ಮೈಸೂರು, ಫೆ.28-ಮಳವಳ್ಳಿ ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್‍ಪೆಕ್ಟರ್ ಎಂ. ಧರ್ಮೇಂದ್ರ, ಬೆಂಗಳೂರಿನ ಸೈಬರ್ ಕ್ರೈಂ ಠಾಣೆ ಇನ್ಸ್‍ಪೆಕ್ಟರ್ ಕೆ.ಎನ್.ಯಶವಂತಕುಮಾರ್ ಸೇರಿ 11 ಪೊಲೀಸ್ ಇನ್ಸ್‍ಪೆಕ್ಟರ್‍ಗಳಿಗೆ ಡಿವೈಎಸ್ಪಿ ಗಳಾಗಿ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಡ್ತಿ ಪಡೆದಿರುವ ಈ 11 ಡಿವೈಎಸ್ಪಿ ಗಳು ಬೆಂಗಳೂರಿನ ರಾಜ್ಯ ಪೊಲೀಸ್ ವರಿಷ್ಠಾಧಿ ಕಾರಿಗಳ ಕಚೇರಿಯಲ್ಲಿ ವರದಿ ಮಾಡಿಕೊಳ್ಳು ವಂತೆಯೂ ನಂತರ ಸ್ಥಳ ನಿಯೋಜನೆ ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
