ತಮಿಳ್ನಾಡಿಗೆ ನೀರು ಬಿಡಲು ಸಿಎಂ ಸೂಚನೆ
ಮೈಸೂರು

ತಮಿಳ್ನಾಡಿಗೆ ನೀರು ಬಿಡಲು ಸಿಎಂ ಸೂಚನೆ

July 11, 2018

ಬೆಂಗಳೂರು: ರಾಜ್ಯಾದ್ಯಂತ ಉತ್ತಮ ಮಳೆಯಾ ಗುತ್ತಿದ್ದು, ಕಾವೇರಿ ಕೊಳ್ಳದ ಜಲಾಶಯ ಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ತಮಿಳು ನಾಡಿಗೆ ನೀರು ಬಿಡು ವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜುಲೈ ತಿಂಗಳಿನಲ್ಲಿ ತಮಿಳು ನಾಡಿಗೆ ಎಷ್ಟು ನೀರು ಬಿಡಬೇಕೋ ಅಷ್ಟು ನೀರನ್ನು ಬಿಡಿ ಎಂದು ಜಲ ಸಂಪನ್ಮೂಲ ಇಲಾಖೆಯ ಅಧಿಕಾರಿ ಗಳಿಗೆ ಸೂಚಿಸಿದ್ದಾರೆ. ಈಗಾಗಲೇ ಕರ್ನಾಟಕದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರು, ರಾಮನಗರ ಹಾಗೂ ಮಂಡ್ಯದಿಂದ ಸಾಕಷ್ಟು ನೀರು ತಮಿಳುನಾಡಿಗೆ ಹರಿದುಹೋಗುತ್ತದೆ.

ಇದರ ಜೊತೆಗೆ ಜಲಾಶಯದಿಂದಲೂ ಅಲ್ಪ ಪ್ರಮಾಣದ ನೀರು ತಮಿಳುನಾಡಿಗೆ ಹರಿಯಬಿಟ್ಟರೆ ಜುಲೈ ತಿಂಗಳಲ್ಲಿ ಬಿಡಬೇಕಾದ ನೀರಿನ ಪ್ರಮಾಣ ಸರಿಯಾಗುತ್ತದೆ. ಹೀಗಾಗಿ ಜುಲೈ ತಿಂಗಳಲ್ಲಿ ಬಿಡಬೇಕಾದ ನೀರನ್ನು ಬಿಡಬೇಕೆಂದು ಸಿಎಂ ಸೂಚಿಸಿದ್ದಾರೆ. ಸುಪ್ರೀಂಕೋರ್ಟ್ ಆದೇಶದ ಅನ್ವಯ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾದ ಬಳಿಕ ಜುಲೈ 7ರಂದು ನವದೆಹಲಿಯಲ್ಲಿ ಮೊದಲ ಸಭೆ ನಡೆಸಲಾಯಿತು. ತಿಂಗಳುವಾರು ಹಂಚಿಕೆ ಪೈಕಿ ಜುಲೈನಲ್ಲಿ 34 ಟಿಎಂಸಿ ನೀರನ್ನು ಕರ್ನಾಟಕ ಹರಿಸಬೇಕು ಎಂದು ಹೇಳಲಾಗಿತ್ತು.

Translate »