ಬಿಸಿಸಿಐ 36ನೇ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ನೇಮಕ
News

ಬಿಸಿಸಿಐ 36ನೇ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ನೇಮಕ

October 19, 2022

ಮುಂಬೈ: ಭಾರತ ತಂಡದ ಮಾಜಿ ಕ್ರಿಕೆಟಿಗ ಹಾಗೂ 1983ರ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಕರ್ನಾಟಕದ ರೋಜರ್ ಬಿನ್ನಿ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ(ಬಿಸಿಸಿಐ) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರು ಬಿಸಿಸಿಐಯ 36ನೇ ಅಧ್ಯಕ್ಷರು. ಮುಂಬೈನಲ್ಲಿ ನಡೆದ ಬಿಸಿಸಿಐ ಎಜಿಎಂ ನಲ್ಲಿ ಇವರ ನೇಮಕವನ್ನು ಘೋಷಿಸಲಾಯಿತು.

ಈ ಮೂಲಕ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಸ್ಥಾನವನ್ನು ಬಿನ್ನಿ ತುಂಬಿದ್ದಾರೆ. 67 ವರ್ಷದ ಬಿನ್ನಿ ಅವರು
ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಏಕೈಕ ಅಭ್ಯರ್ಥಿಯಾಗಿದ್ದರು. ಅಂತೆಯೆ ಜಯ್ ಶಾ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ. ಬಿಸಿಸಿಐನ ಹಾಲಿ ಅಧ್ಯಕ್ಷರಾದ ಸೌರವ್ ಗಂಗೂಲಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ.

ರೋಜರ್ ಬಿನ್ನಿ ಈ ಹಿಂದೆ ಬಿಸಿಸಿಐ ಆಯ್ಕೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 11 ಮತ್ತು 12 ರಂದು ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ್ದರು. ಅಕ್ಟೋಬರ್ 13 ರಂದು ಎಲ್ಲಾ ನಾಮಪತ್ರಗಳ ಪರಿಶೀಲನೆ ಕಾರ್ಯ ಜರುಗಿತ್ತು. ಇಂದು ಮುಂಬೈನಲ್ಲಿ ಬಿಸಿಸಿಐ ಚುನಾವಣೆ ನಡೆದಿದ್ದು, ಇದರಲ್ಲಿ ರೋಜರ್ ಬಿನ್ನಿ ಅವರನ್ನು ನೂತನ ಬಿಸಿಸಿಐ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

Translate »