ನವದೆಹಲಿ: 370ನೇ ವಿಧಿ ರದ್ದುಗೊಳಿಸಿ ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾ ಡಳಿತ ಪ್ರದೇಗಳನ್ನಾಗಿ ವಿಭಜನೆ ಮಾಡುವ ಉದ್ದೇಶವನ್ನು ಹೊಂದಿರುವ ಜಮ್ಮು ಮತ್ತು ಕಾಶ್ಮೀರ ಪುನರ್ ರಚನೆ ಕಾಯಿದೆ 2019ಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ ಇಂದು ಒಪ್ಪಿಗೆ ಸೂಚಿಸಿದ್ದಾರೆ. ಈ ಪ್ರಕಾರ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ಅಕ್ಟೋಬರ್ 31ರಿಂದ ಅಧಿಕೃತವಾಗಿ ಜಾರಿಗೆ ಬರಲಿವೆ.
