ಸಂವಿಧಾನದ ಆಶಯವೇ ಸಾಮಾಜಿಕ ನ್ಯಾಯ
ಕೊಡಗು

ಸಂವಿಧಾನದ ಆಶಯವೇ ಸಾಮಾಜಿಕ ನ್ಯಾಯ

March 4, 2020

ವೀರಾಜಪೇಟೆ,ಮಾ.3-ಭಾರತದ ಸಂವಿಧಾನದ ಮೂಲ ಆಶಯವೇ ಸಾಮಾಜಿಕ ನ್ಯಾಯ, ಸಂವಿಧಾನವು ಸಾಮಾ ಜಿಕ ನ್ಯಾಯವನ್ನು ಅನುಷ್ಠಾನಗೊಳಿಸುವ ಸಲುವಾಗಿ ಪರಿಶಿಷ್ಟ ಜಾತಿ-ಪ.ಪಂಗಡ ಗಳಿಗೆ ಮೀಸಲಾತಿಯನ್ನು ಕಲ್ಪಿಸಿಕೊಟ್ಟಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಎನ್.ವಿ.ಕೋನಪ್ಪ ಹೇಳಿದರು.

`ಸಾಮಾಜಿಕ ದಿನಾಚರಣೆ’ ಅಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ಪಾಲಿಬೆಟ್ಟದ ಸರ್ಕಾರಿ ಪ್ರೌಢ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಪ್ರೌಢ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿನ ಪ್ರತಿಯೊಬ್ಬರಿಗೂ ಆರ್ಥಿಕ ಶೈಕ್ಷಣಿಕ, ನೈಸರ್ಗಿಕ ಮೂಲ ಸೌಲಭ್ಯ ಗಳನ್ನು ಒದಗಿಸುವ ಮೂಲಕ ಸಮಾಜ ದಲ್ಲಿ ಬಡತನ, ನಿರುದ್ಯೋಗ ಮತ್ತು ಜಾತಿ ವ್ಯವಸ್ಥೆಯನ್ನು ತೊಡೆದು ಹಾಕುವಲ್ಲಿ ಎಲ್ಲರೂ ತೊಡಗಿಸಿಕೊಳ್ಳುವಂತಾಗಬೇಕು. ಸರಕಾರ ಕೆಲವೊಂದು ವಿಶೇಷ ರಿಯಾ ಯಿತಿಗಳನ್ನು ನೀಡಿದ್ದು ಮಹಿಳೆಯರು ಮತ್ತು ಮಕ್ಕಳು ಇದರ ಸದುಪಯೋ ಗವನ್ನು ಪಡೆದುಕೊಂಡು ಸಮಾಜದಲ್ಲಿ ಶಾಂತಿ ಮತ್ತು ಸಮಾನತೆಯ ಭಾವನೆ ಗಳನ್ನು ಬೆಳೆಸುವಂತೆ ಕರೆ ನೀಡಿದರು.

ಪಾಲಿಬೆಟ್ಟ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಪಾರ್ವತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತ ನಾಡಿ, ಸಂವಿಧಾನದ ಪ್ರಸ್ತಾವನೆಯೇ ಸಾಮಾಜಿಕ ನ್ಯಾಯಕ್ಕೆ ಹಿಡಿದ ಕನ್ನಡಿ ಯಾಗಿದೆ. ಎಲ್ಲಾ ಕಾರ್ಯಗಳ ಅನು ಷ್ಠಾನವನ್ನು ಮಾಡಲು ವಿದ್ಯಾರ್ಥಿಗಳಿಂದ ಸಾಧ್ಯ. ಇಂದಿನ ವಿದ್ಯಾರ್ಥಿಗಳು ದೇಶದ ಮುಂದಿನ ಉತ್ತಮ ಪ್ರಜೆಗಳಾಗುವಂತೆ ಹೇಳಿದರು.
ಕಾರ್ಯಕ್ರಮದಲ್ಲಿ ಅಧ್ಯಾಪಕ ವೃಂದ, ಪೊಲೀಸ್ ಸಿಬ್ಬಂದಿ ಹಾಗೂ ವಿದ್ಯಾರ್ಥಿ ಗಳು ಭಾಗವಹಿಸಿದ್ದರು.

Translate »