ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಅನರ್ಹ ಶಾಸಕ ಹೆಚ್.ವಿಶ್ವನಾಥ್ ದೆಹಲಿಗೆ ಪ್ರಯಾಣ
ಮೈಸೂರು

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಅನರ್ಹ ಶಾಸಕ ಹೆಚ್.ವಿಶ್ವನಾಥ್ ದೆಹಲಿಗೆ ಪ್ರಯಾಣ

August 22, 2019

ಮೈಸೂರು,ಆ.21(ಆರ್‍ಕೆಬಿ)- ಅನರ್ಹ ಶಾಸಕ ಅಡಗೂರು ಹೆಚ್.ವಿಶ್ವನಾಥ್ ಅವರು ಬುಧವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಬಳಿಕ ದೆಹಲಿ ಯತ್ತ ಪ್ರಯಾಣ ಬೆಳೆಸಿದರು.

ಮಾಜಿ ಸಚಿವ, ಕೆ.ಆರ್.ನಗರ ಶಾಸಕ ಸಾ.ರಾ. ಮಹೇಶ್ ಬುಧವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಬೆನ್ನಲ್ಲೇ ಹೆಚ್. ವಿಶ್ವನಾಥ್ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಸುಪ್ರೀಕೋರ್ಟ್‍ನಲ್ಲಿ ಅನರ್ಹತೆಯನ್ನು ಪ್ರಶ್ನಿಸಿ ಹಾಕಿರುವ ಅರ್ಜಿಯ ವಿಚಾರದ ಬಗ್ಗೆ ವಕೀಲರೊಂದಿಗೆ ಚರ್ಚಿಸಲು ಅವರು ದೆಹಲಿಗೆ ತೆರಳಿದ್ದಾರೆಂದು ಹೇಳಲಾಗಿದೆ. ವಿಶ್ವನಾಥ್ ಯಾವುದೇ ಆಮಿಷಕ್ಕೆ ಬಲಿಯಾಗಿಲ್ಲ ಎನ್ನುವು ದಾದರೆ ಅವರ ನೆಚ್ಚಿನ ಕಪ್ಪಡಿ ದೇವಾಲಯಕ್ಕೆ ಬಂದು ಪ್ರಮಾಣ ಮಾಡಲಿ, ಅವರೇ ನಿಗದಿಪಡಿಸುವ ದೇವಾಲಯಕ್ಕೆ ಬರಲಿ, ಪ್ರಮಾಣ ಮಾಡಲಿ, ಯಾವುದೇ ಆಮಿಷಕ್ಕೆ ಬಲಿಯಾಗಿಲ್ಲ ಎಂದು ಪ್ರಮಾಣ ಮಾಡಿದರೆ ನಾನು ರಾಜಕೀಯ ಜೀವನದಿಂದಲೇ ನಿವೃತ್ತಿ ಹೊಂದುವುದಾಗಿ ಸಾ.ರಾ.ಮಹೇಶ್ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

Translate »