ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿದೆ
ಮೈಸೂರು

ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿದೆ

July 15, 2019

ಬೆಂಗಳೂರು, ಜು.14-ಅತೃಪ್ತ ಶಾಸಕರ ಮನವೊಲಿಸುವ ಕಾರ್ಯ ಕಗ್ಗಂಟಾಗಿರುವಂತೆ ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿರುವು ದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ. ಮಾಜಿ ಸಚಿವ ಎಚ್.ಕೆ.ಪಾಟೀಲ್ ಜೊತೆಗೆ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿದೆ. ಇಂತಹ ಸ್ಥಿತಿಯಲ್ಲಿ ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಹಿಂಪಡೆಯಬೇಕೆಂದು ರಾಮಲಿಂಗಾರೆಡ್ಡಿ ಅವರ ಬಳಿ ಮನವಿ ಮಾಡಿದ್ದೇವೆ. ಸಮ್ಮಿಶ್ರ ಸರ್ಕಾರ ಪತನವಾಗುವುದಿಲ್ಲ. ಯಾವುದೇ ಊಹಾಪೆÇೀಹಗಳಿಗೆ ಕಿವಿಗೊಡದೆ ಕಾದು ನೋಡಿ. ರಾಮಲಿಂಗಾರೆಡ್ಡಿ ಅವರಂತಹ ಹಿರಿಯ ನಾಯಕರು ಪಕ್ಷದೊಂದಿಗೆ ಇರಬೇಕು. ಹೀಗಾಗಿ ಅವರನ್ನು ಭೇಟಿ ಮಾಡಿ ರಾಜೀನಾಮೆ ವಾಪಾಸ್ ಪಡೆಯುವಂತೆ ಮನವಿ ಮಾಡಿದ್ದೇವೆ ಎಂದರು.

Translate »