ಬೆಂಗಳೂರು, ಮೇ 21-ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಕೈಗೊಂಡಿದ್ದ ಲಾಕ್‍ಡೌನ್ 4ನೇ ಹಂತದ ನಿಯಮಗಳ ಬಗ್ಗೆ ಸರ್ಕಾರ ಸ್ಪಷ್ಟೀ ಕರಣ ನೀಡಿದೆ. ಮೇ 31ರವರೆಗೆ ಈ ನಿಯಮಗಳು ಜಾರಿಯಲ್ಲಿರಲಿವೆ. ಪ್ರತಿ ದಿನ ಬೆಳಿಗ್ಗೆ 7ರಿಂದ ರಾತ್ರಿ 7 ಗಂಟೆ ವರೆಗೆ ಅವಶ್ಯಕವಲ್ಲದ ಚಟುವಟಿಕೆಗಳ ವ್ಯಕ್ತಿಗಳ ಸಂಚಾರ ಕಟ್ಟುನಿಟ್ಟಾಗಿ ನಿಷೇಧ ಮಾಡಲಾಗಿದೆ. ಭಾನುವಾರ ಹೆಚ್ಚುವರಿ ಯಾಗಿ ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಪೂರ್ತಿ ದಿನ ಲಾಕ್‍ಡೌನ್ ಆಗಿರಲಿದೆ. ಈ ಅವಧಿಯಲ್ಲಿ 144 ಸೆಕ್ಷನ್ ಜಾರಿಗೆ ಸ್ಥಳೀಯ ಪ್ರಾಧಿಕಾರ ಆದೇಶ ಹೊರಡಿಸಿದೆ. ಭಾನುವಾರ ಮದುವೆ ಸಮಾ ರಂಭಗಳಿಗೆ ಅವಕಾಶ ನೀಡಲಾಗಿದೆ. ಸಂಪೂರ್ಣ ಲಾಕ್‍ಡೌನ್ ಇದ್ದರೂ ಮದುವೆ ಸಮಾರಂಭಕ್ಕೆ ಅವಕಾಶ ನೀಡುವ ಮೂಲಕ ಮಾರ್ಗಸೂಚಿ ಯಲ್ಲಿ ಸರ್ಕಾರ ಸ್ಪಷ್ಟಪಡಿಸಿದೆ. ಅನೇಕ ಸಾರ್ವಜನಿಕರು ಭಾನುವಾರ ದಂದು ಪೂರ್ಣ ದಿನದ ಲಾಕ್ ಡೌನ್ ಇರುವ ಹಿನ್ನೆಲೆಯಲ್ಲಿ ಈಗಾಗಲೇ ನಿಗದಿ ಪಡಿಸಿರುವಂತಹ ಮದುವೆ ಸಮಾರಂಭಗಳನ್ನು ನಡೆಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದೆ.
ಭಾನುವಾರದಂದು ಪೂರ್ಣ ದಿನದ ಲಾಕ್ ಡೌನ್ ಎಂದು ಆದೇಶಿಸಲಾಗಿರುತ್ತದೆ. ಆದರೆ ಮದುವೆ ಸಮಾರಂಭಗಳು ಈ ಹಿಂದೆಯೇ ನಿಗದಿಪಡಿಸಿರುವ ಹಿನ್ನೆಲೆಯಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಸಾಮಾಜಿಕ ಅಂತರವನ್ನು ಖಾತರಿಪಡಿಸಿಕೊಂಡು, ಗರಿಷ್ಠ ಅತಿಥಿಗಳ ಸಂಖ್ಯೆಯನ್ನು 50ಕ್ಕೆ ಸೀಮಿತಗೊಳಿಸಿ ರಾಷ್ಟ್ರೀಯ ನಿರ್ದೇ ಶನಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಸರಳವಾಗಿ ಮದುವೆ ಸಮಾರಂಭ ವನ್ನು ನಡೆಸಲು ಅನುಮತಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಿಗೆ ಸ್ಪಷ್ಟಪಡಿಸಲಾಗಿದೆ. ಇದಲ್ಲದೇ ಭಾನುವಾರದಂದು ಅವಶ್ಯ ಚಟುವಟಿಕೆ ಗಳಿಗೂ ಅವಕಾಶ ನೀಡಲಾಗಿದೆ ಎಂದು ಸರ್ಕಾರ ಬಿಡುಗಡೆ ಮಾಡಿದ ಮಾರ್ಗಸೂಚಿಯಲ್ಲಿ ಸರ್ಕಾರ ಸ್ಪಷ್ಟವಾಗಿ ತಿಳಿಸಿದೆ.