ಬೆಂಗಳೂರು,ಜು.14- ಆರ್‍ಎಸ್‍ಎಸ್ ಕಟ್ಟಾಳು ಬಿ.ಎಲ್. ಸಂತೋಷ್ ಅವ ರಿಗೆ ಮಹತ್ವದ ಜವಾ ಬ್ದಾರಿ ನೀಡಲಾಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಸೂಚನೆ ಮೇರೆಗೆ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯ ದರ್ಶಿಯಾಗಿ ಅವರನ್ನು ನೇಮಕ ಮಾಡ ಲಾಗಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನವೇ ಸಂತೋಷ್ ಅವ ರಿಗೆ ಉನ್ನತ ಹುದ್ದೆ
ನೀಡಿರುವುದು ಭಾರೀ ಕುತೂಹಲ ಮೂಡಿಸಿದೆ. ಈ ಹಿಂದೆಯೇ ಲೋಕಸಭಾ ಚುನಾವಣೆ ಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಕರ್ನಾಟಕದ ಆರ್‍ಎಸ್‍ಎಸ್ ಕಟ್ಟಾಳು ಬಿ.ಎಲ್.ಸಂತೋಷ್ ಉನ್ನತ ಸ್ಥಾನಕ್ಕೆ ಏರಲಿದ್ದಾರೆ ಎನ್ನಲಾಗಿತ್ತು. ಅಂತೆಯೇ ಸಂತೋಷ್ ಆಪ್ತರಿಗೂ ರಾಜ್ಯ ಬಿಜೆಪಿಯಲ್ಲಿ ಹೆಚ್ಚಿನ ಜವಾಬ್ದಾರಿ ಸಿಗಲಿದೆ ಎಂದು ಕೂಡ ಹೇಳಲಾಗುತ್ತಿತ್ತು. ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಯಾಗಿ ರಾಮ್‍ಲಾಲ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಸ್ಥಾನದ ಮೇಲೆ ಬಿ.ಎಲ್.ಸಂತೋಷ್ ಕಣ್ಣಿಟ್ಟಿದ್ದು, ಮತ್ತೆ ಕೇಂದ್ರದಲ್ಲಿ ಅಧಿಕಾರ ಗದ್ದುಗೆಗೇರಿದರೆ ರಾಮ್‍ಲಾಲ್ ಸ್ಥಾನವನ್ನು ಸಂತೋಷ್ ಪಡೆಯಲಿದ್ದಾರೆ ಎಂದು ತಿಳಿದು ಬಂದಿತ್ತು. ದಕ್ಷಿಣ ಭಾರತದಲ್ಲಿ ಬಿಜೆಪಿಯ ಬಲವರ್ಧನೆಯ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್ ಕೂಡ ಸಂತೋಷ್ ಅವರಿಗೆ ಉನ್ನತ ಸ್ಥಾನ ನೀಡಲು ಚಿಂತಿಸಿದೆ ಎಂದೂ ರಾಜ್ಯ ಬಿಜೆಪಿ ನಾಯಕರು ಮಾಹಿತಿ ನೀಡಿದ್ದರು. ಅದರ ಜತೆಗೆ, ಯಡಿಯೂರಪ್ಪ ಅವರ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ಅವಧಿ ಮುಗಿದು 6 ತಿಂಗಳುಗಳೇ ಕಳೆದಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯ ಪ್ರಬಲ ನಾಯಕರು ಈ ಸ್ಥಾನಕ್ಕಾಗಿ ಪೈಪೆÇೀಟಿ ನಡೆಸಿದ್ದಾರೆ ಎಂದು ಕೂಡ ಮೂಲಗಳು ತಿಳಿಸಿದ್ದವು.