ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ ನಿಗಾ ವಹಿಸಿ
ಮಂಡ್ಯ

ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ ನಿಗಾ ವಹಿಸಿ

July 18, 2021

ಪಾಂಡವಪುರ, ಜು.17-ಎಸ್‍ಎಸ್ ಎಲ್‍ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿ ಗಳಿಗೆ ಯಾವುದೇ ಸಮಸ್ಯೆ ಎದುರಾಗ ದಂತೆ ನಿಗಾ ವಹಿಸಿ, ಸಮಸ್ಯೆಗಳೆನಾದರೂ ಎದುರಾದರೆ ನನ್ನ ಗಮನಕ್ಕೆ ತನ್ನಿ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಶಾಸಕ ಸಿ.ಎಸ್.ಪುಟ್ಟರಾಜು ಸೂಚಿಸಿದರು.
ಪಟ್ಟಣದ ಬಿಆರ್‍ಸಿ ಕೇಂದ್ರದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಪೂರ್ವ ಸಿದ್ಧತೆ ಸಂಬಂಧ ಬಿಇಓ ಹಾಗೂ ಶಿಕ್ಷಕ ಸಭೆ ನಡೆಸಿ ಅವರು ಮಾತನಾಡಿದರು.
ಸರ್ಕಾರ ಸೂಚಿಸಿರುವ ಮಾರ್ಗದಂತೆ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ. ಪರೀಕ್ಷೆ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಸಮಸ್ಯೆ, ತೊಂದರೆ ಯಾಗ ದಂತೆ ಎಚ್ಚರದಿಂದ ಕರ್ತವ್ಯ ನಿರ್ವಹಿಸಿ. ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಮಕ್ಕಳನ್ನು ಪ್ರತ್ಯೇಕವಾಗಿ ಕೂರಿಸಿ ಪರೀಕ್ಷೆ ಬರೆಸಿ ಎಂದು ಸಲಹೆ ನೀಡಿದರು.

ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಮಾಸ್ಕ್ ನೀಡಿ, ಓರ್ವ ವಿದ್ಯಾರ್ಥಿ ಪರೀಕ್ಷೆ ನಡೆಯುವ 2 ದಿನವೂ ಒಂದೇ ಮಾಸ್ಕ್ ಹಾಕುವುದು ಬೇಡ, ಇಲಾಖೆ ಒಂದು ಮಾಸ್ಕ್ ನೀಡಿದ್ದಾರೆ. ಇನ್ನೊಂದು ಮಾಸ್ಕ್ ಅನ್ನು ನಾವು ಕೊಡಿಸುತ್ತೇವೆ ವಿದ್ಯಾರ್ಥಿ ಗಳಿಗೆ ನೀಡಿ ಎಂದು ಸಲಹೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಯಿಗೌಡ ಮಾತನಾಡಿ, ತಾಲೂಕಿನಲ್ಲಿ ಸುಮಾರು 2,258 ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಎದುರಿಸುತ್ತಿದ್ದಾರೆ. ಕೋವಿಡ್ ಮಾರ್ಗಸೂಚಿಯಂತೆ ಪರೀಕ್ಷೆ ಎದುರಿಸ ಬೇಕಾಗಿರುವುದರಿಂದ 16 ಪರೀಕ್ಷಾ ಕೇಂದ್ರ ಗಳನ್ನು ತೆರೆಯಲಾಗಿದೆ. ಖಾಸಗಿ ಅಭ್ಯರ್ಥಿ ಗಳಿಗಾಗಿ ಪಟ್ಟಣ ನಿರ್ಮಲ ಕಾನ್ವೆಂಟ್ ನಲ್ಲಿ ಕೇಂದ್ರ ತೆರೆಯಲಾಗಿದೆ. ವಿದ್ಯಾರ್ಥಿ ಗಳಿಗೆ ಪರೀಕ್ಷಿಸಲು ಆರೋಗ್ಯ ಹಾಗೂ ಆಶಾ, ಅಂಗನವಾಡಿ ಕಾರ್ಯಕರ್ತರನ್ನು ಪರೀಕ್ಷೆ ಕೇಂದ್ರದಲ್ಲಿ ನಿಯೋಜಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಸಂದರ್ಭದಲ್ಲಿ ತಾಪಂ ಇಓ ಆರ್.ಪಿ. ಮಹೇಶ್, ಬಿಇಓ ತಿಮ್ಮರಾಯಿಗೌಡ, ಶಿಕ್ಷಣ ಪರಿವೀಕ್ಷಕ ಸಿ.ಎಸ್.ಸುಬ್ಬೇಗೌಡ, ಟಿಹೆಚ್‍ಓ ಡಾ.ಸಿ.ಎ. ಅರವಿಂದ್, ಲಿಂಗರಾಜು, ಆರ್.ಸಿ.ನಾಗೇ ಗೌಡ ಸೇರಿದಂತೆ ಹಲವರಿದ್ದರು.’’

Translate »