ಗುತ್ತಿಗೆದಾರನ ಮೇಲೆ ಮಾರಣಾಂತಿಕ ಹಲ್ಲೆ
ಕೊಡಗು

ಗುತ್ತಿಗೆದಾರನ ಮೇಲೆ ಮಾರಣಾಂತಿಕ ಹಲ್ಲೆ

September 22, 2018

ಕುಶಾಲನಗರ: ಪ್ರೇಮ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗುತ್ತಿಗೆದಾರನೊಬ್ಬನ ಮೇಲೆ ಯುವತಿಯ ಸಂಬಂಧಿಕರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಹಾರಂಗಿಯಲ್ಲಿ ನಡೆದಿದೆ.

ಗುತ್ತಿಗೆದಾರ ಗಿರೀಶ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಇವರು ತೆರಳುತ್ತಿದ್ದ ಕಾರನ್ನು ಅಡ್ಡಗಟ್ಟಿದ ಯುವತಿಯ ಸಂಬಂ ಧಿಕರಾದ ಶೇಖರ್ ಮತ್ತು ಗೌತಮ್ ಎಂಬು ವರು ಮಾರಕಾಸ್ತ್ರಗಳಿಂದ ಗಿರೀಶ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತೀವ್ರ ವಾಗಿ ಗಾಯಗೊಂಡಿದ್ದ ಗಿರೀಶ್ ಅವರಿಗೆ ಇಲ್ಲಿನ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿ ಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂ ರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Translate »