ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬೆಂಕಿ ಅವಘಡ
ಮೈಸೂರು

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬೆಂಕಿ ಅವಘಡ

July 17, 2022

ಬೆಂಗಳೂರು:ವಿಧಾನಸೌಧದ ಮೂರನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿನ ಎಸಿಗೆ ಶನಿವಾರ ಬೆಂಕಿ ಹೊತ್ತಿಕೊಂಡು ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣ ವಾಗಿತ್ತು. ಕೊಠಡಿ ಸಂಖ್ಯೆ ೩೩೪ರಲ್ಲಿ ರಾತ್ರಿ ೬.೪೦ರ ಸುಮಾರಿನಲ್ಲಿ ಘಟನೆ ನಡೆದಿದ್ದು, ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ತಿಳಿಸಲಾ ಯಿತು. ವಿಧಾನಸೌಧ ಆವರಣದಲ್ಲಿದ್ದ ಸಿಬ್ಬಂದಿಯೇ ಬೆಂಕಿ ನಂದಿಸಿದ್ದಾರೆ. ಯಾವುದೇ ಹಾನಿಯಾಗಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಹೀಗಾಗಿರಬಹುದು ಎಂದು ಶಂಕಿಸಲಾಗಿದೆ.

Translate »