ವಕೀಲರ ಸಂಘದ ಅಧ್ಯಕ್ಷರ ಮೇಲೆ ಹಲ್ಲೆ ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು
ಕೊಡಗು

ವಕೀಲರ ಸಂಘದ ಅಧ್ಯಕ್ಷರ ಮೇಲೆ ಹಲ್ಲೆ ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು

August 7, 2018

ಕುಶಾಲನಗರ: ಸೋಮವಾರಪೇಟೆ ತಾಲೂಕು ಪಂಚಾಯತಿ ಉಪಾಧ್ಯಕ್ಷರೂ ಆದ ವಕೀಲ ಸಂಘದ ಅಧ್ಯಕ್ಷ ಅಭಿಮನ್ಯುಕುಮಾರ್ ಮೇಲೆ ಭಾನುವಾರ ರಾತ್ರಿ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಪಟ್ಟಣದ ತಾಜ್ ಹೊಟೇಲ್ ಬಳಿ ಈ ಘಟನೆ ನಡೆದಿದೆ. ಹೋಟೆಲ್ ಬಳಿ ನಿಲ್ಲಿಸಿದ್ದ ಕಾರನ್ನು ತೆಗೆಯುವ ಸಂದರ್ಭ ಹಿಂಬದಿಯಲ್ಲಿ ಬೈಕ್ ಡಿಕ್ಕಿಯಾಗಿದೆ. ಇದರಿಂದ ಆಕ್ರೋಶಗೊಂಡ ಬೈಕ್ ಮಾಲೀಕ ಕಾರು ಚಾಲಕನ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಅಲ್ಲಿಯೇ ಇದ್ದ ಅಭಿಮನ್ಯುಕುಮಾರ್ ಜಗಳ ಬಿಡಿಸಿ ಸಮಾಧಾನ ಪಡಿಸಲು ಮುಂದಾದಾಗ ತಾಜುದ್ದೀನ್ ಮತ್ತು ಮಹಮ್ಮದ್ ರಿಜ್ವಾನ್ ಎಂಬುವರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಕುರಿತು ಕುಶಾಲನಗರ ನಗರ ಪೊಲೀಸ್ ಠಾಣೆಗೆ ಅಭಿಮನ್ಯುಕುಮಾರ್ ನೀಡಿದ ದೂರಿನ ಮೇರೆಗೆ ತಾಜುದ್ದೀನ್ ಮತ್ತು ಮಹಮ್ಮದ್ ರಿಜ್ವಾನ್ ವಿರುದ್ಧ ಕೇಸು ದಾಖಲಿಸಿಕೊಂಡಿರುವ ಠಾಣಾಧಿಕಾರಿ ಜಗದೀಶ್ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕಲಾಪ ಬಹಿಷ್ಕಾರ: ತಾಲೂಕು ವಕೀಲರ ಸಂಘದ ಅಧ್ಯಕ್ಷರ ಮೇಲೆ ಹಲ್ಲೆ ನಡೆಸಿ ರುವ ಘಟನೆಯನ್ನು ಖಂಡಿಸಿ ಕುಶಾಲನಗರ ವಕೀಲರ ಸಂಘ ನ್ಯಾಯಾಲಯ ಕಲಾಪವನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ವಕೀಲ ಸಂಘದ ಉಪಾಧ್ಯಕ್ಷ ವೆಂಕಟರಮಣ ರಾವ್, ಕಾರ್ಯದರ್ಶಿ ಕೆ.ಬಿ.ಮೋಹನ್, ಜಂಟಿ ಕಾರ್ಯ ದರ್ಶಿ ನಂದಕುಮಾರ್, ವಕೀಲ ಸುಧಾಕರ್, ಸಂತೋಷ್ ಕುಮಾರ್ ಇದ್ದರು.

Translate »