ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ನೇತೃತ್ವದಲ್ಲಿ ಆನೆ ಟಾಸ್ಕ್‍ಫೋರ್ಸ್ ಜಿಲ್ಲಾಮಟ್ಟದ ಸಮಿತಿ ಸಭೆ
ಹಾಸನ,ಜು.1- ಜಿಲ್ಲೆಯಲ್ಲಿ ಆನೆ ಹಾವಳಿ ನಿಯಂತ್ರಣಕ್ಕೆ ಅಗತ್ಯವಾಗಿ ಕೈ ಗೊಳ್ಳಬೇಕಾದ ಕ್ರಮಗಳ ಕುರಿತು ಅಧ್ಯ ಯನ ನಡೆಸಲು ಶೀಘ್ರದಲ್ಲೇ ತಜ್ಞರ ತಂಡ ವನ್ನು ಶ್ರೀಲಂಕಾಗೆ ಕಳುಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕೋಪಯೋಗಿ ಸಚಿವ ರಾದ ಹೆಚ್.ಡಿ.ರೇವಣ್ಣ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮ ವಾರ ಆನೆ ಟಾಸ್ಕ್‍ಫೋರ್ಸ್ ಸಮಿತಿಯ ಜಿಲ್ಲಾ ಮಟ್ಟದ ಸಭೆ ನಡೆಸಿದ ಸಚಿವರು, ವನ್ಯಜೀವಿಗಳ ಹಾವಳಿ ತಡೆಗಾಗಿ ಶಾಶ್ವತ ಪರಿಹಾರಕ್ಕೆ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯ. ಅದಕ್ಕಾಗಿ ಎಲ್ಲಾ ರೀತಿಯ ಅಧ್ಯಯನ, ಅಭಿಪ್ರಾಯ ಸಂಗ್ರಹ ಅಗತ್ಯ ಎಂದರು.
ಜಿಲ್ಲೆಯ ಮಲೆನಾಡು ಭಾಗದಲ್ಲಿ ಹಲವು ವರ್ಷಗಳಿಂದ ಆನೆ ಹಾವಳಿ ಮುಂದುವರಿದೇ ಇದೆ. ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕಿದೆ. ಜಿಲ್ಲಾಧಿ ಕಾರಿ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು, ಪರಿಸರವಾದಿಗಳ ಅಭಿ ಪ್ರಾಯಗಳನ್ನು ಸಂಗ್ರಹಿಸಿ ಕ್ರೋಢೀಕೃತ ಹಾಗೂ ವ್ಯವಸ್ಥಿತವಾದ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸಲ್ಲಿಸಿ ಎಂದು ಸಚಿವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಆನೆ ಹಾವಳಿ ತಡೆಗೆ ಹಾಗೂ ವೈಜ್ಞಾನಿಕ ರೀತಿಯ ಪರಿಹಾರ ಕ್ರಮಗಳಿಗೆ ಮುಂಬ ರುವ ವಿಧಾನಸಭಾ ಅಧಿವೇಶನಕ್ಕೆ ಮುನ್ನಾ ಅಥವಾ ನಂತರ ಮುಖ್ಯ ಮಂತ್ರಿಗಳ ಅಧ್ಯಕ್ಷತೆಯಲ್ಲಿ ಇನ್ನೊಂದು ಸುತ್ತಿನ ಪ್ರಮುಖರ ಸಭೆ ಕರೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೆಚ್.ಡಿ.ರೇವಣ್ಣ ಹೇಳಿದರು.
ಅರಣ್ಯ ಇಲಾಖೆಯಿಂದ ನೇಮಕವಾ ಗಿರುವ 120 ಸಿಬ್ಬಂದಿಗಳ ತಂಡದಿಂದ ಆನೆ ಓಡಿಸುವ, ಆನೆಗಳ ಓಡಾಟದ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡುವುದನ್ನು ಮಾಡಬೇಕು. ಇದು ಹೆಚ್ಚು ಪರಿಣಾಮ ಕಾರಿಯಾಗಿರಬೇಕು ಎಂದು ಸಚಿವರು ಸೂಚನೆ ನೀಡಿದರು.
ಸಕಲೇಶಪುರ ತಾಲೂಕಿನ ಆನೆ ಹಾವಳಿ ಪ್ರದೇಶಗಳಲ್ಲಿ ಅರಣ್ಯ ಕಾಲೇಜು ಪ್ರಾರಂಭಿ ಸುವ ಅಗತ್ಯವಿದೆ. ಅಲ್ಲದೇ, ಸ್ಥಳೀಯ ವಾಗಿ 2 ಮೊರಾರ್ಜಿ ವಸತಿ ಶಾಲೆ ಸ್ಥಾಪನೆಗೆ ಅಗತ್ಯ ಕ್ರಮಕೈಗೊಳ್ಳಲಾಗು ವುದು ಎಂದು ರೇವಣ್ಣ ಹೇಳಿದರು.
10 ಕೋಟಿ ರೂ. ಅನುದಾನ: ಬುರ ಡಾಳು ಬೋರೆ ಸೇರಿದಂತೆ ಜಿಲ್ಲೆಯಲ್ಲಿ ಅರಣ್ಯ ಪ್ರದೇಶದಲ್ಲಿರುವ ಪರಿಸರಕ್ಕೆ ಮಾರಕವಾದ ಸಸಿಗಳನ್ನು ತೆಗೆದು ವನ ಸ್ನೇಹಿ ಗಿಡಗಳನ್ನು ಮಾತ್ರ ನೆಡಬೇಕು. ಅರಣ್ಯ ಅಭಿವೃದ್ಧಿ ಯೋಜನೆಗಳನ್ನು ಇನ್ನಷ್ಟು ವ್ಯವಸ್ಥಿತವಾಗಿ ರೂಪಿಸಿ ಜಾರಿ ಗೊಳಿಸಬೇಕು. ಅರಣ್ಯ ವ್ಯಾಪ್ತಿಯಲ್ಲಿ ಕೆರೆ ಕಟ್ಟೆಗಳನ್ನು ಅಭಿವೃದ್ಧಿಪಡಿಸಬೇಕು ಇದಕ್ಕೆ 10 ಕೋಟಿ ರೂ. ಅನುದಾನವನ್ನು ಅರಣ್ಯ ಇಲಾಖೆಗೆ ನಬಾರ್ಡ್ ಯೋಜನೆ ಗಳಡಿ ಒದಗಿಸುವುದಾಗಿ ಸಚಿವರು ಭರವಸೆ ನೀಡಿದರು.
ಆನೆ ಕಾರಿಡಾರ್ ಸೇರಿದಂತೆ ವಿವಿಧ ವಿಷಯಗಳ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆಯಲು ನಿಯೋಗ ಕರೆ ದೊಯ್ಯುವಂತೆ ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕ ಹೆಚ್.ಕೆ.ಕುಮಾರಸ್ವಾಮಿ ಒತ್ತಾಯಿಸಿದರು.
ಅರಣ್ಯ ಇಲಾಖೆಯು ಇಲಾಖೆಗಳೊಂ ದಿಗಿನ ತನ್ನ ಗೊಂದಲಗಳನ್ನು ತಕ್ಷಣವೇ ಬಗೆಹರಿಸಿಕೊಳ್ಳಬೇಕು. ಎಲ್ಲಾ ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಕಡೆÀ ಕಿಂಡಿ ಅಣೆಕಟ್ಟೆ ಗಳನ್ನು ನಿರ್ಮಿಸಿ ವನ್ಯಜೀವಿಗಳಿಗೆ ಕುಡಿ ಯಲು ನೀರು ಪೂರೈಸಬೇಕು ಎಂದು ಸಚಿವರು ಕಟ್ಟುನಿಟ್ಟಿನ ಆದೇಶ ನೀಡಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಂ ಬಾಬು, ಈವರೆಗೆ ತೆಗೆದುಕೊಂಡಿರುವ ತಾತ್ಕಾಲಿಕ ಹಾಗೂ ಶಾಶ್ವತ ಕ್ರಮಗಳನ್ನು ಪವರ್ ಪಾಯಿಂಟ್ ಪ್ರೆಸೆಂಟೇಷನ್ ಮೂಲಕ ವಿವರಿಸಿದರು.
ಅಪರ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ, ಜಿಪಂ ಸಿಇಒ ಪರಪ್ಪಸ್ವಾಮಿ, ಉಪ ವಿಭಾ ಗಾಧಿಕಾರಿ ಹೆಚ್.ಎಲ್.ನಾಗರಾಜ್, ಕವಿತಾ ರಾಜಾರಾಂ, ತಹಸೀಲ್ದಾರ್, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ದ್ದರು. ಅತ್ತಿಹಳ್ಳಿ ದೇವರಾಜ್, ಕಿಶೋರ್ ಕುಮಾರ್, ಬೆಳೆಗಾರರ ಒಕ್ಕೂಟದ ತೀರ್ಥ ಮಲ್ಲೇಶ್, ತೊ.ಚ.ಅನಂತ ಸುಬ್ಬರಾವ್ ಮತ್ತಿತರರು ಸಭೆಯಲ್ಲಿ ಹಾಜ ರಿದ್ದು, ಆನೆ ಹಾವಳಿ ಹಾಗೂ ಪರಿಹಾರ ಕ್ರಮಗಳ ಕುರಿತು ಚರ್ಚಿಸಿದರು.
ಸಭೆಯ ಸಲಹೆಗಳು…
* ಸಕಲೇಶಪುರ, ಆಲೂರು ತಾಲೂಕು ವ್ಯಾಪ್ತಿಯಲ್ಲಿ ವ್ಯವಸ್ಥಿತ ಆನೆ ಕಾರಿಡಾರ್ ಸ್ಥಾಪನೆ
* ನಾಗಾವಾರದಲ್ಲಿ ಆನೆಧಾಮ ಸ್ಥಾಪನೆ
* ಕರಡಿಬೆಟ್ಟ ಸಹಿತ ಅರಣ್ಯದಲ್ಲಿ ಆನೆಗಳಿಗೆ ಆಹಾರ ಹೆಚ್ಚು ಲಭ್ಯವಾಗುವಂತೆ ಮಾಡುವುದು
* ಶ್ರೀಲಂಕಾ ಮಾದರಿಯಲ್ಲಿ ರೈಲ್ವೆ ಕಂಬಿಗಳ ತಡೆಗೋಡೆ ನಿರ್ಮಾಣ
* ಅರಣ್ಯದ ವ್ಯಾಪ್ತಿಯಲ್ಲಿ ಹೊಸ ಯೋಜನೆಗಳ ಅನುಷ್ಠಾನಕ್ಕೆ ತಡೆ
* ವನ್ಯಜೀವಿಯಿಂದಾದ ಮಾನವ ಜೀವಹಾನಿಗೆ ಪರಿಹಾರ ಮೊತ್ತ ಹೆಚ್ಚಿಸುವುದು
* ಆನೆ ಮತ್ತು ಕಾಡು ಪ್ರಾಣಿಗಳ ದಾಳಿ ನಿಯಂತ್ರಣಕ್ಕೆ ವ್ಯವಸ್ಥಿತ ಮುಂಜಾಗ್ರತಾ ಕ್ರಮ ಕೈಗೊಳ್ಳುವುದು.
ಈಗ ಆನೆ ಹಾವಳಿ ಪ್ರದೇಶದಲ್ಲಿನ ಮಕ್ಕಳನ್ನು ಶಾಲೆಗೆ ಕಳುಹಿಸಲು ಅರಣ್ಯ ಇಲಾಖೆ ಏನು ಕ್ರಮ ಕೈಗೊಂಡಿದೆ? ಆನೆಗಳಿಗೆ ರೇಡಿಯೊ ಕಾಲರ್ ಅಳವಡಿಕೆ ಮೂಲಕ ಅವುಗಳ ಚಲನವಲನಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಹಂಚಿಕೆ ಪರಿಣಾಮಕಾರಿ ಯಾಗಬೇಕು. ಗಜಗಳಿಗೆ ಪ್ರಿಯವಾದ ಆಹಾರವನ್ನು ಬೆಳೆಯಬೇಕಿದೆ. ಅದಕ್ಕಾಗಿ ಹೆಲಿಕಾಪ್ಟರ್ ಮೂಲಕ ಬಿದಿರು, ಹಲಸು, ಬೈನೆ ಮತ್ತಿತರ ಮರ ಗಿಡ ಬೀಜ ಬಿತ್ತನೆಗೂ ಪ್ರಯತ್ನ ನಡೆಸೋಣ.
– ಹೆಚ್.ಡಿ.ರೇವಣ್ಣ, ಸಚಿವರು
ಜಿಲ್ಲೆಯ ಮಲೆನಾಡು ಭಾಗಕ್ಕೆ ಪ್ರತ್ಯೇಕ ವನ್ಯಜೀವಿ ಉಪವಿಭಾಗ ಅಗತ್ಯವಿದೆ. ಅರಣ್ಯ ಕಾಲೇಜು ಸ್ಥಾಪನೆ ಕೂಡ ಬೇಕಾ ಗಿದೆ. ಆನೆ ಹಾಗೂ ವನ್ಯಜೀವಿಗಳ ಹಾವಳಿಯಿಂದ ಆಗುವ ನಷ್ಟಕ್ಕೆ ಸರಿಯಾದ ಪರಿಹಾರ, ಸಕಾಲದಲ್ಲಿ ವಿತರಣೆಯಾಗಬೇಕು. 50:50 ಅನುಪಾತದಲ್ಲಿ ರಾಜ್ಯ-ಕೇಂದ್ರ ಸರ್ಕಾರಗಳು ಈ ಜವಾಬ್ದಾರಿ ಹಂಚಿಕೊಳ್ಳಬೇಕು.
– ಹೆಚ್.ಕೆ.ಕುಮಾರಸ್ವಾಮಿ, ಶಾಸಕರು
ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಉದ್ಯೋಗ ಖಾತರಿ ಯೋಜನೆಯಡಿ ಅರಣ್ಯ ವ್ಯಾಪ್ತಿಯಲ್ಲಿ ಕೆರೆಕಟ್ಟೆಗಳ ನಿರ್ಮಾಣ, ಕಿಂಡಿ ಅಣೆಕಟ್ಟೆಗಳ ನಿರ್ಮಾಣ ಮಾಡಲು ಮುಂದಾದರೆ ಅರಣ್ಯ ಇಲಾಖೆ ಅನುಮತಿಯನ್ನೇ ನೀಡುತ್ತಿಲ್ಲ. ಹೀಗಾದರೆ ಹೇಗೆ? ಮುಂದಿನ ದಿನಗಳಲ್ಲಾದರೂ ಈ ಗೊಂದಲ ನಿವಾರಣೆಯಾಗಲಿ. ಅರಣ್ಯ ಪ್ರದೇಶಗಳಲ್ಲಿ ನೀರಿನ ಸಂಗ್ರಹಕ್ಕೆ ಇನ್ನಷ್ಟು ಕ್ರಮ ಕೈಗೊಳ್ಳÀಬೇಕಿದೆ.
– ಅಕ್ರಂ ಪಾಷ, ಜಿಲ್ಲಾಧಿಕಾರಿ