ಒಂದು ಜಿಲ್ಲೆ ಒಂದು ಉತ್ಪನ್ನ(ಬೆಳೆ) ತರಬೇತಿ: ಇಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಚಾಲನೆ
ಮೈಸೂರು

ಒಂದು ಜಿಲ್ಲೆ ಒಂದು ಉತ್ಪನ್ನ(ಬೆಳೆ) ತರಬೇತಿ: ಇಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಚಾಲನೆ

January 19, 2021

ಮೈಸೂರು, ಜ.18(ಆರ್‍ಕೆಬಿ)- ಅಸಂಘಟಿತ ವಲಯ ದಲ್ಲಿರುವ ಸಣ್ಣ ಆಹಾರ ಸಂಸ್ಕರಣಾ ಉದ್ದಿಮೆಗಳನ್ನು, ಅವುಗಳ ಸ್ಪರ್ಧಾತ್ಮ ಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರೈತರಿಗೆ ನೀಡುತ್ತಿರುವ ಒಂದು ಜಿಲ್ಲೆ ಒಂದು ಉತ್ಪನ್ನ(ಬೆಳೆ) ತರಬೇತಿ ಕಾರ್ಯಕ್ರಮಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಮಂಗಳ ವಾರ (ಜ.19) ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಸಿಎಫ್‍ಟಿಆರ್‍ಐ ಸಭಾಂ ಗಣದಲ್ಲಿ ಚಾಲನೆ ನೀಡಲಿದ್ದಾರೆ.

ಆತ್ಮ ನಿರ್ಭರ್ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಉದ್ದಿಮೆಗಳ ಮಂತ್ರಾಲ ಯವು ಪ್ರಧಾನಮಂತ್ರಿ ಸಣ್ಣ ಆಹಾರ ಸಂಸ್ಕರಣಾ ಉದ್ಯಮಗಳ ಕ್ರಮಬದ್ಧ ಗೊಳಿಸುವಿಕೆ ಯೋಜನೆಯನ್ನು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಅನು ಷ್ಠಾನಗೊಳಿಸಲು ಉದ್ದೇಶಿಸಿದೆ. ಅಸಂಘ ಟಿತ ವಲಯದಲ್ಲಿರುವ ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು, ಅವುಗಳ ಸ್ಪರ್ಧಾತ್ಮ ಕತೆಯನ್ನು ಹೆಚ್ಚಿಸುವುದು, ಅವುಗಳನ್ನು ಸಂಘಟಿತ ವಲಯಕ್ಕೆ ತರುವುದು, ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘ ಗಳು ಹಾಗೂ ಉತ್ಪಾದಕ ಸಹಕಾರಿ ಸಂಘಗಳಿಗೆ ಉತ್ತೇಜನ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಈ ಮೂಲಕ ಒಂದು ಜಿಲ್ಲೆ, ಒಂದು ಉತ್ಪನ್ನ ಅಥವಾ ಬೆಳೆಯನ್ನು ಪೆÇ್ರೀತ್ಸಾಹಿ ಸುವುದಾಗಿರುತ್ತದೆ. ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇಲಾಖೆಗಳು ಒಂದು ಜಿಲ್ಲೆ ಒಂದು ಉತ್ಪನ್ನ(ಬೆಳೆ) ಯೋಜನೆಯಡಿ ಉತ್ಪನ್ನಗಳನ್ನು ಗುರು ತಿಸಿ, ಈ ಉತ್ಪನ್ನದ ಮೌಲ್ಯವರ್ಧನೆ, ಸಂಸ್ಕ ರಣೆ, ಪ್ಯಾಕಿಂಗ್, ಬ್ರಾಂಡ್ ಅಭಿವೃದ್ಧಿ, ಮಾರುಕಟ್ಟೆಗೆ ಪೆÇ್ರೀತ್ಸಾಹಿಸಲು ರೈತರಿಗೆ ತರಬೇತಿ ನೀಡಲಾಗುತ್ತಿದೆ. ಹಣ್ಣು-ತರ ಕಾರಿ ಸಂಸ್ಕರಣೆ ಮತ್ತು ಮಾರುಕಟ್ಟೆಯ ನ್ನೊಳಗೊಂಡ ಮೊದಲ ತರಬೇತಿ ಮುಗಿ ದಿದ್ದು, ಒಟ್ಟು 10 ತರಬೇತಿಗಳು ಮಾರ್ಚ್ ವರೆಗೆ ನಡೆಯಲಿವೆ. ಜ.11ರಿಂದ 16 ರವರೆಗೆ ಒಂದು ತರಬೇತಿ ಮುಗಿದಿದ್ದು, ಜ.18ರಿಂದ 2ನೇ ತರಬೇತಿ ಆರಂಭ ಗೊಂಡಿದೆ. ಈ ಎರಡನೇ ತರಬೇತಿಯಲ್ಲಿ ಸಾಂಬಾರು ಮತ್ತು ತೋಟಗಾರಿಕಾ ಬೆಳೆಗಳ ಸಂಸ್ಕರಣೆ ಹಾಗೂ ಮಾರುಕಟ್ಟೆ ಕುರಿತು ತರಬೇತಿ ನೀಡಲಾಗುತ್ತಿದೆ. ಪ್ರತಿ ತಾಲೂಕಿನಿಂದ ಇಬ್ಬರು ರೈತರನ್ನು ಆಯ್ಕೆ ಮಾಡಿ ಒಂದು ಗುಂಪು ರಚಿಸಿ ಒಟ್ಟು 500 ಜನರಿಗೆ ತರಬೇತಿ ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದ್ದು, ಆರು ದಿನ ನಡೆಯುವ ಈ ತರಬೇತಿಯಲ್ಲಿ ಕೊನೆಯ ಎರಡು ದಿನಗಳನ್ನು ಮಾರ್ಕೆ ಟಿಂಗ್, ಬ್ರ್ಯಾಂಡಿಗಾಗಿ ತರಬೇತಿ ನೀಡಲಾಗುತ್ತಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಒಂದು ಬ್ಯಾಚ್‍ನಲ್ಲಿ 50 ರೈತರ ನ್ನೊಳಗೊಂಡಂತೆ ಒಟ್ಟು 500 ಆಯ್ದ ರೈತರಿಗೆ 10 ಬ್ಯಾಚ್‍ಗಳ ತರಬೇತಿ ಇದಾಗಿದೆ. ಚಾಮರಾಜನಗರ ಜಿಲ್ಲೆಗೆ ಅರಿಶಿನ, ಮೈಸೂರಿಗೆ ಬಾಳೆ, ಚಿಕ್ಕಮಗ ಳೂರು, ಉತ್ತರ ಕನ್ನಡ ಜಿಲ್ಲೆಗೆ ಸಾಂಬಾರು ಬೆಳೆ, ಗದಗಕ್ಕೆ ಬ್ಯಾಡಗಿ ಮೆಣಸಿನಕಾಯಿ, ತುಮಕೂರು, ರಾಮ ನಗರ, ಹಾಸನ ಜಿಲ್ಲೆಗಳಿಗೆ ತೆಂಗು, ಕೊಡಗಿಗೆ ಕಾಫಿ, ರಾಯಚೂರಿಗೆ ಗುಂಟೂರು ಮೆಣಸಿನಕಾಯಿ, ಶಿವಮೊಗ್ಗ ಜಿಲ್ಲೆಗೆ ಅನಾನಸ್ ಬೆಳೆ, ಬೀದರ್ ಜಿಲ್ಲೆಗೆ ಶುಂಠಿ ಬೆಳೆಯನ್ನು ತರಬೇತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

 

 

Translate »