ಮೈಸೂರು, ಮೇ 13 (ಆರ್‍ಕೆ) -ಅಕ್ರಮವಾಗಿ 250 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂ ದನ್ನು ವಶಪಡಿಸಿಕೊಂಡಿರುವ ನಂಜನಗೂಡು ಚೆಕ್ ಪೋಸ್ಟ್ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಮಂಗಳವಾರ ಸಂಜೆ 500 ಮೂಟೆ (250 ಕ್ವಿಂಟಾಲ್) ಅಕ್ಕಿ ತುಂಬಿದ ಲಾರಿಯನ್ನು ನಂಜನಗೂಡು ಸಮೀ ಪದ ಹೆಜ್ಜಿಗೆ ಸೇತುವೆ ಬಳಿಯ ಚೆಕ್‍ಪೋಸ್ಟ್‍ನಲ್ಲಿ ಕರ್ತವ್ಯನಿರತ ಅಧಿಕಾರಿಗಳು ಪರಿಶೀಲಿಸಿದಾಗ ದಾಖಲೆ ಗಳಿಲ್ಲದೆ ಕೇರಳಾಗೆ ಅಕ್ಕಿ ಸಾಗಿಸುತ್ತಿದ್ದುದು ತಿಳಿಯಿತು.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕು, ಕಿರು ಗಾವಲು ಗ್ರಾಮದ ರೈಸ್ ಮಿಲ್‍ನಿಂದ ಕೇರಳ ನೋಂದಣಿ ಸಂಖ್ಯೆಯ ಲಾರಿಯಲ್ಲಿ ಅಕ್ಕಿ ಮೂಟೆಗಳನ್ನು ಸಾಗಿಸಲಾಗು ತ್ತಿತ್ತು ಎಂದು ತಿಳಿದು ಬಂದಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಶಿವಣ್ಣ ಹಾಗೂ ಸಿಬ್ಬಂದಿ ಮಹಜರು ನಡೆಸಿ ದರು. ನಂಜನಗೂಡು ಗ್ರಾಮಾಂತರ ಠಾಣೆ ಸಬ್ ಇನ್ಸ್‍ಪೆಕ್ಟರ್ ಸತೀಶ್ ಪ್ರಕರಣ ದಾಖಲಿಸಿಕೊಂಡು ಓರ್ವನನ್ನು ಬಂಧಿಸಿ, ಅಕ್ಕಿ ತುಂಬಿದ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಅನ್ನಭಾಗ್ಯ ಯೋಜನೆ ಯಡಿ ನ್ಯಾಯಬೆಲೆ ಅಂಗಡಿ ಮೂಲಕ ಬಡವರಿಗೆ ನೀಡಬೇಕಾದ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಪ್ರತ್ಯೇಕ ತನಿಖೆ ನಡೆಸುತ್ತಿದ್ದಾರೆ.