ದಸರಾ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ
ಮೈಸೂರು

ದಸರಾ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

September 21, 2021

ಮೈಸೂರು, ಸೆ. 20(ಆರ್‍ಕೆ)- ಪ್ರಸಕ್ತ ಸಾಲಿನಲ್ಲಿ ದಸರಾ ಮಹೋತ್ಸವಕ್ಕೆ ಸರ್ವ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ ದಲ್ಲಿ ಸೋಮವಾರ ಪೂರ್ವಭಾವಿ ಸಭೆ ನಡೆಸಿ ಸಿದ್ಧತಾ ಕ್ರಮಗಳ ಕುರಿತಂತೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಈ ಬಾರಿಯೂ ಅರಮನೆ ಆವರಣದ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತಗೊಳಿಸಿ ಸರಳ ಹಾಗೂ ಸಾಂಪ್ರದಾಯಿಕವಾಗಿ ನಾಡಹಬ್ಬ ಆಚರಿ ಸಲು ಸಿಎಂ ನೇತೃತ್ವದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನಿಸಿರುವುದರಿಂದ ಕಳೆದ ವರ್ಷ ಮಾಡಿದ್ದ ಕಾರ್ಯಕ್ರಮಗಳನುಸಾರ ಯಾವುದೇ ಲೋಪದೋಷಗಳಾಗದಂತೆ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು.

ಸ್ವಾಗತ, ದೀಪಾಲಂಕಾರ, ಮೆರವಣಿಗೆ, ಸಾಂಸ್ಕøತಿಕ, ಸ್ತಬ್ಧಚಿತ್ರ ಹಾಗೂ ಸ್ವಚ್ಛತಾ ಉಪಸಮಿತಿ ಮುಖ್ಯಸ್ಥರು ಕಳೆದ ವರ್ಷ ದಸರಾದಲ್ಲಿ ಕೈಗೊಂಡಿದ್ದ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವಿವರಿಸಿ, ಈ ಬಾರಿ ಮಾಡಿಕೊಳ್ಳಬೇಕಾದ ಸಿದ್ಧತೆ ಬಗ್ಗೆ ಮಾಹಿತಿ ನೀಡಿದರು.

ಬೆಂಗಳೂರಲ್ಲಿ ನಡೆದ ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ನೀಡಿದ ಸೂಚನೆ, ಮಾರ್ಗದರ್ಶನದಂತೆಯೇ ತಯಾರಿ ನಡೆಸಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅನುಭವಿಗಳ ಸಲಹೆಯನ್ನೂ ಪಡೆದು ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಕಾರ್ಯಕ್ರಮ ರೂಪಿಸಿ ಎಂದು ಡಾ.ಬಗಾದಿ ಗೌತಮ್ ತಿಳಿಸಿದರು.

ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾ ಟನೆಯ ಧಾರ್ಮಿಕ ಕಾರ್ಯಕ್ರಮ, ವಿಜಯದಶಮಿ ಮೆರವಣಿಗೆಯಂದು ಅರಮನೆ ಆವರಣದಲ್ಲಿ ಜಂಬೂ ಸವಾರಿ ಮೆರವಣಿಗೆ, ನಂದೀಧ್ವಜ ಪೂಜೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ, ಪ್ರವಾ ಸೋದ್ಯಮ ಸಚಿವ, ಇಂಧನ ಸಚಿವರು ಕಾಲಕಾಲಕ್ಕೆ ನೀಡುವ ಸಲಹೆ ಮೇರೆಗೆ ಮೈಸೂರು ನಗರದಲ್ಲಿ ವಿದ್ಯುತ್ ದೀಪಾ ಲಂಕಾರ ಮಾಡಲು ಚೆಸ್ಕಾಂ ಅಧಿಕಾರಿ ಗಳು ತಯಾರಿ ಮಾಡಿಕೊಳ್ಳುವಂತೆಯೂ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್. ಮಂಜುನಾಥ ಸ್ವಾಮಿ, ಜಿಲ್ಲಾ ಪಂಚಾಯ್ತಿ ಸಿಇಓ ಎ.ಎಂ.ಯೋಗೀಶ್, ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಡಿಸಿಪಿ ಪ್ರದೀಪ್ ಗುಂಟಿ, ಮುಡಾ ಆಯುಕ್ತ ಡಾ.ಡಿ.ಬಿ.ನಟೇಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿ ಕಾರ್ಜುನಸ್ವಾಮಿ, ಸಹಾಯಕ ನಿರ್ದೇಶಕ ಎ.ಚನ್ನಪ್ಪ ಸೇರಿದಂತೆ ಹಲವರು ಸಭೆ ಯಲ್ಲಿ ಹಾಜರಿದ್ದರು

Translate »