ಬಸ್ಸಿನಲ್ಲೇ ಆತ್ಮಹತ್ಯೆಗೆ ಶರಣಾದ ಚಾಲಕ
ಮಂಡ್ಯ

ಬಸ್ಸಿನಲ್ಲೇ ಆತ್ಮಹತ್ಯೆಗೆ ಶರಣಾದ ಚಾಲಕ

June 9, 2018

ಮಂಡ್ಯ: ಖಾಸಗಿ ಬಸ್ಸಿನಲ್ಲಿ ನೇಣು ಬಿಗಿದುಕೊಂಡು ಚಾಲಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ನಗರದ ಸಮೀಪ ಚಿಕ್ಕಮಂಡ್ಯ ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್(22) ಆತ್ಮಹತ್ಯೆಗೆ ಶರಣಾದ ದುರ್ದೈವಿ.

ಕಾರ್ತಿಕ್ ಬಸ್ಸೊಂದನ್ನು ಲೀಸ್‍ಗೆ ಪಡೆದು ಓಡಿಸುತ್ತಿದ್ದರು. ಕಾರ್ತಿಕ್ ತಂದೆ-ತಾಯಿ ಬೆಂಗಳೂರಿನಲ್ಲಿ ನೆಲೆಸಿದ್ದರು. ರಾತ್ರಿ ಚಿಕ್ಕಮಂಡ್ಯ ಗ್ರಾಮದ ಶನಿದೇವರ ದೇವಸ್ಥಾನ ಬಳಿ ಬಸ್ ನಿಲ್ಲಿಸಿ ಅದರೊಳಗೆ ವಿಶ್ರಾಂತಿ ಪಡೆಯುತ್ತಿದ್ದರು. ಬೆಳಗ್ಗೆ ವೇಳೆಗೆ ಕಾರ್ತಿಕ್ ಬಸ್‍ನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಮಂಡ್ಯ ಸೆಂಟ್ರಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

Translate »