ದೆಹಲಿಯ ಮೊದಲ ಕೊರೊನಾ ಪೀಡಿತ ವ್ಯಕ್ತಿ ಸಂಪೂರ್ಣ ಗುಣಮುಖ ಆಸ್ಪತ್ರೆಯಿಂದ ಡಿಸ್ಚಾರ್ಜ್
ಮೈಸೂರು

ದೆಹಲಿಯ ಮೊದಲ ಕೊರೊನಾ ಪೀಡಿತ ವ್ಯಕ್ತಿ ಸಂಪೂರ್ಣ ಗುಣಮುಖ ಆಸ್ಪತ್ರೆಯಿಂದ ಡಿಸ್ಚಾರ್ಜ್

March 16, 2020

ನವದೆಹಲಿ, ಮಾ.15- ರಾಷ್ಟ್ರ ರಾಜ ಧಾನಿ ನವದೆಹಲಿಯಲ್ಲಿ ಮೊದಲು ಕೊರೊನಾ ವೈರಸ್‍ಗೆ ತುತ್ತಾಗಿದ್ದ ವ್ಯಕ್ತಿ ಸಂಪೂರ್ಣವಾಗಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಪೂರ್ವ ದೆಹಲಿಯ ಮಯೂರ್ ವಿಹಾರ್ ನಿವಾಸಿಯಾಗಿದ್ದ 45 ವರ್ಷದ ವ್ಯಕ್ತಿ ಇಟಲಿ ದೇಶಕ್ಕೆ ಹೋಗಿ ಬಂದ ನಂತರ ಕೊರೊನಾ ವೈರಸ್ ಸೋಂಕು ಅವ ರಲ್ಲಿ ಕಾಣಿಸಿಕೊಂಡಿತ್ತು. ಈ ಮೂಲಕ ದೆಹಲಿಯಲ್ಲಿ ಮೊದಲ ಬಾರಿಗೆ ಕೊರೊನಾ ವೈರಸ್ ಕೇಸ್ ದಾಖಲಾಗಿತ್ತು. ಈಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ.

ಇಟಲಿಗೆ ಹೋಗಿ ಬಂದ ನಂತರ ಐಸೋಲೇಷನ್ ವಾರ್ಡಿಗೆ ಅಡ್ಮಿಟ್ ಆಗುವ ಮೊದಲು ಈ ವ್ಯಕ್ತಿ ಹಲವಾರು ಜನರೊಂದಿಗೆ ಸಂಪರ್ಕ ಹೊಂದಿದ್ದರು. ಜೊತೆಗೆ ಫೈವ್ ಸ್ಟಾರ್ ಹೋಟೆಲಿನಲ್ಲಿ ಅದ್ಧೂರಿಯಾಗಿ ಮಗನ ಹುಟ್ಟುಹಬ್ಬ ಕೂಡ ಮಾಡಿದ್ದರು. ಹಾಗಾಗಿ ದೆಹಲಿ ಯಲ್ಲಿ ಕೊರೊನಾ ಭೀತಿ ಜಾಸ್ತಿಯಾ ಗಿತ್ತು. ಸೋಂಕು ಕಂಡುಬಂದ ನಂತರ ಹಲವು ದಿನಗಳಿಂದ ದೆಹಲಿಯ ಸಫ್ದ ರ್ಜಂಗ್ ಆಸ್ಪತ್ರೆಯ ಪ್ರತ್ಯೇಕ ವಾರ್ಡಿ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ನೀಡಿರುವ ಸಫ್ದರ್ಜಂಗ್ ಆಸ್ಪತ್ರೆಯ ವೈದ್ಯರು,

ದೆಹಲಿಯಲ್ಲಿ ಮೊದಲು ಕೊರೊನಾ ವೈರಸ್‍ಗೆ ತುತ್ತಾಗಿದ್ದ ವ್ಯಕ್ತಿ ಸಂಪೂರ್ಣ ಗುಣಮುಖ ರಾಗಿದ್ದಾರೆ. ಅವರಲ್ಲಿ ಈಗ ಯಾವುದೇ ರೀತಿಯ ಕೊರೊನಾ ವೈರಸ್ ಸೋಂಕಿನ ಲಕ್ಷಣ ಕಾಣಿಸಿಕೊಂಡಿಲ್ಲ. ಅವರನ್ನು ಇಂದು ಡಿಸ್ಚಾರ್ಜ್ ಮಾಡುತ್ತಿದ್ದೇವೆ. ಜೊತೆಗೆ ಮನೆಯಲ್ಲಿ ಅವರ ಆರೋಗ್ಯದ ಬಗ್ಗೆ ನಮಗೆ ಆಗಾಗ ಮಾಹಿತಿ ನೀಡಲು ಕುಟುಂಬಸ್ಥರಿಗೆ ತಿಳಿಸಿದ್ದೇವೆ. ನಮ್ಮ ಸಿಬ್ಬಂದಿ ಕೂಡ ಕುಟುಂಬದರ ಜೊತೆ ಸಂಪರ್ಕದಲ್ಲಿ ಇದ್ದಾರೆ ಎಂದು ಹೇಳಿದ್ದಾರೆ. ಈ ವ್ಯಕ್ತಿ ಮಾರ್ಚ್ 1ರಂದು ಐಸೋಲೇಷನ್ ವಾರ್ಡಿಗೆ ದಾಖಲಾಗುವ ಮುನ್ನ ಸುಮಾರು 100 ಜನರ ಸಂಪರ್ಕ ಹೊಂದಿದ್ದರು ಎಂದು ತಿಳಿದು ಬಂದಿತ್ತು. ಈತನ ಜೊತೆ ಸಂಪರ್ಕ ಹೊಂದಿದ್ದ ಎಲ್ಲರನ್ನೂ ಗುರುತಿಸಿ ಪರೀಕ್ಷೆ ಮಾಡಲಾಗಿತ್ತು. ಇತ್ತೀಚೆಗೆ ದೆಹಲಿಯಲ್ಲಿ ಕೊರೊನಾ ವೈರಸ್‍ನಿಂದ ಓರ್ವ ವೃದ್ಧೆ ಸಾವನ್ನಪ್ಪಿದ್ದರು.

Translate »