16 ಐಎಎಸ್ ಅಧಿಕಾರಿಗಳ ವರ್ಗ ಸೆಸ್ಕ್ ಎಂಡಿಯಾಗಿ ಜಯವಿಭವಸ್ವಾಮಿ
News

16 ಐಎಎಸ್ ಅಧಿಕಾರಿಗಳ ವರ್ಗ ಸೆಸ್ಕ್ ಎಂಡಿಯಾಗಿ ಜಯವಿಭವಸ್ವಾಮಿ

April 1, 2021

ಬೆಂಗಳೂರು, ಮಾ.31- ರಾಜ್ಯದ ಒಟ್ಟು 16 ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದ್ದು, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ(ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಜಯ ವಿಭವಸ್ವಾಮಿ ಅವರನ್ನು ನಿಯೋಜಿಸಲಾಗಿದೆ.

ಇವರಿಗೆ ಶ್ರೀ ಮಲೇಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆ ವಹಿಸ ಲಾಗಿದೆ. ತುಮಕೂರು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯಾಗಿ ಕೆ.ವಿದ್ಯಾಕುಮಾರಿ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ- ರಾಜೀವ್ ಚಾವ್ಲಾ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿ-ರಾಕೇಶ್ ಸಿಂಗ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ ಗೌರವ್ ಗುಪ್ತ(ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆ). ಇಂಧನ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ-ಜಿ.ಕುಮಾರ್ ನಾಯ್ಕ್(ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆ).

ಮೌಲಸೌಕರ್ಯ ಅಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ-ಕಪೀಲ್ ಮೋಹನ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ- ಎನ್. ಮಂಜುನಾಥ ಪ್ರಸಾದ್ (ವಿಪತ್ತು ನಿರ್ವಹಣೆ, ಭೂಮಿ ಹಾಗೂ ಯುಪಿಓಆರ್‍ನ ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆÉ). ಕರ್ನಾಟಕ ಸಾರ್ವಜನಿಕ ಭೂ ನಿಗಮದ ವ್ಯವಸ್ಥಾಪಕ ನಿರ್ದೇಶಕ- ಡಾ.ಹೆಚ್.ಎನ್. ಗೋಪಾಲಕೃಷ್ಣ (ಐಟಿಬಿಟಿ ಇಲಾಖೆಯ ನಿರ್ದೇಶಕರನ್ನಾಗಿ ಹೆಚ್ಚುವರಿ ಹೊಣೆ), ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ-ಜಿ.ಎಂ.ಗಂಗಾಧರಸ್ವಾಮಿ(ರಾಜ್ಯ ವಿದ್ಯುತ್ ಪ್ರಸರಣ ನಿಮಗದ ವ್ಯವಸ್ಥಾಪಕ ನಿರ್ದೇಶಕ ರನ್ನಾಗಿ ಹೆಚ್ಚುವರಿ ಹೊಣೆÉ). ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ (ಎಂಎಸ್‍ಎಂಇ ಮತ್ತು ಗಣಿ)ಯ ಸರ್ಕಾರದ ಕಾರ್ಯದರ್ಶಿ-ಪಂಕಜ್ ಕುಮಾರ್ ಪಾಂಡೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ಇ-ಆಡಳಿತ)ಯ ಸರಕಾರದ ಕಾರ್ಯದರ್ಶಿ-ವಿ.ಪೆÇನ್ನುರಾಜ್, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿ- ಸಿಂಧು ಬಿ.ರೂಪೇಶ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿದೇರ್ಶಕಿ-ಎಸ್.ಹೊನ್ನಾಂಬ, ಸಕಾಲ ಮಿಷನ್ ಹೆಚ್ಚುವರಿ ಯೋಜನಾ ನಿರ್ದೇಶಕಿ- ಡಾ.ಬಿ.ಆರ್.ಮಮತಾ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Translate »