ಉತ್ತಮ ಸಮಾಜಕ್ಕೆ ಪ್ರತಿಯೊಬ್ಬರಿಗೂ ಶಿಕ್ಷಣ ಅಗತ್ಯ
ಮಂಡ್ಯ

ಉತ್ತಮ ಸಮಾಜಕ್ಕೆ ಪ್ರತಿಯೊಬ್ಬರಿಗೂ ಶಿಕ್ಷಣ ಅಗತ್ಯ

December 19, 2019

ಭಾರತೀನಗರ, ಡಿ.18(ಅ.ಸತೀಶ್)- ವಿದ್ಯೆ ಇಲ್ಲದಿದ್ದರೆ ಬದುಕು ಅತಂತ್ರವಾಗು ತ್ತದೆ. ಹಾಗಾಗಿ, ಉತ್ತಮ ಸಮಾಜ ನಿರ್ಮಾ ಣಕ್ಕೆ ಪ್ರತಿಯೊಬ್ಬರು ಶಿಕ್ಷಣ ಪಡೆಯಬೇಕು ಎಂದು ನಿವೃತ್ತ ಶಿಕ್ಷಕ ಮಡೇನಹಳ್ಳಿ ಎಂ.ಸಿ.ದಾಸಪ್ಪ ಸಲಹೆ ನೀಡಿದರು.

ಇಲ್ಲಿಗೆ ಸಮೀಪದ ಮಡೇನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಪರಿಸರ ಜಾಗೃತಿ ವೇದಿಕೆಯಿಂದ ನಡೆದ ‘ಪರಿಸರ ಉಳಿಸಿ ಆಂದೋಲನ’ದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿ ದೆಸೆಯಿಂದಲೇ ಉತ್ತಮ ಗುಣ ಗಳನ್ನು ಮೈಗೂಡಿಸಿಕೊಂಡು ಶಿಕ್ಷಣ ಪಡೆ ಯುವ ಜೊತೆಗೆ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಎಲ್ಲರು ಕೈ ಜೋಡಿಸಬೇಕು. ಗುರು-ಹಿರಿಯರನ್ನು ಗೌರವದಿಂದ ಕಾಣಬೇಕು. ಶಿಸ್ತನ್ನು ಜೀವನದಲ್ಲಿ ಅಳವಡಿಸಿಕೊಳ್ಳ ಬೇಕು ಎಂದು ಕಿವಿಮಾತು ಹೇಳಿದರು.

ಪರಿಸರ ಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ಅಣ್ಣೂರು ಸತೀಶ್ ಮಾತನಾಡಿ, ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಮುಂದಾಗಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪರಿಸರ ಅಸಮತೋಲನ ಉಂಟಾ ಗುವ ಸಾಧ್ಯತೆಯಿದೆ. ಆದ್ದರಿಂದ ಪ್ರತಿ ಯೊಬ್ಬರು ಗಿಡ ನೆಡುವುದರ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದರು.

ಈ ವೇಳೆ ಎಸ್‍ಡಿಎಂಸಿ ಅಧ್ಯಕ್ಷೆ ಶಕುಂತಲಾ, ಮಾಜಿ ಅಧ್ಯಕ್ಷ ಸಿದ್ದಲಿಂಗಸ್ವಾಮಿ, ಗ್ರಾಪಂ ಸದಸ್ಯ ಎಂ.ಜಿ.ರುದ್ರಮುನಿಸ್ವಾಮಿ, ಪರಿಸರ ಜಾಗೃತಿ ವೇದಿಕೆಯ ಉಪಾಧ್ಯಕ್ಷ ಶಂಕರೇ ಗೌಡ, ನಿರ್ದೇಕರಾದ ಅನುಪಮ, ಯೋಗೇಶ್, ರಘು, ಆನಂದ್, ಸಿದ್ದರಾಜು, ಶಿವ ಕುಮಾರ್, ಮುಖ್ಯಶಿಕ್ಷಕ ಟಿ.ಸಿ.ಜಗದೀಶ್, ಪುಟ್ಟರಾಮ ರಾಜೇ ಅರಸು, ಮಹಮದ್ ಇಸಾಕ್ ಭಗವಾನ್, ವಿಜಯ್, ಎಂ. ಸವಿತಾ, ಎಂ.ಸಿ.ಗಾಯಿತ್ರಿ, ಎಸ್.ಎಂ.ಶಿವ ಕುಮಾರಿ ಸೇರಿದಂತೆ ಇತರರಿದ್ದರು.

Translate »