ಮೈಸೂರು, ಜು. 6(ಆರ್‍ಕೆ)- ಭೂ ದಾಖಲೆಗಳ ಆಯುಕ್ತರೂ ಆಗಿರುವ ಹಿರಿಯ ಐಎಎಸ್ ಅಧಿಕಾರಿ ಮನಿಷ್ ಮೌಡ್ಗಿಲ್ ಅವರು ಇಂದು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ವೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್, ಹೆಚ್ಚುವರಿ ಡಿಸಿ ಬಿ.ಆರ್. ಪೂರ್ಣಿಮಾ, ಉಪ ವಿಭಾಗಾಧಿಕಾರಿ ಶಿವೇಗೌಡ, ಭೂ ದಾಖಲೆಗಳ ಉಪ ನಿರ್ದೇಶಕಿ ರಮ್ಯಾ ಸೇರಿದಂತೆ ಇಲಾಖೆಯ ಹಲವು ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಭೂ ದಾಖಲೆಗಳು, ಪೋಡಿ, ದುರಸ್ತಿ, ಸರ್ಕಾರಿ ಭೂಮಿಗಳ ಸಂರಕ್ಷಣೆಗೆ ನಡೆಸಿರುವ ಸರ್ವೆ ಕಾರ್ಯ ಮುಂತಾದ ವಿಷಯಗಳ ಬಗ್ಗೆ ಆಯುಕ್ತರು ತಾಲೂಕು ಹಾಗೂ ಜಿಲ್ಲಾ ವಾರು ಮಾಹಿತಿ ಪಡೆದುಕೊಂಡರು. ಮೈಸೂರು ಕಂದಾಯ ವಿಭಾಗದ ವ್ಯಾಪ್ತಿಗೊಳ ಪಡುವ ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಹಾಸನ ಹಾಗೂ ಮಂಡ್ಯ ಜಿಲ್ಲೆಗಳ ಜಿಲ್ಲಾ ಭೂ ದಾಖಲೆಗಳ ಉಪ ನಿರ್ದೇಶಕರು ಹಾಗೂ ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕರುಗಳು ಸಭೆಯಲ್ಲಿ ಹಾಜರಿದ್ದು, ಇಲಾಖೆಯ ಪ್ರಗತಿ ಕುರಿತಂತೆ ಮಾಹಿತಿ ನೀಡಿದರು