ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು ಕೈ ಕಾರ್ಯಕರ್ತರಿಗೆ ಕರೆ
ಮಂಡ್ಯ

ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು ಕೈ ಕಾರ್ಯಕರ್ತರಿಗೆ ಕರೆ

May 5, 2021

ಮಳವಳ್ಳಿ, ಮೇ 4- ಕೋವಿಡ್ ಸೋಂಕಿನ ಬಗ್ಗೆ ಎಚ್ಚರಿಕೆ ಇರಬೇಕು. ಅಲ್ಲದೇ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಮುಖಂಡರು ಹಾಗೂ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದರು.

ಪಟ್ಟಣದ ಅನಂತರಾಮ್ ಸರ್ಕಲ್ ಬಳಿ ಬೆಂಗಳೂರಿನಿಂದ ಚಾಮರಾಜನಗರಕ್ಕೆ ತೆರಳುವ ಮಾರ್ಗಮಧ್ಯೆ ಪಕ್ಷದ ಮುಖಂ ಡರು ಹಾಗೂ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿದ ಸಂದರ್ಭದಲ್ಲಿ ಮಾತನಾಡಿದ ಡಿಕೆಶಿ, ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಎಲ್ಲರೂ ಎಚ್ಚರಿಕೆಯಿಂದ ಇರಬೇಕು. ಹಾಗೆಯೇ ನಿಮ್ಮ ಅಕ್ಕಪಕ್ಕದ ಜನರಲ್ಲಿ ಅರಿವು ಮೂಡಿಸಿ, ಸರ್ಕಾರ ಸೋಂಕು ನಿಯಂತ್ರಿ ಸುವಲ್ಲಿ ವಿಫಲವಾಗಿದ್ದು, ಚಾಮರಾಜ ನಗರ ಜಿಲ್ಲೆಯ ದುರಂತ ನಮ್ಮ ಕಣ್ಣು ಮುಂದೆ ಇದ್ದು, ಆಸ್ಪತ್ರೆಗಳಲ್ಲಿ ಬೆಡ್ ಮತ್ತು ಆಕ್ಸಿಜನ್ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ದೂರಿದರು.

ಇದೇ ವೇಳೆಯಲ್ಲಿ ತಾಲ್ಲೂಕು ಪಂಚಾ ಯಿತಿ ಅಧ್ಯಕ್ಷ ಪಿ.ಪುಟ್ಟಸ್ವಾಮಿ, ಉಪಾಧ್ಯಕ್ಷ ಸಿ.ಮಾಧು, ಸದಸ್ಯ ವಿಶ್ವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಜೆ.ದೇವರಾಜು, ಎಸ್.ಪಿ.ಸುಂದರ್ ರಾಜ್, ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೃಷ್ಣಮೂರ್ತಿ, ಮುಖಂಡರಾದ ವೆಂಕಟೇಶ್, ರಮೇಶ್, ಕೃಷ್ಣ, ದಿಲೀಪ್ ಕುಮಾರ್, ಸೇರಿದಂತೆ ಹಲವರು ಇದ್ದರು.

ಭಾರತೀನಗರ ವರದಿ(ಅ.ಸತೀಶ್): ಆಕ್ಸಿಜನ್ ಕೊರತೆಯಿಂದ ಚಾಮರಾಜ ನಗರ ಜಿಲ್ಲಾಸ್ಪತ್ರೆಯಲ್ಲಿ 24 ಮಂದಿ ಸಾವಿ ಗೀಡಾಗಿದ್ದಾರೆ. ಇದಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದರು.

ಬೆಂಗಳೂರಿನಿಂದ ಚಾಮರಾಜನಗರಕ್ಕೆ ಹೋಗುವ ಮಾರ್ಗಮಧ್ಯೆ ಭಾರತೀ ನಗರದ ಭಾರತೀ ಕಾಲೇಜಿನ ಎದುರು ಕಾಂಗ್ರೆಸ್ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ಲಕ್ಷ್ಯತೆಯಿಂದ ಇಂದು ರಾಜ್ಯದಲ್ಲಿ ಕೊರೊನಾ ಅಬ್ಬರಿಸುತ್ತಿದೆ. ಇದನ್ನು ತಡೆಗಟ್ಟಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜನಸಾಮಾನ್ಯರನ್ನು ರಕ್ಷಿಸುವಲ್ಲಿ ಸರ್ಕಾರಗಳು ವಿಫಲವಾಗಿದೆ. ರಾಜ್ಯದ ಜನತೆ ಸರ್ಕಾರದ ಮೇಲೆ ನಂಬಿಕೆ ಕಳೆದುಕೊಂಡಿದೆ ಎಂದರು.

ಇದೇ ವೇಳೆ ಭಾರತೀನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಟ್ಟನಹಳ್ಳಿ ಎಲ್.ಶಿವಲಿಂಗೇ ಗೌಡ, ಜಿ.ಪಂ ಸದಸ್ಯ ಎ.ಎಸ್.ರಾಜೀವ್, ಮಾಜಿ ಸದಸ್ಯ ಚಂದೂಪುರ ಪಾಪಣ್ಣ, ತಾ.ಪಂ ಸದಸ್ಯ ಗಿರೀಶ್, ದೊಡ್ಡೇಗೌಡ, ಆರ್.ಸಿದ್ದಪ್ಪ, ವಿನಯ್‍ಹೊನ್ನೇಗೌಡ, ಮಾದರಹಳ್ಳಿ ಈರಣ್ಣ, ಕರಡಕೆರೆ ಮೊಳ್ಳೆನಿಂಗಣ್ಣ, ಹಾಗಲಹಳ್ಳಿ ಪುಟ್ಟಸ್ವಾಮಿ, ಇಂದ್ರ ಸೇರಿದಂತೆ ಇತರರಿದ್ದರು.

ಇದಕ್ಕೂ ಮೊದಲು ಕಾಂಗ್ರೆಸ್ ಮುಖಂ ಡರು ಸಾಮಾಜಿಕ ಅಂತರದೊಂದಿಗೆ ಮಾಸ್ಕ್ ಧರಿಸಿ ಡಿ.ಕೆ.ಶಿವಕುಮಾರ್ ಅವರನ್ನು ಅಭಿನಂದಿಸಿದರು. ಕೆ.ಎಂ.ದೊಡ್ಡಿ ಪೊಲೀಸರು ಡಿ.ಕೆ.ಶಿವಕುಮಾರ್ ಬರುವ ಮುನ್ನವೇ ಸಾಮಾಜಿಕ ಅಂತರವನ್ನು ಕಾಯ್ದು ಕೊಳ್ಳುವಂತೆ ಸೂಚನೆ ನೀಡಿದರು.

Translate »