ಗಂಗಾ ಕಲ್ಯಾಣ ಪಂಪ್‍ಸೆಟ್‍ಗಳಿಗೆ ತಕ್ಷಣ ಕರೆಂಟ್ ಕೊಡಿ
News

ಗಂಗಾ ಕಲ್ಯಾಣ ಪಂಪ್‍ಸೆಟ್‍ಗಳಿಗೆ ತಕ್ಷಣ ಕರೆಂಟ್ ಕೊಡಿ

August 12, 2021

ಬೆಂಗಳೂರು, ಆ.11(ಕೆಎಂಶಿ)- ವಿದ್ಯುತ್ ಕ್ಷೇತ್ರ ದಲ್ಲಿ ಸ್ವಾವಲಂಬಿ ಆಗುವುದರ ಜೊತೆಗೆ ದೂರದೃಷ್ಟಿ ಯನ್ನು ಇಟ್ಟುಕೊಂಡು ಸಮರ್ಥವಾಗಿ ವಿದ್ಯುತ್ ನಿರ್ವಹಣೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬುಧವಾರ ಸೂಚನೆ ನೀಡಿದರು.

ಇಂಧನ ಇಲಾಖಾ ಪ್ರಗತಿ ಪರಿಶೀಲನಾ ಸಭೆ ಯಲ್ಲಿ ಮಾತನಾಡಿದ ಅವರು, ವಿದ್ಯುತ್ ಉತ್ಪಾ ದನೆ ಮತ್ತು ನಿರ್ವಹಣೆ ಇನ್ನೂ ಬಹಳ ವ್ಯವಸ್ಥಿತವಾಗಿ ಮಾಡಬೇಕು. ಮಾರು ಕಟ್ಟೆ ಸ್ಥಿತಿಗತಿಯನ್ನು ಆಧರಿಸಿ ಹೆಚ್ಚಿನ ದರಕ್ಕೆ ವಿದ್ಯುತ್ತನ್ನು ಮಾರಾಟ ಮಾಡುವಂತಾಗಬೇಕು. ಕರ್ನಾಟಕ ವಿದ್ಯುತ್ ನಿಗಮದಿಂದ ವಿದ್ಯುತ್ ಉತ್ಪಾದನೆ ಅತ್ಯಂತ ದಕ್ಷತೆ ಯಿಂದ ಆಗಬೇಕು. ಜಲ ಮತ್ತು ವಿದ್ಯುತ್ ಘಟಕ ಗಳು ಅತೀ ಹೆಚ್ಚು ಕಾರ್ಯ ಕ್ಷಮತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಂಗಾ ಕಲ್ಯಾಣ ಯೋಜನೆಯಡಿ ಕೊರೆಯಿ ಸಲಾಗಿರುವ ಬೋರ್‍ವೆಲ್‍ಗಳಿಗೆ ತಡ ಮಾಡದೇ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಕೋವಿಡ್ ಸಂದರ್ಭ ದಲ್ಲಿ ವಿಶೇಷವಾಗಿ ಆಸ್ಪತ್ರೆಗಳಿಗೆ ವಿದ್ಯುತ್ ಸರಬ ರಾಜಿನಲ್ಲಿ ಯಾವುದೇ ರೀತಿಯ ತೊಂದರೆಯಾಗ ದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿರ್ದೇಶನ ನೀಡಿದರು. ರಾಜ್ಯದ 15 ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ 7 ಗಂಟೆಗಳ ವಿದ್ಯುತ್ ಪೂರೈಕೆ ಯಾಗುತ್ತಿದ್ದು, ಉಳಿದ ಜಿಲ್ಲೆಗಳಲ್ಲಿ 5 ಗಂಟೆಗಳ ವಿದ್ಯುತ್ ಪೂರೈಕೆಯೂ ಸರಿಯಾಗಿ ಆಗುತ್ತಿಲ್ಲ. ಈ ಅಸಮಾನತೆಯನ್ನು ಹೋಗ ಲಾಡಿಸಲು ನೀಲನಕ್ಷೆಯನ್ನು ಸಿದ್ಧಪಡಿಸಿ ಕಾಲ ಮಿತಿ ಯಲ್ಲಿ ಯೋಜನಾಬದ್ಧವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು. ರಾಜ್ಯದಲ್ಲಿ ನವೀಕೃತ ಮೂಲಗಳ ಸ್ಥಾಪಿತ ಸಾಮಥ್ರ್ಯ 15184.13 ಮೆ. ವ್ಯಾಟ್ ಗಳಿದ್ದು ದೇಶದಲ್ಲಿಯೇ ಕರ್ನಾಟಕ ಮುಂಚೂಣಿ ಯಲ್ಲಿದೆ. ಭವಿಷ್ಯದ ದೃಷ್ಟಿಯಿಂದ ನವೀಕೃತ ಇಂಧನಕ್ಕೆ ಆದ್ಯತೆ ನೀಡುವಂತೆ ಸಲಹೆ ನೀಡಿದರು. ಗಂಗಾ ಕಲ್ಯಾಣ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಎಲ್ಲಾ ಅಭಿವೃದ್ಧಿ ನಿಗಮಗಳು ಸೇರಿದಂತೆ ಒಟ್ಟು 18569 ಕೊಳವೆಬಾವಿ ಗಳ ವಿದ್ಯುದೀಕರಣಗೊಳಿಸುವ ಗುರಿ ಇದೆ. ಇದಕ್ಕಾಗಿ ಪ್ರತಿ ಪಂಪ್‍ಸೆಟ್ ವಿದ್ಯುದೀಕರಣಕ್ಕೆ ಬಿಡುಗಡೆ ಮಾಡುವ 50 ಸಾವಿರ ರೂ.ಗಳ ವೆಚ್ಚವನ್ನು 1.2 ಲಕ್ಷಕ್ಕೆ ಹೆಚ್ಚಿಸುವ ಬೇಡಿಕೆಯನ್ನು ಪರಿಶೀಲಿಸಲಾಗುವುದು ಎಂದರು.

Translate »