ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಅಭಾವ ಇಲ್ಲ: ಡಿಸಿ ಡಾ. ಎಂ.ಆರ್. ರವಿ
ಚಾಮರಾಜನಗರ

ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಅಭಾವ ಇಲ್ಲ: ಡಿಸಿ ಡಾ. ಎಂ.ಆರ್. ರವಿ

April 1, 2020

ಚಾಮರಾಜನಗರ, ಮಾ.31- ಜಿಲ್ಲೆಯಲ್ಲಿ ಅಗತ್ಯ ವಸ್ತುಗಳಿಗೆ ಯಾವುದೇ ಅಭಾವ ಇಲ್ಲ. ಏಪ್ರಿಲ್ ಮತ್ತು ಮೇ ತಿಂಗಳ ಪಡಿತರ ವಿತರಣೆಗಾಗಿ ಅಗತ್ಯವಾದ ದಾಸ್ತಾನು ಮಾಡಲಾಗುತ್ತಿದೆ ಎಂದು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಜಿಲ್ಲೆಯಲ್ಲಿ ದಿಗ್ಭಂಧನ (ಲಾಕ್‍ಡೌನ್) ವಿದ್ದರೂ ಅಗತ್ಯ ವಸ್ತುಗಳಿಗೆ ಯಾವುದೇ ಕೊರತೆ ಇಲ್ಲ. ದಿನಸಿ ಪದಾರ್ಥಗಳು ಪ್ರಸ್ತುತ ದಾಸ್ತಾನು ಇದೆ. ಮೈಸೂರು, ಬೆಂಗಳೂರಿನಿಂದಲೂ ದಿನಸಿ ಸಾಮಗ್ರಿಗಳನ್ನು ತರಲು 10 ಲಾರಿಗಳನ್ನು ಜಿಲ್ಲೆಯಿಂದ ಕಳುಹಿಸಲಾಗಿದೆ ಎಂದರು.

ಏಪ್ರಿಲ್ ಮತ್ತು ಮೇ ತಿಂಗಳ ಪಡಿತರ ವನ್ನು ಒಂದೇ ಬಾರಿ ವಿತರಿಸಲಾಗುತ್ತದೆ. ಇದಕ್ಕಾಗಿ ಈಗಾಗಲೇ 20 ಸಾವಿರ ಕ್ವಿಂಟಾಲ್ ಅಕ್ಕಿ, ಗೋಧಿ ಬಂದಿದೆ. ಪಡಿತರ ವಿತರಣೆಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಅದಿವಾಸಿಗಳಿಗೆ ಪೌಷ್ಠಿಕ ಆಹಾರವನ್ನು ಸಹ ವಿತರಿಸಲಾಗುತ್ತಿದೆ. ದಿನಬಳಕೆಯ ವಸ್ತುಗಳ ದರ, ವಿತರಣೆ, ಪೂರೈಕೆ ಮೇಲೆ ನಿಗಾ ವಹಿಸಲು ನೋಡೆಲ್ ಅಧಿಕಾರಿ ಗಳನ್ನು ನೇಮಕ ಮಾಡಲಾಗಿದೆ. ಯಾವುದೇ ತೊಂದರೆ ಇದ್ದರೂ ನನ್ನ ಗಮನಕ್ಕೆ ತರಬಹು ದೆಂದು ಜಿಲ್ಲಾಧಿಕಾರಿ ತಿಳಿಸಿದರು.

ಲಾಕ್‍ಡೌನ್‍ನಿಂದಾಗಿ ಜಿಲ್ಲೆಯಲ್ಲೇ ಉಳಿದುಕೊಂಡಿರುವ 80 ವಲಸೆ ಕಾರ್ಮಿಕ ರನ್ನು ಗುರುತಿಸಲಾಗಿದೆ. ಕೆಲವರು ಯಳಂ ದೂರು ತಾಲೂಕಿನ ಗೌಡಳ್ಳಿ, ಬೇಗೂರು ಸೇರಿದಂತೆ ಇತರೆ ಸ್ಥಳಗಳಲ್ಲಿ ಉಳಿದುಕೊಂಡಿ ದ್ದಾರೆ. ಅವರೆಲ್ಲರಿಗೂ ಆಹಾರ, ಆಶ್ರಯ ಒದಗಿಸಿ ನೋಡಿಕೊಳ್ಳುವ ವ್ಯವಸ್ಥೆ ಮಾಡ ಲಾಗಿದೆ ಎಂದು ಅವರು ತಿಳಿಸಿದರು.

ಪುಣಜನೂರಿನ ಆಶ್ರಮ ಶಾಲೆಯಲ್ಲಿ ಉಡುಪಿಗೆ ತೆರಳಬೇಕಿದ್ದ ಕೆಲವರಿಗೆ ಆಶ್ರಯ ನೀಡಲಾಗಿದೆ. ಅವರಿಗೆ ಆರೋಗ್ಯ ತಪಾಸಣೆ, ಆಹಾರ ವಿತರಣೆಗೆ ಕ್ರಮ ಕೈಗೊಂಡಿದ್ದು, ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಚೆಕ್‍ಪೋಸ್ಟ್‍ಗಳಲ್ಲಿ ಅತ್ಯಂತ ನಿಗಾ ವಹಿಸಲಾಗಿದೆ. ಆದರೆ ಅವಶ್ಯಕ ವಸ್ತುಗಳ ಸಾಗಣೆ ವಾಹನಗಳನ್ನು ಪರಿಶೀಲಿಸಿ ಕಳುಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ರೈತರ ಕೃಷಿ ಉತ್ಪನ್ನಗಳ ಮಾರಾಟಕ್ಕೆ ತೊಂದರೆಯಾಗದಂತೆ ಕ್ರಮ ವಹಿಸಲಾ ಗಿದೆ. ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ, ಇನ್ನಿತರ ಪರಿಕರ ಗಳನ್ನು ಕೊಳ್ಳಲು ಸಂಬಂಧಿಸಿದ ಅಂಗಡಿ ಗಳು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ವಸ್ತುಗ ಳನ್ನು ಖರೀದಿಸುವ ವ್ಯವಸ್ಥೆ ಮಾಡಲಾಗಿದೆ ಎಂದರು. ಕೊರೊನಾ ವೈರಸ್ ಹರಡುವಿಕೆ ತಡೆಗಾಗಿ ಜಿಲ್ಲೆಯ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿರುವ ಕ್ವಾರೆಂಟೈನ್ ಕೇಂದ್ರದಲ್ಲಿ ನಿಗಾ ವಹಿಸಲಾಗಿದೆ. ಮೈಸೂರಿನ ಕೊರೊನಾ ಪಾಸಿಟಿವ್ ವ್ಯಕ್ತಿಯು ಉದ್ಯೋಗ ಮಾಡುತ್ತಿದ್ದ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಜುಬಿಲಿಯೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರ ಜಿಲ್ಲೆಯ ನೌಕರ ಪಟ್ಟಿಯನ್ನು ಪಡೆಯಲಾಗಿದ್ದು, ಇವರನ್ನು ನಗರದ ಕ್ವಾರೆಂಟೈನ್ ಕೇಂದ್ರದಲ್ಲಿ ನಿಗಾ ವಹಿಸಲು ಕ್ರಮ ವಹಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿ ರುವ ಲಾಕ್‍ಡೌನ್‍ಗೆ ಜನತೆ ಸಹಕಾರ ಮುಂದು ವರೆಸಬೇಕು. ಮನೆ ಬಾಗಿಲಿಗೆ ತರಕಾರಿ, ಇತರೆ ಅಗತ್ಯ ಪದಾರ್ಥಗಳ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗು ತ್ತದೆ. ಮನೆಯ ಲ್ಲಿಯೇ ಇರುವ ಮೂಲಕ ಕೊರೊನಾ ವೈರಸ್ ಹರಡದಂತೆ ಜನರು ಜಾಗೃತಿ ವಹಿಸಬೇ ಕೆಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಮನವಿ ಮಾಡಿ ದರು. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಚ್.ಡಿ. ಆನಂದ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

Translate »