿನಾ ಚರಣೆ ಮಾಡುತ್ತೇವೆ ಎಂದರೆ ಈ ಪದ್ಧತಿ ಸಮಾಜದಲ್ಲಿ ಜೀವಂತವಾಗಿದೆ ಎಂದರ್ಥ. ಮಕ್ಕಳನ್ನು ಶಾಲೆಗೆ ಕಳುಹಿಸದೇ ದುಡಿ ಮೆಗೆ ದೂಡುವುದಕ್ಕೆ ಬಡತನ ಪ್ರಮುಖ ಕಾರಣ. ಏನೇ ಆದರೂ ಮಕ್ಕಳನ್ನು ದುಡಿಮೆಗೆ ಹಚ್ಚುವುದು ಅಪರಾಧ. ಮಕ್ಕಳ ಭವಿಷ್ಯ ಉಜ್ವಲಗೊಳ್ಳಲು ಶಿಕ್ಷಣ ದೊರೆಯಲೇ ಬೇಕು. ಕಾರ್ಮಿಕ ಇಲಾಖೆ ಒಂದರಿಂದಲೇ ಸಂಪೂರ್ಣವಾಗಿ ಈ ಅನಿಷ್ಟ ಪದ್ಧತಿ ಯನ್ನು ತೊಡೆದು ಹಾಕಲು ಸಾಧ್ಯವಿಲ್ಲ. ಸಾರ್ವಜನಿಕರೂ ಇದಕ್ಕೆ ಕೈ ಜೋಡಿಸ ಬೇಕು ಎಂದು ಹೇಳಿದರು. ಶಾಲಾ ಮಕ್ಕಳು ಹಾಗೂ ಸ್ವಯಂ ಸೇವಾ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಕಾರ್ಯ ಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿ ದ್ದರು. ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ಕುರಿತಂತೆ ಹಿರಿಯ ವಕೀಲ ಸುಂದರ್ ರಾಜ್ ಉಪನ್ಯಾಸ ನೀಡಿದರು. ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಬಿ.ಪಿ.ದೇವಮಾನೆ, ನಗರ ಪೆÇಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ, ಕಾರ್ಮಿಕ ಇಲಾಖೆ ಸಹಾಯಕ ನಿರ್ದೇಶಕ ಎ.ಸಿ.ತಮಣ್ಣ, ವಕೀಲರ ಸಂಘದ ಅಧ್ಯಕ್ಷ ಆನಂದ ಕುಮಾರ್ ಮತ್ತಿತರರು ಹಾಜರಿದ್ದರು.

Translate »