ಬೆಂಗಳೂರು, ಸೆ.22(ಕೆಎಂಶಿ)- ಕೊರೊನಾದಂತಹ ಕಠಿಣ ಪರಿಸ್ಥಿತಿಯಲ್ಲಿ ಜನರ ಕಷ್ಟಗಳಿಗೆ ನಮ್ಮ ಹೃದಯ ಮಿಡಿಯಬೇಕಿತ್ತು. ಆದರೆ ರಾಜ್ಯ ಸರ್ಕಾರ ರೈತರು, ಬಡವರು, ಕಾರ್ಮಿಕರ ವಿಚಾರದಲ್ಲಿ ಅಮಾನವೀಯ ವಾಗಿ ನಡೆದುಕೊಂಡಿದ್ದು, ರಾಜ್ಯದ ಜನ ಇವರನ್ನು ಕ್ಷಮಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಧಾನಸಭೆಯಲ್ಲಿ ಹರಿಹಾಯ್ದಿದ್ದಾರೆ.
ವಿಧಾನಸಭೆಯಲ್ಲಿ ನಿಯಮ 69ರಡಿ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರ್ಕಾರದ ವೈಫಲ್ಯ, ಅಕ್ರಮ, ಭ್ರಷ್ಟಾಚಾರವನ್ನು ಪ್ರಸ್ತಾಪಿಸಿ ಟೀಕಾ ಪ್ರಹಾರ ನಡೆಸಿದರು.
ಕೊರೊನಾ ಪರಿಸ್ಥಿತಿಯನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಅವರು ಇದನ್ನು ದೇವರ ಆಟ ಎಂದು ಹೇಳಿದ್ದಾರೆ. ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರ ಅಂತಾ ಇದ್ದ ಮೇಲೆ ಅದಕ್ಕೆ ಅದರದೇ ಆದ ಜವಾಬ್ದಾರಿ, ನಮಗೆ ನಮ್ಮದೇ ಆದ ಜವಾಬ್ದಾರಿ ಇರುತ್ತದೆ. ಕಳೆದ ಅಧಿವೇಶನ ನಡೆಯುವಾಗ ಈ ಪರಿಸ್ಥಿತಿ ಎದುರಾ ಗಿತ್ತು. ದೇಶದ ಪ್ರಧಾನಿಗಳು ಕೇವಲ ನಾಲ್ಕು ಗಂಟೆ ಕಾಲಾವಕಾಶ ನೀಡಿ ಲಾಕ್‍ಡೌನ್ ಹೇರಿದರು. ದೀಪ ಹಚ್ಚಲು, ಗಂಟೆ ಹೊಡೆಯಲು ನಾಲ್ಕು ದಿನ ಸಮಯ ಕೊಟ್ಟರು. ನಾವು ಅದನ್ನು ಸ್ವೀಕರಿಸಿದೆವು.
ರಾಜ್ಯದ ಎಲ್ಲ ಪಕ್ಷಗಳು ಸರ್ಕಾರಕ್ಕೆ ಸಹಕಾರ, ಬೆಂಬಲ ನೀಡಿವೆ. ಪ್ರಧಾನ ಮಂತ್ರಿಗಳು 21 ದಿನಗಳಲ್ಲಿ ಈ ಯುದ್ಧ ಗೆಲ್ಲುತ್ತೇವೆ ಅಂತಾ ಹೇಳಿದ್ದರೂ ನಾವು ಸಹಕಾರ ನೀಡುತ್ತಲೇ ಬಂದಿದ್ದೇವೆ. ಆದರೆ ಆಡಳಿತರೂಢ ಬಿಜೆಪಿಯವರು ವಿವಿಧ ಇಲಾಖೆಗಳು, ಅಕ್ಷಯ ಪಾತ್ರೆ ಯವರು, ಇನ್ಫೋಸಿಸ್ ಸಂಸ್ಥೆಯವರು ಜನರಿಗೆ ಕೊಟ್ಟ ಆಹಾರ ಕಿಟ್‍ಗಳ ಮೇಲೆ ತಮ್ಮ ಫೋಟೋ ಹಾಕಿಕೊಂಡು ಹಂಚಿದಿ ರಲ್ಲಾ… ಯಾವ ವ್ಯವಸ್ಥೆ ಯಲ್ಲಿ ಈ ಸರ್ಕಾರ ನಡೆಯು ತ್ತಿದೆ. ಆನೇಕಲ್‍ನಲ್ಲಿ ಬಾಣಂತಿ ಯರು, ಮಕ್ಕಳ ಪೌಷ್ಟಿಕ ಆಹಾರ ಕಿಟ್ ಮೇಲೆ ಬಿಜೆಪಿ ಚಿಹ್ನೆ ಹಾಕಿ ಅಕ್ರಮ ಮಾಡಿದರಲ್ಲ ಇವರ ವಿರುದ್ಧ ಯಾಕೆ ಕ್ರಮ ತೆಗೆದುಕೊಳ್ಳಲಿಲ್ಲ..? ಇದು ಒಂದು ಸರ್ಕಾರನಾ? ಎಂದು ವಾಗ್ದಾಳಿ ಮಾಡಿದರು.
ವಿರೋಧ ಪಕ್ಷದವರು ಅಕ್ರಮದ ಬಗ್ಗೆ ಆರೋಪ ಮಾಡಿದಾಗ ನೀವು ಕ್ರಮ ಜರುಗಿಸಲಿಲ್ಲ ಎಂದರೆ, ಈ ಅಕ್ರಮದಲ್ಲಿ ನೀವೂ ಭಾಗಿಯಾಗಿದ್ದೀರಿ ಎಂಬುದನ್ನು ತೋರಿಸುತ್ತದೆ. ಹೂವು, ತರಕಾರಿ, ಹಣ್ಣು ಬೆಳೆದ ರೈತರಿಗೆ ಮಾರುಕಟ್ಟೆ ಕಲ್ಪಿಸಿದ್ದೇವೆ ಎಂದು ಹೇಳಿದ್ದೀರಿ. ಎಷ್ಟು ರೈತರ ಬೆಳೆ ಖರೀದಿ ಮಾಡಿದ್ದೀರಿ, ಎಷ್ಟು ರೈತರಿಗೆ ಮಾರುಕಟ್ಟೆ ಕಲ್ಪಿಸಿದ್ದೀರಿ, ಎಷ್ಟು ರೈತರಿಗೆ ಪರಿಹಾರ ಕಲ್ಪಿಸಿಕೊ ಟ್ಟಿದ್ದೀರಿ? ಕೃಷಿ ಸಚಿವರು ಉತ್ತರ ನೀಡಲಿ. ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆಯಾಗಲು ಬಿಡಲ್ಲ ಅಂತಾ ಯಡಿಯೂರಪ್ಪನವರು ಹೇಳಿಕೆ ನೀಡಿ ದರು. ಆದೇಶ ಹೊರಡಿಸಿದರು. ಆದರೆ ಎಷ್ಟು ಅಧಿಕಾರಿಗಳು ಹೋಗಿ ಬೆಳೆ ನಷ್ಟದ ಸಮೀಕ್ಷೆ ಮಾಡಿದ್ದಾರೆ? ಎಂದು ಪ್ರಶ್ನೆಗಳ ಸುರಿಮಳೆಗೈದರು.
ಸರ್ಕಾರ ಘೋಷಣೆ ಮಾಡಿದ ಪ್ಯಾಕೇಜ್ ಎಷ್ಟು ಜನಕ್ಕೆ ತಲುಪಿದೆ? ಈ ಬಗ್ಗೆ ಮಾಹಿತಿ ಪಡೆಯೋಣ ಎಂದರೆ ಕಾರ್ಮಿಕ ಸಚಿವರು ಇಲ್ಲಿ ಇಲ್ಲ. ಇವತ್ತಿನವರೆಗೂ ಶೇ.10-20 ರಷ್ಟು ಜನರಿಗೆ ಈ ಪರಿಹಾರದ ಹಣ ತಲುಪಿಲ್ಲ. ಹಳ್ಳಿಯಲ್ಲಿ ರುವ ಕ್ಷೌರಿಕನಾಗಲಿ, ಚಾಲಕನಾಗಲಿ ಮೋಸ ಮಾಡಲು ಸಾಧ್ಯವಾ? ಸರ್ಕಾರ ತನ್ನ ಸಿಬ್ಬಂದಿ ಬಳಸಿಕೊಂಡು ಸಮೀಕ್ಷೆ ಮಾಡಿ ಅವರಿಗೆ ಸ್ಥಳದಲ್ಲೇ ಪರಿಹಾರ ಚೆಕ್ ನೀಡಿ ಫೋಟೋ ತೆಗೆದುಕೊಳ್ಳಲು ಏಕೆ ಸಾಧ್ಯವಾಗಲಿಲ್ಲ ಎಂದರು.